ಶಿವಮೊಗ್ಗ,
ಸಹ್ಯಾದ್ರಿ ಕಾಲೇಜಿನ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಕಡಿಮೆ ಅಂಕ ನೀಡಲಾಗಿದ್ದು, ಮರುಮೌಲ್ಯಮಾಪನ ಮಾಡುವಂತೆ ಒತ್ತಾಯಿಸಿ ಇಂದು ಎನ್‌ಎಸ್‌ಯುಐ ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಿ, ಕುವೆಂಪು ವಿಶ್ವವಿದ್ಯಾಲಯ ಕುಲಪತಿಗಳಿಗೆ ಮನವಿ ಸಲ್ಲಿಸಲಾಯಿತು.


ರಾಜ್ಯಶಾಸ್ತ್ರ ಸ್ನಾತಕೋತ್ತರ ವಿಭಾಗದ 2022- 23 ನೇ ಸಾಲಿನ ಪ್ರಥಮ ಸೆಮಿಸ್ಟರ್ ಪರೀಕ್ಷೆಯಲ್ಲಿ ಸಹ್ಯಾದ್ರಿ ಕಾಲೇಜಿನ ಎಲ್ಲ ವಿದ್ಯಾರ್ಥಿಗಳಿಗೆ ಕನಿಷ್ಠ ಅರ್ಹತಾ ಅಂಕಗಳಿಗಿಂತ ಕಡಿಮೆ ಅಂಕಗಳನ್ನು ನೀಡಲಾಗಿದ್ದು, ಕೂಡಲೇ ಮರುಮೌಲ್ಯಮಾಪನ ಮಾಡಬೇಕೆಂದು ಒತ್ತಾಯಿಸಿದರು.


ಕಾಲೇಜಿನ ರಾಜ್ಯಶಾಸ್ತ್ರ ಸ್ನಾತಕೋತ್ತರ ಅಧ್ಯಯನ ವಿಭಾಗದ ಎಲ್ಲ ವಿದ್ಯಾರ್ಥಿಗಳಿಗೂ ಶೇ.೫೯ಕ್ಕಿಂತ ಕಡಿಮೆ ಮತ್ತು ಕನಿಷ್ಠ ಅರ್ಹತೆಗೆ ಬೇಕಾದ ಶೇ.೫೫ಕ್ಕಿಂತ ಕಡಿಮೆ ಅಂಕಗಳು ಬಂದಿರುವುದರಿಂದ ಮೌಲ್ಯಮಾಪನದಲ್ಲಿ ಲೋಪ ಆಗಿರುವ ಸಾಧ್ಯತೆ ಇದೆ. ಆದ್ದರಿಂದ ಕುಲಪತಿಗಳು ಕೂಡಲೇ ಈ ವಿಭಾಗದ ಎಲ್ಲ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳನ್ನು ಮರುಮೌಲ್ಯಮಾಪನ ಮಾಡಿಸಬೇಕು ಎಂದು ಒತ್ತಾಯಿಸಿದರು.


ಹಾಗೆಯೇ ಸಹ್ಯಾದ್ರಿ ಕಲಾ ಕಾಲೇಜಿನ ಸ್ನಾತಕೋತ್ತರ ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ಸಂಶೋಧನಾ ಕೇಂದ್ರದಲ್ಲಿ ಪಿಹೆಚ್‌ಡಿ ಸಂಶೋಧನೆ ಕೈಗೊಂಡಿರುವ ಎಲ್ಲ ವಿದ್ಯಾರ್ಥಿಗಳಿಗೆ ಪಿಹೆಚ್‌ಡಿ ಕೋರ್ಸ್ ವರ್ಕ್ ಪರೀಕ್ಷೆಯಲ್ಲಿ ಅನುತ್ತೀರ್ಣಗೊಳಿಸಿ ತಾರತಮ್ಯ ಎಸಗಿದ್ದಾರೆ. ಈ ವಿದ್ಯಾರ್ಥಿಗಳಿಗೂ ನ್ಯಾಯ ಒದಗಿಸಿಕೊಡಬೇಕೆಂದು ಆಗ್ರಹಿಸಿದರು.


ಎನ್ ಎಸ್ ಯುಐ ಜಿಲ್ಲಾಧ್ಯಕ್ಷ ವಿಜಯ್, ಕಾರ್ಯಾಧ್ಯಕ್ಷ ರವಿ ಕಾಟಿಕೆರೆ, ಯುವ ಮುಖಂಡರಾದ ಮುರುಗೇಶ್, ಭದ್ರಾವತಿ ತಾಲ್ಲೂಕು ಅಧ್ಯಕ್ಷ ಭಾಷಾ, ಶಿವಮೊಗ್ಗ ಗ್ರಾಮಾಂತರ ಅಧ್ಯಕ್ಷ ಹರ್ಷಿತ್, ನಗರಾಧ್ಯಕ್ಷ ಚರಣ್ , ರವಿ, ಕೀರ್ತಿ ಗೋಣಿಬೀಡು, ಗಂಗಾಧರ ಧವನ್, ಹೇಮಂತ್ ಇತರರಿದ್ದರು.

By admin

ನಿಮ್ಮದೊಂದು ಉತ್ತರ

error: Content is protected !!