ಸ್ಬೂಡಾ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ

ಶಿವಮೊಗ್ಗ,ಆ.31:

ಶಿವಮೊಗ್ಗ ಮತ್ತು ಭದ್ರಾವತಿ ನಗರವನ್ನು ಸುಂದರ ನಗರವನ್ನಾಗಿಸುವ ಕಲ್ಪನೆಯನ್ನು ಹೊಂದಿದ್ದು, ಸ್ಬೂಡಾವನ್ನು ಮಾದರಿ ಸಂಸ್ಥೆಯನ್ನಾಗಿ ಮಾಡುತ್ತೇನೆ ಎಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಸ್.ಜ್ಯೋತಿ ಪ್ರಕಾಶ್ ಹೇಳಿದರು.
ಇಂದು ನೂತನವಾಗಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿ.ಎಸ್.ಯಡಿಯೂರಪ್ಪ, ಬಿ.ವೈ.ರಾಘವೇಂದ್ರ, ಕೆ.ಎಸ್.ಈಶ್ವರಪ್ಪ ಹಾಗೂ ಪ್ರಮುಖರ ಅಪೇಕ್ಷೆಯಂತೆ ಅಧ್ಯಕ್ಷ ಸ್ಥಾನ ಲಭಿಸಿದ್ದು, ಅವರ ವಿಶ್ವಾಸಕ್ಕೆ ಚ್ಯುತಿ ಬಾರದಂತೆ ಕೆಲಸ ನಿರ್ವಹಿಸುತ್ತೇನೆ ಎಂದರು.
ಸ್ಬೂಡಾದಿಂದ ನಿರ್ಮಾಣಗೊಂಡಿರುವ ಅಟಲ್ ಬಿಹಾರಿ ವಾಜಪೇಯಿ ಬಡಾವಣೆಯಲ್ಲಿ ಮನೆಗಳನ್ನು ನಿರ್ಮಿಸಲು ಇರುವ ಅಡೆತಡೆಗಳನ್ನು ನಿವಾರಿಸಲು ಮೊದಲ ಆದ್ಯತೆ ನೀಡಲಾಗುವುದು. ಅಧ್ಯಕ್ಷ ಸ್ಥಾನ ಅತ್ಯಂತ ಜವಾಬ್ದಾರಿ ಸ್ಥಾನವಾಗಿದ್ದು, ಪ್ರಾಮಾಣಿಕವಾಗಿ ಯಾರಿಗೂ ನೋವಾಗದಂತೆ ಕೆಲಸ ನಿರ್ವಹಿಸುತ್ತೇನೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಮಾತನಾಡಿ, ಪಕ್ಷದ ಸಂಘಟನೆಯೊಂದಿಗೆ ಕಾರ್ಯಕರ್ತರಿಗೆ ಸ್ಪಂದಿಸುವ ರೀತಿಯಲ್ಲಿ ತೃಪ್ತಿ ಪಡುವಂತೆ ಹಾಗೂ ಪ್ರಾಮಾಣಿಕವಾಗಿ ಕೆಲಸ ಮಾಡಿ, ಸರ್ಕಾರವೇ ನಿಮ್ಮ ಜೊತೆಯಲ್ಲಿರುತ್ತದೆ. ಹಾಗು ನಿಮ್ಮ ತಂಡವು ಹೆಸರು ತರಲಿ ಎಂದು ಹಾರೈಸಿದರು.
ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಮಾತನಾಡಿ, ನಿಷ್ಠೂರ ಕೆಲಸ ಸಮಾಜಕ್ಕೆ ಪೂರಕವಾಗಿರುತ್ತದೆ. ಅದೇ ರೀತಿ ನಿಮ್ಮ ಕೆಲಸ ಕಾರ್ಯಗಳು ಆಗಬೇಕು. ಹೊಸ ಲೇಔಟ್‍ಗಳ ಅಭಿವೃದ್ಧಿಯಾಗುತ್ತಿಲ್ಲ ಎಂಬ ಕೊರಗಿದೆ. ಅದನ್ನು ನಿಮ್ಮ ಅವಧಿಯಲ್ಲಿ ಸರಿಪಡಿಸಿ, ಸ್ಬೂಡಾವನ್ನು ರಾಜ್ಯದಲ್ಲಿಯೇ ಮಾದರಿಯನ್ನಾಗಿಸಿ ಎಂದು ನೂತನ ಅಧ್ಯಕ್ಷರು ಸದಸ್ಯರಿಗೆ ಶುಭ ಕೋರಿದರು.
ವೇದಿಕೆಯಲ್ಲಿ ಸುರೇಖಾ ಮೇಯರ್ ಸುವರ್ಣ ಶಂಕರ್, ಉಪಮೇಯರ್ ಸುರೇಖಾ ಮುರುಳೀಧರ್, ಕರ್ನಾಟಕ ರಾಜ್ಯ ಆರ್ಯವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್. ಅರುಣ್, ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಕೆ.ಪಿ. ಪುರುಷೋತ್ತಮ್, ಆರ್‍ಎಸ್‍ಎಸ್‍ನ ದಕ್ಷಿಣ ಭಾರತೀಯ ಸಹಕಾರ್ಯವಾಹ ಪಟ್ಟಾಭಿರಾಮ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ. ಮೇಘರಾಜ್, ಮಾಜಿ ಸ್ಬೂಡಾ ಅಧ್ಯಕ್ಷರಾದ ಎಸ್. ದತ್ತಾತ್ರಿ, ಎಸ್. ಜ್ಞಾನೇಶ್ವರ್, ಎಸ್.ಎನ್. ಚನ್ನಬಸಪ್ಪ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ, ಮುಖಂಡರಾದ ಎನ್.ಜೆ. ರಾಜಶೇಖರ್, ಗಿರೀಶ್ ಪಟೇಲ್, ಸ್ಬೂಡಾ ನೂತನ ಸದಸ್ಯರಾದ ಉಮಾಮೂರ್ತಿ, ರಾಮಲಿಂಗಯ್ಯ, ವಿ. ಕದಿರೇಶ್, ದೇವರಾಜ್ ಮಂಡೇನಕೊಪ್ಪ ಮತ್ತಿತರರು ಉಪಸ್ಥಿತರಿದ್ದರು.

By admin

ನಿಮ್ಮದೊಂದು ಉತ್ತರ

You missed

error: Content is protected !!