ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಸಿಐಡಿ ಅಧಿಕಾರಿಗಳಿಂದ ಬಂಧಿತರಾಗಿರುವ ನೇಮಕಾತಿ ವಿಭಾಗದ ಎಡಿಜಿಪಿಯಾಗಿದ್ದ ಅಮ್ರಿತ್ ಪೌಲ್ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಿದರೆ ಯಾರೆಲ್ಲ ರಾಜಕಾರಣಿಗಳು ಇರದಲ್ಲಿ ಶಾಮೀಲಾಗಿದ್ದಾರೆ ಎಂಬುದು ಗೊತ್ತಾಗಲಿದೆ. ಹಾಗಾಗಿ ಮಂಪರು ಪರೀಕ್ಷೆ ಮಾಡಬೇಕು’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು.
ನಗರದ ವಿಮಾನ ನಿಲ್ದಾಣದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ’ಅಕ್ರಮದಲ್ಲಿ ಅನೇಕ ಸಚಿವರು, ಅವರ ಆಪ್ತರು ಶಾಮೀಲಾಗಿರುವ ಸಂದೇಹಗಳಿವೆ.
ಈ ಬಗ್ಗೆ ಸ್ಪಷ್ಟ ಮಾಹಿತಿ ಹೊರಬೀಳಬೇಕು ಎಂದರೆ ಪ್ರಮುಖ ಅಧಿಕಾರಿಗಳನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು. ಅಮ್ರಿತ್ ಪೌಲ್ ಬರೆದ ಡೈರಿಯ ಬಗ್ಗೆಯೂ ಸಮಗ್ರ ತನಿಖೆ ನಡೆಸಬೇಕು. ಯಾವುದೇ ಕಾರಣಕ್ಕೂ ಈ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡಬಾರದು’ ಎಂದರು.