ಇತ್ತೀಚೆಗೆ ನಡೆದ 545 ಪೋಲಿಸ್ ಸಬ್ಇನ್ಸ್ಪೆಕ್ಟರ್ ಹುದ್ದೆಗೆ ಪರೀಕ್ಷಾ ಪ್ರಕರಣದಲ್ಲಿ ಭಾಗಿಯಾಗಿರುವ ಕೆಲವು ಆರೋಪಿಗಳನ್ನು ಭ್ರಷ್ಟರನ್ನು ಮಟ್ಟ ಹಾಕುವವರೆಗೂ ನಾನು ವಿಶ್ರಮಿಸುವುದಿಲ್ಲ. ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಗುಡುಗಿದ್ದಾರೆ.
ಇಂದು ಬೆಳಗಾವಿಯ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲಾದ ನಿಪ್ಪಾಣಿ ಶಹರ ಮತ್ತು ಗ್ರಾಮೀಣ ಪೊಲೀಸ್ ಠಾಣೆಗಳನ್ನು ಇಂದು ಉದ್ಘಾಟಿಸಿ ಮಾತಾನಾಡಿದರು. ಕೆಲವು ಸಚಿವರು, ಪಿಎಸ್ಐ ಹಗರಣದ ತನಿಖೆ ಯಾವುದೇ ಹಸ್ತಕ್ಷೇಪ ಇಲ್ಲದೆ, ಅತ್ಯಂತ ಪಾರದರ್ಶಕವಾಗಿ ನಡೆಯುತ್ತಿದೆ ಎಂದರು.
ತನಿಖೆಯು ಅತ್ಯಂತ ನಿಷ್ಪಕ್ಷಪಾತ ವಾಗಿ ನಡೆಯುತ್ತಿದೆ. ಈ ಪ್ರಕರಣದಲ್ಲಿ ಯಾರೆ ಬಾಗಿಯಾಗಿದರು ಸುಮ್ಮನೇ ಬಿಡುವುದಿಲ್ಲ .ಕಾಂಗ್ರೆಸ್ ನಾಯಕರು, ಹತಾಶರಾಗಿ ನ್ಯಾಯಾಂಗ ತನಿಖೆಗೆ ಒತ್ತಾಯಿಸುತ್ತಿದ್ದಾರೆ. ಕಾಂಗ್ರೆಸ್ ಸರಕಾರದ ಅವಧಿಯಲ್ಲಿ, ಹಲವಾರು ಪರಕರಣಗಳನ್ನು ಸಿಐಡಿ ತನಿಖೆಗೆ ವಹಿಸಲಾಗಿತ್ತು. ಹಲವಾರು ದೂರುಗಳ ಬಗ್ಗೆ ಎಫ್ ಐಆರ್ಕೂಡ ದಾಖಲಾಗಿಲ್ಲ,
ಎಫ್ಐಆರ್ ಆದ ಪ್ರಕರಣಗಳು ಚಾರ್ಜ್ ಶೀಟ್ ಸಲ್ಲಿಸಲಾಗಿಲ್ಲ, ಆದರೆ ಈಗ ಪಿಎಸ್ ಐ ನೇಮಕ ಪ್ರಕರಣದಲ್ಲಿ ಪ್ರಾಮಾಣಿಕವಾಗಿ ತನಿಖೆ ಆಗುತ್ತಿರುವ ವಿಷಯದಲ್ಲಿ ನಮ್ಮ ಸರಕಾರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದರು.