ಶಿವಮೊಗ್ಗ,ಆ.24:

ಜಿಲ್ಲೆಯ ಕೊರೊನಾ ಮಹಾಮಾರಿಯ ನರ್ತನದ ಮುಂದೆ ಜನಸಾಮಾನ್ಯ ಸೊರಗುತ್ತಿದ್ದಾನೆ.
ಜಿಲ್ಲಾ ವರದಿ ಪ್ರಕಾರ ಇಂದು 163 ಪಾಸಿಟಿವ್ ಪ್ರಕರಣ ಕಾಣಿಸಿಕೊಂಡಿದೆ. ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 5991 ಎಂದು ಜಿಲ್ಲಾ ಹೆಲ್ತ್ ಬುಲಿಟಿನ್ ಪ್ರಕಟಿಸಿದೆ.
ಇಂದು ಸಹ ಸೋಂಕಿನಿಂದ 5 ಜನ ಸಾವುಕಂಡಿದ್ದು, ಇದರಿಂದ ಜಿಲ್ಲೆಯಲ್ಲಿ ಒಟ್ಟು ಸಾವಿನ ಸಂಖ್ಯೆ 102 ಕ್ಕೇರಿದೆ. ಜಿಲ್ಲೆಯಲ್ಲಿ ಇದುವರೆಗೂ 1302 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, 949 ಜನರಿಗೆ ನೆಗೆಟಿವ್ ಎಂದು ವರದಿ ಬಂದಿದೆ. 5991 ಜನರಿಗೆ ಕೊರೋನ ಪಾಸಿಟಿವ್ ಎಂದು ವರದಿ ಪ್ರಕಟವಾಗಿದೆ. ಇಂದು 348 ಜನ ಸೋಂಕಿನಿಂದ ಗುಣಮುಖರಾಗಿ ಮೆಗ್ಗಾನ್ ಮತ್ತು ಕೋವಿಡ್ ಕೇರ್ ಸೆಂಟರ್ ನಿಂದ ಬಿಡುಗಡೆಗೊಂಡಿದ್ದಾರೆ.
ಇದರಿಂದ ಒಟ್ಟು ಗುಣಮುಖರಾಗಿರುವ ಸಂಖ್ಯೆಯೂ ಸಹ 3974 ಕ್ಕೇರಿದೆ. 203 ಜನ ಕೊರೋನ ಸೋಂಕಿತರು ಮೆಗ್ಗಾನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 525 ಜನ ಕೊರೋನ ಕೇರ್ ಸೆಂಟರ್ ನಲ್ಲಿ, 272 ಜನರಿಗೆ ಖಾಸಗಿ ಆಸ್ಪತ್ರೆಗಳಲ್ಲಿ, 815 ಜನ ಮನೆಯಲ್ಲಿ ಐಸೋಲೇಷನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಯುರ್ವೇದಿಕ್ ಕಾಲೇಜಿನ ಆಸ್ಪತ್ರೆಯಲ್ಲಿ 103 ಜನ ಚಿಕಿತ್ಸೆ ಪಡೆಯುತ್ತಿದ್ದು ಒಟ್ಟು ಸಕ್ರಿಯೆಗೊಂಡ ಕೊರೋನ ಪಾಸಿಟಿವ್ ಸಂಖ್ಯೆ 1915 ಎಂದು ಬುಲಿಟಿನ್ ತಿಳಿಸಿದೆ.


ಸೋಂಕಿನ ಹೆಚ್ಚಳದಿಂದಾಗಿ ಕಂಟೈನ್ಮೆಂಟ್ ಜೋನ್ ಗಳು ಸಹ ಹೆಚ್ಚಾಗಿವೆ. ನಿನ್ನೆಯ ವರೆಗೆ 2317 ಕಂಟೈನ್ಮೆಂಟ್ ಜೋನ್ ಗಳಿದ್ದ ಜಿಲ್ಲೆಯಲ್ಲಿ ಇಂದು 2475 ಕ್ಕೇರಿದೆ. 814 ಡಿನೋಟಿಫೈಡ್ ಕಂಟೈನ್ಮೆಂಟ್ ಜೋನ್ ಗಳು 841 ಎಂದು ಬುಲಿಟಿನ್ ಪ್ರಕಟಿಸಿವೆ.
ತಾಲೂಕುವಾರು ಹೀಗಿವೆ.
ಜಿಲ್ಲೆಯಲ್ಲಿ 163 ಕೊರೋನ ಪಾಸಿಟಿವ್ ಎಂದು ಪ್ರಕಟಗೊಂಡ ಬೆನ್ನಲ್ಲೇ ತಾಲೂಕವಾರು ಪತ್ತೆಯಾಗಿರುವ ಬಗ್ಗೆ ಮಾಹಿತಿಗಳು ಹೀಗಿವೆ.

ಶಿವಮೊಗ್ಗ ನಗರ ಮತ್ತು ತಾಲೂಕಿನಲ್ಲಿ-94 ಭದ್ರಾವತಿಯಲ್ಲಿ-24, ಶಿಕಾರಿಪುರ-17, ತೀರ್ಥಹಳ್ಳಿ-08, ಸಾಗರದಲ್ಲಿ 08 ಹಾಗೂ ಸೊರಬದಲ್ಲಿ 04 ಪ್ರಕರಣಗಳು ಪತ್ತೆಯಾದರೆ, ಇತರೆ ಜಿಲ್ಲೆಯಿಂದ ಬಂದು ಶಿವಮೊಗ್ಗದಲ್ಲಿ ಚಿಕಿತ್ಸೆ ಪಡೆಯುತ್ತಿರುವವರು 8 ಜನ ಎಂದು ಹೆಲ್ತ್ ಬುಟಿಲಿಟಿನ್ ಪ್ರಕಟಿಸಿದೆ.
ರಾಜ್ಯ ವರದಿ ಪ್ರಕಾರ ಇಂದು 220 ಜನರಿಗೆ ಸೊಂಕು ಕಾಣಿಸಿಕೊಂಡಿದ್ದು ಎಲ್ಲಾ ಅಂಕಿ ಅಂಶಗಳು ಒಂದಕ್ಕೊಂದು ಹೋಲಿಕೆಯಿಲ್ಲ. ಎರಡೂ ವರದಿ ಕಳಿಸಿದ್ದು ನಿರ್ಣಯ ನಿಮ್ಮದಾಗಿದೆ. ಅಂಕಿ ಅಂಶ ಮಾಹಿತಿ ಪಟ್ಟಿಯಲ್ಲಿ ನೋಡಿ

By admin

ನಿಮ್ಮದೊಂದು ಉತ್ತರ

error: Content is protected !!