ದೆಹಲಿ,ಆ.31:
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇಂದು ವಿಧಿವಶರಾಗಿದ್ದಾರೆ.
84 ವರ್ಷದ ಪ್ರಣಬ್ ಮುಖರ್ಜಿ ಪಶ್ಚಿಮ ಬಂಗಾಳದ ಬಿರ್​ಬೂಮ್ ಜಿಲ್ಲೆಯ ಮಿರತಿಯಲ್ಲಿ ಜನಿಸಿದ್ದರು. ಕಿಂಕರ್ ಮುಖರ್ಜಿ ಹಾಗೂ ರಾಜಲಕ್ಷ್ಮೀ ದಂಪತಿಗೆ 1935ರ ಡಿಸೆಂಬರ್ 11ರಂದು ಜನಿಸಿದ ಪ್ರಣಬ್ ದಾ ದೇಶದ 13ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ್ದರು.
ಮಾಜಿ ರಾಷ್ಟ್ರಪತಿ ಪ್ರಣಬ್​ರಿಗೆ ನಿನ್ನೆ ಮೆದುಳಿನ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಜೊತೆಗೆ, ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಹಾಗಾಗಿ, ಪ್ರಣಬ್ ಮುಖರ್ಜಿ ವೆಂಟಿಲೇಟರ್ ಸಹಾಯದಿಂದ ಉಸಿರಾಡುತ್ತಿದ್ದರು ಎಂದು ತಿಳಿದುಬಂದಿದೆ.
ಮಾಜಿ ರಾಷ್ಟ್ರಪತಿ ದೆಹಲಿಯಲ್ಲಿ ಸೇನೆಯ ಆರ್​ಆರ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಭಾರತದ 13ನೇ ರಾಷ್ಟ್ರಪತಿಯಾಗಿದ್ದ ಪ್ರಣಬ್ ಮುಖರ್ಜಿ 2012ರ ಜು.25ರಿಂದ 2017ರ ಜುಲೈ 25ರವರೆಗೆ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ್ದರು.

By admin

ನಿಮ್ಮದೊಂದು ಉತ್ತರ

You missed

error: Content is protected !!