ಶಿವಮೊಗ್ಗ,ಜು.20:
ಭದ್ರಾ ಜಲಾಶಯದ ತಡೆಗೋಡೆ ಕುಸಿತದ ಮಾಹಿತಿ ಮೇರೆಗೆ ಸ್ಥಳಕ್ಕೆ ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿ ಜಲಾಶಯದ ತಡೆಗೋಡೆ ಕುಸಿತದ ಕಾಮಗಾರಿಗೆ ಸರಕಾರದಿಂದ 2 ಕೋಟಿ 15 ಲಕ್ಷ ರೂ ಬಿಡುಗಡೆಯಾಗಿದೆ ಎಂದು ತಿಳಿಸಿದರು.
ಜಲಾಶಯದ ಕ್ರಸ್ಟ್ ಗೇಟ್ ಗಳ ಮೂಲಕ ಅತಿ ಹೆಚ್ಚು ನೀರು ನದಿಗೆ ಹರಿಯುತ್ತಿರುವುದರಿಂದ ತತ್ ಕ್ಷಣ ಕಾಮಗಾರಿಯನ್ನ ಪ್ರಾರಂಭಿಸಲು ಸಾಧ್ಯವಾಗುತ್ತಿಲ್ಲ, ಮಳೆಗಾಲ ಕಳೆದ ಕೂಡಲೇ ಕಾಮಗಾರಿಯನ್ನು ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚಿಸಲಾಯಿತು.
ಮಳೆಗಾಲದ ಸಂದರ್ಭವಾದ್ದರಿಂದ ಜಲಾಶಯ ತುಂಬಿ ಹರಿಯುತ್ತಿದ್ದು, ಆದ್ದರಿಂದ ಪ್ರವಾಸಿಗರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು, ಆ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ತಡೆಗೋಡೆ ಕುಸಿತ ಸ್ಥಳದಲ್ಲಿ ಬ್ಯಾರಿಕೇಡ್ ಅಳವಡಿಕೆ ಸೇರಿದಂತೆ ಸೂಚನಾ ಫಲಕ ಹಾಗೂ ಸಿಬ್ಬಂದಿಯನ್ನು ನೇಮಕ ಮಾಡಲು ಅಗತ್ಯ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಲಾಯಿತು.
ಈ ಸಂದರ್ಭದಲ್ಲಿ ಭದ್ರಾ ಜಲಾಶಯದ ಕಾರ್ಯಪಾಲಕ ಅಭಿಯಂತರರು ಶ್ರೀ ಜಗದೀಶ್ ರವರು ಹಾಜರಿದ್ದರು.