ಬೆಂಗಳೂರು,ಆ.27:
ವೈದ್ಯಕೀಯ ಶಿಕ್ಷಣ ಇಲಾಖೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ಸಚಿವ ಡಾ. ಕೆ. ಸುಧಾಕರ್‌ರವರಿಂದ ಶುಭ ಸುದ್ದಿ ಸಿಕ್ಕಿದೆ.
ಸರ್ಕಾರಿ ವೈದ್ಯ, ದಂತ ವೈದ್ಯಕೀಯ ಕಾಲೇಜು, ಬೋಧಕ ಆಸ್ಪತ್ರೆಗಳು ಮತ್ತು ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಖಾಯಂ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ಪಿಂಚಣಿ ಯೋಜನೆ ಜಾರಿಗೆ ತಂದಿದ್ದಾರೆ,
. ಈ ಕುರಿತು ವೈದ್ಯಕೀಯ ಶಿಕ್ಷಣ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಗೆ ಹಣಕಾಸು ಇಲಾಖೆ ಅನುಮೋದನೆ ನೀಡಿದ್ದು , ಅಧಿಕೃತ ಆದೇಶ ಹೊರಬಿದ್ದಿದೆ.


ಕೋವಿಡ್‌ ವಿರುದ್ಧದ ಹೋರಾಟದಲ್ಲಿ ಯೋಧರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಮೆಡಿಕಲ್‌ ಕಾಲೇಜು ಆಸ್ಪತ್ರೆಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ಎನ್‌ಪಿಎಸ್‌ ಯೋಜನೆ ಜಾರಿಗೊಳಿಸುವುದು ಸೂಕ್ತ ಎಂಬ ಸಚಿವ ಸುಧಾಕರ್‌ ಅವರು ಸಿಎಂ ಬಳಿ ಚರ್ಚಿಸಿದ್ದರು. ನಂತರ ಇದಕ್ಕೆ ಸಿಎಂ ಒಪ್ಪಿಗೆ ನೀಡಿ ಕೂಡಲೇ ಕ್ರಮ ಜರುಗಿಸುವಂತೆ ಹಣಕಾಸು ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಅಂತಿಮವಾಗಿ ಹಣಕಾಸು ಇಲಾಖೆ ಸಮ್ಮತಿ ದೊರಕಿದ್ದು ಆದೇಶ ಹೊರಡಿಸಿದೆ. ಒಟ್ಟಾರೆ 27 ಸಂಸ್ಥೆಗಳಲ್ಲಿ ಕಾಯಂ ಆಗಿ ಕರ್ತವ್ಯ ನಿರ್ವಹಿಸುತ್ತಿರುವ 5949 ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಯೋಜನೆಯ ಪ್ರಯೋಜನ ದೊರಕಲಿದೆ ಎಂದು ತಿಳಿದು ಬಂದಿದೆ.

By admin

ನಿಮ್ಮದೊಂದು ಉತ್ತರ

error: Content is protected !!