ಶಿವಮೊಗ್ಗ :

ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ, ಬಿ.ವೈ. ವಿಜಯೇಂದ್ರ ಅವರ ಸಹಮತಿ ಮೇರೆಗೆ ರಾಜ್ಯಾದ್ಯಂತ ನೇಮಕವಾಗಿದ್ದ ನಿಗಮ ಮಂಡಳಿಗಳಿಗೆ ಮೇಜರ್ ಸರ್ಜರಿ ಮಾಡಲು ಹೊರಟಿರುವ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಲವು ನಿಗಮ ಮಂಡಳಿಯ ಅಧ್ಯಕ್ಷರು-ಉಪಾಧ್ಯಕ್ಷರಿಗೆ ರಾಜೀನಾಮೆ ನೀಡಲು ಸೂಚಿಸಿದ್ದು, ಅದರಂತೆ ಶಿವಮೊಗ್ಗ ಜಿಲ್ಲೆಯಲ್ಲಿ ಬಹಳಷ್ಟು ಜನ ತಮ್ಮ ಅಧಿಕಾರವನ್ನು ಕಳೆದುಕೊಂಡಿದ್ದಾರೆ.
ಇದು ಬಿ.ಎಸ್. ಯಡಿಯೂರಪ್ಪ ಅವರಿಗೆ ಹಿಂದೇಟು ನೀಡಿರುವ ತಂತ್ರವೇ…? ಚುನಾವಣೆ ಹೊತ್ತಿನಲ್ಲಿ ಎಲ್ಲರನ್ನು ಸಮಾಧಾನ ಪಡಿಸುವ ಕುತಂತ್ರವೇ?

ರ್ನಾಟಕ ಶಿವಮೊಗ್ಗ ಜಿಲ್ಲೆಯವರಾದ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಕೆ.ರೇವಣ್ಣಪ್ಪ ಕೊಳಗಿ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಕೆ.ಪಿ.ಪುರುಷೋತ್ತಮ್, ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಮಂಡಳಿ ಉಪಾಧ್ಯಕ್ಷ ಎಸ್.ದತ್ತಾತ್ರಿ ಅವರು ಅಧಿಕಾರ ಕಳೆದುಕೊಂಡಿದ್ದಾರೆ. ಇವರೆಲ್ಲರೂ ಯಡಿಯೂರಪ್ಪ ಅವರ ಬಣದಲ್ಲಿ ಗುರುತಿಸಿಕೊಂಡವರು. ಇಲ್ಲಿ ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ಅವರು ತಮ್ಮ ಕಾರ್ಯಕ್ರಮಗಳ ಮೂಲಕ ಉಳಿದಿದ್ದಾರೆನ್ನಲಾಗಿದೆ. ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗುರುಮೂರ್ತಿ ಅವರೂ ಸಹ ಹಾಗೆಯೇ ಮುಂದುವರೆಯಲಿದ್ದಾರೆನ್ನಲಾಗಿದೆ.

By admin

ನಿಮ್ಮದೊಂದು ಉತ್ತರ

error: Content is protected !!