ಶಿವಮೊಗ್ಗ,
ಮಲೆನಾಡ ಭಾಗದಲ್ಲಿ ಕ್ರೀಡಾ ಸ್ಪೂರ್ತಿಯನ್ನು ತುಂಬಿದ ಶ್ರೀಗಳೆಂದರೆ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ಎಂದರೆ ತಪ್ಪಾಗಲಿಕ್ಕಿಲ್ಲ, ಅವರು ಇಲ್ಲಿಯವರೆಗೆ ಓದಿನ ಜೊತೆ ಜೊತೆಗೆ ಕ್ರೀಡೆಗೂ ಅಷ್ಟೇ ಆದ್ಯತೆ ನೀಡಿ ರಾಜ್ಯ,ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟುವನ್ನು ರೂಪಿಸುವಂತಹ ಕೀರ್ತಿ ಹೊಂದಿರುವುದು ನಮ್ಮೆಲ್ಲರ ಹೆಮ್ಮೆಯ ವಿಚಾರ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.


ಅವರು ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಶಿವಮೊಗ್ಗ ಶಾಖೆಯ ಶ್ರೀ ಆದಿಚುಂಚನಗಿರಿ ಆಂಗ್ಲ ಮಾಧ್ಯಮ ಸಂಯುಕ್ತ ಪ್ರೌಢಶಾಲೆ,

ಶಿವಮೊಗ್ಗ ಹಾಗೂ ಶ್ರೀ ಜಿಲ್ಲಾ ವಾಲಿಬಾಲ್ ಸಂಸ್ಥೆ, ಶಿವಮೊಗ್ಗ. ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸ ಲಾಗಿದ್ದ ಜಿಲ್ಲಾ ಮಟ್ಟದ ಪ್ರೌಢಶಾಲಾ ಬಾಲಕ-ಬಾಲಕಿಯರ ಹೊನಲು ಬೆಳಕಿನ ವಾಲಿಬಾಲ್ ಚುಂಚಾದ್ರಿ ಕಪ್ ಪಂದ್ಯಾವಳಿಯನ್ನು ಉದ್ಘಾಟನೆ ನೆರವೇರಿಸಿ ಮಾತನಾಡುತ್ತ ಆರೋಗ್ಯವಂತ ದೇಹದಲ್ಲಿ ಆರೋಗ್ಯವಂತ ಮನಸ್ಸು ರೂಪಿಸಲು ಕ್ರೀಡೆ ಸಹಕಾರಿ, ಇಂತಹ ಕ್ರೀಡಾಸ್ಪೂರ್ತಿ ಚುಂಚಾದ್ರಿ ಕಪ್ ನಂತಹ ಕ್ರೀಡಾಕೂಟಗಳಲ್ಲಿ ಕ್ರೀಡಾ ಪ್ರತಿಭಾನ್ವಿತರನ್ನು ಹೊರಹೊಮ್ಮಿಸಲು ಸಾಧ್ಯ ಎಂದರು.


ಸಾನಿಧ್ಯ ವಹಿಸಿದ್ದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು ಆಶೀರ್ವಚನವನ್ನು ನೀಡುತ್ತಾ ಕ್ರೀಡಾಪಟುಗಳಲ್ಲಿ ಗೆದ್ದೇಗೆಲ್ಲುತ್ತೇವೆ ಎಂಬ ಸಂಕಲ್ಪ ಇರಬೇಕು. ಸತತ ಪ್ರಯತ್ನದಿಂದ ಜೀವನವನ್ನು ಹಾಗೂ ಕ್ರೀಡೆಯನ್ನು ಎಂತಹ ಸಾಧನೆಯನ್ನಾದರೂ ಮಾಡಬಹುದು ಎಂದರು.


ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ವಾಲಿಬಾಲ್ ಸಂಸ್ಥೆ ಅಧ್ಯಕ್ಷ ಭಾಸ್ಕರ್ ಜಿ ಕಾಮತ್, ವಿಧಾನ ಪರಿಷತ್ ಸದಸ್ಯ ಎಸ್ ರುದ್ರೇಗೌಡರವರು, ವಿಧಾನ ಪರಿಷತ್ ಸದಸ್ಯ ಎಸ್

ಎಲ್ ಭೋಜೇಗೌಡರವರು, ಮಾಜಿ ಶಾಸಕ ಕೆ ಬಿ ಪ್ರಸನ್ನ ಕುಮಾರ್, ಭದ್ರಾಅಚ್ಚು ಕಟ್ಟು ಪ್ರಾಧಿಕಾರ ಅಧ್ಯಕ್ಷರಾದ ಪವಿತ್ರ ರಾಮಯ್ಯ, ಮಹಾನಗರ ಪಾಲಿಕೆ ಶಿವಮೊಗ್ಗ ಮಹಾಪೌರರಾದ ಸುನಿತಾ ಅಣ್ಣಪ್ಪ, ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣಗೌಡ ಮತ್ತಿತರರಿದ್ದರು.

By admin

ನಿಮ್ಮದೊಂದು ಉತ್ತರ

error: Content is protected !!