ಶಿವಮೊಗ್ಗ

ಜಿಲ್ಲೆಯಲ್ಲಿ ಸುಮಾರು 200 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ4 ರೈಲ್ವೇ ಮೇಲ್ಸೇತುವೆ ಹಾಗೂ2 ರೈಲ್ವೇ ಅಂಡರ್‌ಪಾಸ್ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ, ಸಾರ್ವಜನಿಕ ಸಂಚಾರಕ್ಕೆ ಅನುಕೂಲ ಮಾಡಿಕೊಡುವಂತೆ ಸಂಸದ ಬಿ.ವೈ.ರಾಘವೇಂದ್ರ ಅವರು ರೈಲ್ವೇ ಕಾಮಗಾರಿಗಳ ಗುತ್ತಿಗೆದಾರರಿಗೆ ಸೂಚಿಸಿದರು.
ಇಂದು ಭದ್ರಾವತಿ ಸಮೀಪದ ಕಡದಕಟ್ಟೆ, ಶಿವಮೊಗ್ಗದ ವಿದ್ಯಾನಗರ, ಅಕ್ಕಮಹಾದೇವಿ ವರ್ತುಲ ಹಾಗೂ ಕಾಶೀಪುರಗಳಲ್ಲಿ ನಿರ್ಮಾಣಗೊಳ್ಳುತ್ತಿರುವ ರೈಲ್ವೇ ಮೇಲ್ಸೇತುವೆ ಕಾಮಗಾರಿಗಳನ್ನು ಸಂಬಂಧಿಸಿದ ಇಲಾಖಾಧಿಕಾರಿಗಳು ಹಾಗೂ ಗುತ್ತಿಗೆದಾರರೊಂದಿಗೆ ಸ್ಥಳ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳಿಗೆ ವಿವರ ನೀಡಿ ಮಾತಾನಾಡಿದರ.


ಶಿವಮೊಗ್ಗ-ಭದ್ರಾವತಿ ನಗರಗಳಲ್ಲಿ ಭವಿಷ್ಯದ ಶಿವಮೊಗ್ಗ ಜಿಲ್ಲೆಯನ್ನು ಗಮನದಲ್ಲಿಟ್ಟುಕೊಂಡು, ಜನಸಂಖ್ಯೆಗೆ ಅನುಗುಣವಾಗಿ ಹೆಚ್ಚುತ್ತಿರುವ ವಾಹನ ಸಂಚಾರ ದಟ್ಟಣೆ, ಅಪಘಾತಗಳನ್ನು ತಪ್ಪಿಸುವಲ್ಲಿ ಪರ್ಯಾಯ ಕ್ರಮವಾಗಿ ರಸ್ತೆ, ಮೇಲ್ಸೇತುವೆ, ವರ್ತುಲ ರಸ್ತೆ ಮುಂತಾದ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ತುಂಗಾ ನದಿಗೆ ೨೦ಕೋಟಿ ವೆಚ್ಚದಲ್ಲಿ ಮತ್ತೊಂದು ಸೇತುವೆಯನ್ನು ನಿರ್ಮಿಸಲಾಗುತ್ತಿದೆ. ಈ ಸಂಬಂಧ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಅಗತ್ಯ ಅನುದಾನ ನೀಡಿವೆ ಎಂದರು.


ಈಗಾಗಲೇ ಕೈಗೊಂಡ ಎಲ್ಲಾ ಕಾಮಗಾರಿಗಳನ್ನು ಇನ್ನಷ್ಟು ತ್ವರಿತವಾಗಿ ಪೂರ್ಣಗೊಳಿಸಲು ಹಾಗೂ ಸಂಬಂಧಿತ ವಿವಿಧ ಇಲಾಖಾಧಿಕಾರಿಗಳ ನಡುವೆ ಸಮನ್ವಯತೆ ಅವಶ್ಯಕ. ಕೆಲವೆಡೆ ಕಾಮಗಾರಿಗಳು ಮಂದಗತಿಯಲ್ಲಿ ಸಾಗುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಗುತ್ತಿಗೆದಾರರು ಹೆಚ್ಚಿನ ಸಂಖ್ಯೆಯ ಕಾರ್ಮಿಕರನ್ನು ನಿಯೋಜಿಸಿ, ನಿಗಧಿಪಡಿಸಿದ ಕಾಲಮಿತಿಯಲ್ಲಿ ಗುಣಮಟ್ಟದ ಕಾಮಗಾರಿಗಳನ್ನು ನಡೆಸುವಂತೆ ಸೂಚಿಸಿದರು.


ತಾಳಗುಪ್ಪ-ಸಿರ್ಸಿ-ಹುಬ್ಬಳ್ಳಿ ನಡುವೆ ನೂತನ ರೈಲ್ವೇ ಮಾರ್ಗ ಆರಂಭಿಸಲು ಸಮೀಕ್ಷೆ ಕಾರ್ಯ ಪೂರ್ಣಗೊಂಡಿದ್ದು, ಮುಂದಿನ ಬಜೆಟ್‌ನಲ್ಲಿ ಈ ರೈಲ್ವೇ ಮಾರ್ಗದ ಕಾರ್ಯಾನುಷ್ಠಾನಕ್ಕೆ ಅಗತ್ಯ ಅನುದಾನ ಕಾಯ್ದಿರಿಸುವಂತೆ ಕೇಂದ್ರ ರೈಲ್ವೇ ಸಚಿವರಲ್ಲಿ ಮನವಿ ಮಾಡಲು ಉದ್ದೇಶಿಸಲಾಗಿದೆ. ಈ ಸಂಬಂಧ ಕ್ರಿಯಾಯೋಜನೆ ರೂಪಿಸಲು ಇಂದು ಹುಬ್ಬಳ್ಳಿ ರೈಲ್ವೆ ವಲಯದ ಉನ್ನತ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗುವುದು


1000 ಕೋಟಿ ರೂ.ಗಳ ಅಂದಾಜು ವೆಚ್ಚದ ಶಿವಮೊಗ್ಗ-ಶಿಕಾರಿಪುರ-ರಾಣೇಬೆನ್ನೂರು ನೂತನ ರೈಲ್ವೇ ಮಾರ್ಗದ ನಿರ್ಮಾಣಕ್ಕೆ ಸಂಬಂಧಿಸಿದಂತೆ ಭೂಸ್ವಾಧೀನಕ್ಕೆ ಸುಮಾರು 300-400 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರದಿಂದ ಭರಿಸಲಾಗಿದೆ. ಸದರಿ ಕಾಮಗಾರಿಗೆ ಸಂಬಂಧಿಸಿದಂತೆ ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ. ಇನ್ನೊಂದು ತಿಂಗಳೊಳಗಾಗಿ ಸದರಿ ಕಾಮಗಾರಿಗೆ ಭೂಮಿಪೂಜೆ ನಡೆಯಲಿದೆ.111 ಕೋಟಿ ವೆಚ್ಚದ ಕೋಟೆಗಂಗೂರು ಕೋಚಿಂಗ್ ಡಿಪೋ ನಿರ್ಮಾಣ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆಯೂ ನಡೆದಿದೆ. ಈ ಯೋಜನೆಯ ಅನುಷ್ಠಾನದಿಂದಾಗಿ ರಾಜ್ಯದ ವಿವಿಧ ಭಾಗಗಳಿಂದ ರೈಲುಗಳು ಸರ್ವೀಸ್‌ಗಾಗಿ ಇಲ್ಲಿಗೆ ಆಗಮಿಸಲಿವೆ. ಮಾತ್ರವಲ್ಲ ದೇಶದ ವಿವಿಧ ರಾಜ್ಯಗಳಿಗೆ ರೈಲ್ವೇ ಸಂಪರ್ಕ ಸಾಧ್ಯವಾಗಲಿದೆ


ಭದ್ರಾವತಿ ಸಮೀಪದ ಕಡದಕಟ್ಟೆ ಸೇರಿದಂತೆ ರೈಲ್ವೇ ಮೇಲ್ಸೇತುವೆ ಕಾಮಗಾರಿಗಳು ನಡೆಯುವ ಸ್ಥಳಗಳಲ್ಲಿ ಸುತ್ತಮುತ್ತಲ ಪ್ರದೇಶದ ನಿವಾಸಿಗಳ ಸಂಚಾರಕ್ಕೆ ಯಾವುದೇ ಅಡಚಣೆ ಉಂಟಾಗದಂತೆ ಪರ್ಯಾಯ ರಸ್ತೆ ಸಂಪರ್ಕ ವ್ಯವಸ್ಥೆ ಕಲ್ಪಿಸುವಂತೆ ಹಾಗೂ ಕಾಮಗಾರಿಗೆ ಯಾವುದೇ ಅಡಚಣೆ ಆಗದಂತೆ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸಲು ಮೆಸ್ಕಾಂ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ


ಕಳೆದ ವಾರದಲ್ಲಿ ಜಿಲ್ಲೆಯಾದ್ಯಂತ ನಿರಂತರವಾಗಿ ಸುರಿದ ಭಾರೀ ಮಳೆಯಿಂದಾಗಿ ಅಪಾರ ಪ್ರಮಾಣದ ಆಸ್ತಿ, ಜನ-ಜಾನುವಾರು ಸಂಕಷ್ಟಕ್ಕೊಳಗಾಗಿವೆ. ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಸೂಚಿಸಲಾಗಿದೆ

. ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೊಳಪಡುವ ಬೈಂದೂರಿನ ಕೆಲವು ಸ್ಥಳಗಳಲ್ಲಿ ಕಡಲುಕೊರತೆ ಉಂಟಾಗಿರುವುದು ಗಮನಕ್ಕೆ ಬಂದಿದ್ದು, ಈ ಬಗ್ಗೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಉಡುಪಿಯ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ


ಶಿವಮೊಗ್ಗ ಜಿಲ್ಲೆಯ ಸಾಗರ, ತೀರ್ಥಹಳ್ಳಿ ಮತ್ತು ಹೊಸನಗರ ತಾಲೂಕುಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಿದೆ. ವಿಶೇಷವಾಗಿ ಆಗುಂಬೆ ಮತ್ತು ಕೊಡಚಾದ್ರಿ ತಪ್ಪಲು ಪ್ರದೇಶಗಳಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ. ಆಗುಂಬೆಯ ಸಮೀಪದಲ್ಲಿ ಗುಡ್ಡಕುಸಿದಿದ್ದು, ಭಾರೀ ಮತ್ತು ಲಘುವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಈ ಬಗ್ಗೆ ತುರ್ತು ಕ್ರಮಗಳನ್ನು ಕೈಗೊಳ್ಳಲು ಸೂಚಿಸಿಲಾಗಿದೆ. ಗುಡ್ಡಕುಸಿತದ ಸ್ಥಳದಲ್ಲಿ ತುರ್ತು ಕಾಮಗಾರಿ ಆರಂಭಗೊಂಡಿದ್ದು, ತಕ್ಷಣದಲ್ಲಿ ಕಾಮಗಾರಿ ಪೂರ್ಣಗೊಂಡು ಸಂಚಾರಕ್ಕೆ ಅವಕಾಶ ಒದಗಿಸಲಾಗುವುದು ಎಂದ ಅವರು, ಪ್ರತಿ ವರ್ಷ ಗುಡ್ಡಕುಸಿಯುವ ಸಮಸ್ಯೆಗಳಿಂದ ಶಾಶ್ವತ ಪರಿಹಾರ ಕಂಡುಕೊಳ್ಳಲು ತಜ್ಞರ ಸಲಹೆ ಪಡೆದು ಕ್ರಮ ವಹಿಸಲಾಗುವುದು ಎಂದರು. ಅಲ್ಲದೇ ಕಡಲತಡಿಯಲ್ಲಿ ಬರುವ ರಾಜ್ಯಗಳಲ್ಲಿ ಸಂಚಾರ ದಟ್ಟಣೆ, ಆಕಸ್ಮಿಕ ಅಪಘಾತಗಳನ್ನು ನಿಯಂತ್ರಿಸಲು ಹಾಗೂ ಸುಗಮ ಸಂಚಾರಕ್ಕೆ ಪೂರಕ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಸಾರಿಗೆ ಮಂತ್ರಾಲಯವು ಸುಮಾರು25.000ಕಿ.ಮೀ. ರಾಷ್ಟ್ರೀಯ ಹೆದ್ದಾರಿ ನಿರ್ಮಿಸುವ ಗುರಿ ಹೊಂದಿದೆ
ರಾಜ್ಯದ ಮಾನ್ಯ ಮುಖ್ಯಮಂತ್ರಿಗಳು ಮಳೆಹಾನಿಯಿಂದಾಗಿರುವ ಅನಾಹುತಗಳಿಗೆ ತಕ್ಷಣದ ಕ್ರಮವಾಗಿ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ, ಕ್ರಮಕ್ಕೆ ಸೂಚಿಸಿದ್ದಾರೆ ಅಲ್ಲದೇ ಆಯಾ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಹಾಗೂ ಸ್ಥಳೀಯ ಚುನಾಯಿತ ಪ್ರತಿನಿಧಿಗಳು ಈ ಸಂಕಷ್ಟದ ಸಂದರ್ಭದಲ್ಲಿ ಸ್ಥಳೀಯವಾಗಿದ್ದು ಜನರಿಗೆ ಸ್ಪಂದಿಸಲು ಸೂಚಿಸಿದ್ದಾರೆ .


ರು.


ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ|| ಆರ್.ಸೆಲ್ವಮಣಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್, ಸ್ಮಾರ್ಟ್‌ಸಿಟಿ ಲಿ.ನ ವ್ಯವಸ್ಥಾಪಕ ಚಿದಾನಂದ ವಟಾರೆ, ಜ್ಯೋತಿ ಪ್ರಕಾಶ್, ಚನ್ನಬಸಪ್ಪ, ಜ್ಞಾನೇಶ್ವರ್, ರೈಲ್ವೇ, ಮೆಸ್ಕಾಂ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸೇರಿದಂತೆ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

By admin

ನಿಮ್ಮದೊಂದು ಉತ್ತರ

error: Content is protected !!