ಶಿವಮೊಗ್ಗ,
ದೇಶವನ್ನು ಮತ್ತಷ್ಟು ಸದೃಢಗೊಳಿಸಲು ನಾವೆಲ್ಲರೂ ಸಂಕಲ್ಪ ಮಾಡಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಕೆ.ಸಿ. ನಾರಾಯಣ ಗೌಡ ಹೇಳಿದರು.


ಅವರು ಇಂದು ಜಿಲ್ಲಾಡಳಿತದ ವತಿ ಯಿಂದ ಡಿಎಆರ್ ಮೈದಾನದಲ್ಲಿ ಆಯೋಜಿ ಸಿದ್ದ ೭೫ ನೇ ಸ್ವಾತಂತ್ರ್ಯ ಅಮೃತ ಮಹೋ ತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.


ಸ್ವಾತಂತ್ರ್ಯದ ಅಮೃತ ಮಹೋತ್ಸವದಲ್ಲಿ ನಾವೆಲ್ಲಾ ಸಡಗರ ಸಂಭ್ರಮದಿಂದ ಇದ್ದೇವೆ. ಇಂದು ದೇಶದ ಪ್ರತಿ ಮನೆಯ ಮೇಲೆ ತಿರಂಗಾ ಧ್ವಜ ಹಾರಾಡುತ್ತಿದೆ. ಪ್ರತಿಯೊಬ್ಬರ ಹೃದಯದಲ್ಲೂ ರಾಷ್ಟ್ರಪ್ರೇಮ ಮೂಡುತ್ತಿದೆ. ಸ್ವಾತಂತ್ರ್ಯದ ಹಿಂದೆ ಲಕ್ಷಾಂತರ ದೇಶ ಪ್ರೇಮಿಗಳ ತ್ಯಾಗ, ಬಲಿದಾನವಿದೆ. ಮಹಾತ್ಮ ಗಾಂಧೀಜಿ ಸರ್ದಾರ್ ವಲ್ಲಭಬಾಯ್ ಪಟೇಲ್, ನೆಹರೂ, ಅಂಬೇಡ್ಕರ್, ಗೋಪಾಲಕೃಷ್ಣ ಗೋಖಲೆ, ಬಾಲಗಂ ಗಾಧರ ತಿಲಕ್, ಭಗತ್ ಸಿಂಗ್, ಚಂದ್ರಪಾ ಲ್ ಮುಂತಾದವರ ಕೊಡುಗೆ ಇದೆ ಎಂದರು.


ಸ್ವಾತಂತ್ರ್ಯದ ಹೋರಾಟದಲ್ಲಿ ಶಿವಮೊಗ್ಗ ಜಿಲ್ಲೆಯ ಪಾತ್ರ ಕೂಡ ಇದೆ. ಈಸೂರಿನ ಕ್ರಾಂತಿಕಾರಿಗಳು ಬ್ರಿಟೀಷರ ವಿರುದ್ಧ ಹೋರಾಡಿ ತಮ್ಮ ಗ್ರಾಮವನ್ನು ಸ್ವಾತಂತ್ರ್ಯವಾಗಿದೆ ಎಂದು ಘೋಷಿಸಿದ್ದರು. ಈ ಊರಿನ ೫ ಜನ ವೀರರಿಗೆ ಗಲ್ಲು ಶಿಕ್ಷೆ ವಿಧಿಸಲಾಗಿತ್ತು. ಇಂತಹ ಅಸಂಖ್ಯಾತ ಕ್ರಾಂತಿಕಾರಿಗಳೆಲ್ಲರನ್ನೂ ನೆನಪು ಮಾಡಿಕೊಳ್ಳಬೇಕು ಎಂದರು.


ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಗೆ ಪಣತೊಟ್ಟಿವೆ. ವಿವಿಧ ಯೋಜನೆಗಳು ವಿಮಾನ ನಿಲ್ದಾಣ, ಸಿಗಂದೂರು ಸೇತುವೆ, ರೈಲ್ವೇ ಮಾರ್ಗ, ಶೌಚಾಲಯಗಳು, ಬಸವ ವಸತಿ ಯೋಜನೆ ಸೇರಿದಂತೆ ಹಲವು ಯೋಜನೆಗಳನ್ನು ಮಾಡಲಾಗಿದೆ. ಜಿಲ್ಲೆಯಲ್ಲಿ ೬೪೫೧ ಮನೆಗಳು ನಿರ್ಮಾಣ ವಾಗಿವೆ. ಹಾಗೆಯೇ ಅತಿವೃಷ್ಠಿಯಿಂದ ಹಾನಿಯಾದ ಮನೆಗಳಿಗೆ ಪರಿಹಾರ ಒದಗಿಸಲಾಗಿದೆ ಎಂದರು.
ಜೀವ ಹಾನಿಗೊಳಗಾದವರ ೫ ಕುಟುಂಬಗಳಿಗೆ ತಲಾ ೫ ಲಕ್ಷ ರೂ.ನಂತೆ ನೀಡಲಾಗಿದೆ. ೩೦೧೧ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಬೆಳೆಗಳು ಹಾನಿಯಾಗಿವೆ. ೧೪೦ ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕೆ ಬೆಳೆಗಳಿಗೆ ಹಾನಿಯಾಗಿದ್ದು, ಪರಿಹಾರ ನೀಡಲಾಗಿದೆ ಎಂದರು.


ಕಾರ್ಯಕ್ರಮದಲ್ಲಿ ಶಾಸಕರಾದ ಕೆ.ಎಸ್. ಈಶ್ವರಪ್ಪ, ಆಯನೂರು ಮಂಜು ನಾಥ್, ಎಸ್.ಎಲ್. ಭೋಜೇಗೌಡ, ಕೆ.ಬಿ. ಅಶೋಕ್ ನಾಯ್ಕ್, ಎಸ್. ರುದ್ರೇಗೌಡ, ಡಿ.ಎಸ್. ಅರುಣ್, ಮೇಯರ್ ಸುನಿತಾ ಅಣ್ಣಪ್ಪ, ಉಪ ಮೇಯರ್ ಶಂಕರ್ ಗನ್ನಿ, ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ, ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಿ ಪ್ರಸಾದ್, ಜಿಪಂ ಸಿಇಒ ಪ್ರಕಾಶ್, ಅಪರ ಜಿಲ್ಲಾಧಿಕಾರಿ ನಾಗೇಂದ್ರ ಹೊನ್ನಳಿ, ಪಾಲಿಕೆ ಆಯುಕ್ತ ಮಾಯಣ್ಣ ಗೌಡ, ಸ್ಮಾರ್ಟ್ ಸಿಟಿ ಎಂಡಿ ಚಿದಾನಂದ ವಠಾರೆ ಇದ್ದರು.


ಸುಮಾರು ೪ ಸಾವಿರ ಮಕ್ಕಳಿಂದ ದೇಶ ಭಕ್ತಿಗೀತೆಯ ನೃತ್ಯ ಪ್ರದರ್ಶನ ನಡೆಯಿತು. ಪಥ ಸಂಚಲನದಲ್ಲಿ ಜಿಲ್ಲಾ ಸಶಸ್ತ್ರ ಮೀಸಲು ಪಡೆ, ಪೊಲೀಸರು, ಹೋಂಗಾರ್ಡ್ಸ್, ಎನ್.ಸಿ.ಸಿ., ಅಬಕಾರಿ, ಸ್ಕೌಟ್ ಅಂಡ್ ಗೈಡ್ಸ್, ಅಗ್ನಿಶಾಮಕದಳ ಸಿಬ್ಬಂದಿ, ಸರ್ಕಾರಿ ಬಾಲಮಂದಿರದ ಮಕ್ಕಳು, ವಿವಿಧ ಶಾಲೆಗಳ ಮಕ್ಕಳು ಭಾಗಿಯಾಗಿದ್ದರು
.

By admin

ನಿಮ್ಮದೊಂದು ಉತ್ತರ

error: Content is protected !!