ಶಿವಮೊಗ್ಗ
ಮೂಲಭೂತ ಸೌಲಭ್ಯಗಳಿಂದ ವಂಚಿತ ಜಿಲ್ಲೆಯ ಗ್ರಾಮೀಣ ಮಕ್ಕಳು ದೇಶದ ಸತ್ಪ್ರಜೆಗಳಾಗಿ ರೂಪುಗೊಂಡು ಜಿಲ್ಲೆಗೆ ಕೀರ್ತಿ ತರವಂತರಾಗಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಹೇಳಿದರು.
ಅವರು ಇಂದು ರಾಜ್ಯ ಸರ್ಕಾರಿ ನೌಕರರ ಸಂಘ ಶಿವಮೊಗ್ಗ ಘಟಕ ಮತ್ತು ನೆಹರೂ ಕ್ರೀಡಾಂಗಣ ಗೆಳೆಯರ ಬಳಗ ಇವರುಗಳ ಸಂಯುಕ್ತಾಶ್ರಯದಲ್ಲಿ ಶಿವಮೊಗ್ಗ ತಾಲೂಕಿನ ಬ್ಯಾಡರಹೊಸಳ್ಳಿ, ಮೇಲಿನಹನಸವಾಡಿ, ವಡ್ಡರಹಟ್ಟಿ, ಬೆಳಲಕಟ್ಟೆ, ಮಿಳ್ಳಘಟ್ಟ ಮುಂತಾದ ಹಿಂದುಳಿದ ಗ್ರಾಮಗಳ ಸರ್ಕಾರಿ ಶಾಲೆಯ ಮಕ್ಕಳಿಗೆ ಉಚಿತ ನೋಟ್‌ಪುಸ್ತಕ, ಸ್ಕೂಲ್ ಬ್ಯಾಗ್, ಜಾಮೆಂಟ್ರಿ ಬಾಕ್ಸ್ ಮತ್ತು ಗುಣಮ ಟ್ಟದ ಪಠ್ಯ ಸಾಮಗ್ರಿಗಳನ್ನು ವಿತರಿಸಿ ಮಾತನಾಡುತ್ತಿದ್ದರು.
ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅನುಕೂ ಲವಾಗುವಂತೆ ಅವರ ಶೈಕ್ಷಣಿಕ ಚಟುವಟಿ ಕೆಗಳಿಗೆ ಅಗತ್ಯವಾಗುವ ಸಕರಣೆಗಳನ್ನು ವಿತರಿಸಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ತಾಲೂ ಕಿನ ೧೦೦೦ವಿದ್ಯಾರ್ಥಿಗಳಿಗೆ ಸೌಲಭ್ಯಗಳನ್ನು ಉದ್ದೇಶಿಸಲಾಗಿದೆ. ಈ ಸಂಬಂಧ ತಾಲೂಕಿನ ೨೦ ಶಾಲೆಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದ ಅವರು ಈ ಸೌಲಭ್ಯವನ್ನು ಪಡೆದ ವಿದ್ಯಾರ್ಥಿಗಳು ಉನ್ನತ ವಿದ್ಯಾಬ್ಯಾಸ ಪಡೆದು, ಭವಿಷ್ಯದಲ್ಲಿ ಇತರರಿಗೆ ಸೌಲಭ್ಯ ನೀಡುವಂತಾಗಬೇಕೆಂದವರು ನುಡಿದರು.
ಈ ಕಾರ್ಯದಲ್ಲಿ ನೆಹರೂ ಕ್ರೀಡಾಂಗ ಣದ ಗೆಳೆಯರ ಬಳಗ ಸೇರಿದಂತೆ ಅನೇಕ ಉದ್ಯಮಿಗಳು ಸಹಾಯಹಸ್ತ ನೀಡಲಿದ್ದಾರೆ. ಅವರ ನೆರವಿನೊಂದಿಗೆ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಯತ್ನಿಸಲಾಗು ವುದು ಎಂದ ಅವರು, ಈಗಾಗಲೇ ಗ್ರಾಮೀಣ ಪ್ರದೇಶ ಮಾತ್ರವಲ್ಲದೇ ನಗರದ ಕೆಲವು ಆಯ್ದ ಶಾಲೆಗಳ ವಿದ್ಯಾರ್ಥಿಗಳಿಗೂ ಸೌಲಭ್ಯಗಳನ್ನು ವಿತರಿಸಲಾಗಿದೆ ಎಂದರು.
ಈ ಕಾರ್ಯಕ್ರಮಗಳಲ್ಲಿ ಉಪಸ್ಥಿತರಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ್ ಅವರು ಮಾತನಾಡಿ, ಸರ್ಕಾರವು ಸರ್ಕಾರಿ ಶಾಲೆಯ ಮಕ್ಕಳಿಗೆ ಪಠ್ಯಪುಸ್ತಕ, ಸಮವಸ್ತ್ರ, ಶೂ ಮತ್ತು ಕಾಲುಚೀಲ ಮುಂತಾದ ಸೌಲಭ್ಯಗಳನ್ನು ಒದಗಿಸುತ್ತಿದೆ. ಸರ್ಕಾರವು ಒದಗಿಸದೇ ಇರುವ ಹಾಗೂ ಮಕ್ಕಳಿಗೆ ಅಗತ್ಯವಿರುವ ಉತ್ತಮ ಗುಣಮಟ್ಟದ ಪಠ್ಯ ಸಾiಗ್ರಿಗಳನ್ನು ಒದಗಿಸುವಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಸಮಾಜ ಮುಖಿಯಾಗಿ ಚಿಂತಿಸಿ, ಕಾರ್ಯಪ್ರವೃತ್ತರಾಗಿರುವುದು ಹರ್ಷದ ಸಂಗತಿಯಾಗಿದೆ ಎಂದರು.
ರಾಜ್ಯ ಸರ್ಕಾರಿ ನೌಕರರ ಸಂಘವು ಕೇವಲ ನೌಕರರ ಹಿತ ಸುಖ ಮಾತ್ರವಲ್ಲದೇ ಸಮಾಜಮುಖಿಯಾಗಿ ಕಾರ್ಯನಿರ್ವಹಿಸುತ್ತಿರು ವುದು, ಅಂತೆಯೇ ಹಲವು ಸಮಾಜಕ್ಕೆ ಪೂರ ಕವಾಗಿರುವ ಹಲವು ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸುತ್ತಿರುವುದು ರಾಜ್ಯದಲ್ಲಿಯೇ ಮಾದರಿ ಕಾರ್ಯವೆನಿಸಿದೆ. ಜನರ ಮೆಚ್ಚುಗೆಗೆ ಪಾತ್ರವಾಗಿದೆ ಎಂದರು.
ಈ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಆರ್.ಮೋಹನ್‌ಕುಮಾರ್, ಕೃಷ್ಣಮೂರ್ತಿ, ಪಾಪಣ್ಣ, ಶಿಕ್ಷಕರ ಸಂಘದ ಅಧ್ಯಕ್ಷ ಡಿ.ಬಿ.ರುದ್ರಪ್ಪ, ದಿನೇಶ್, ಪತ್ರಕರ್ತ ಸೂರ್ಯನಾರಾಯಣ್, ನೆಹರೂ ಕ್ರೀಡಾಂಗಣ ಗೆಳೆಯರ ಬಳಗದ ಪದಾಧಿಕಾರಿಗಳು, ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ಸಿಂಗಪೂರ್‌ನ ಉದ್ಯಮಿ ಗ್ರ್ಯಾಂಡರ್ ಸೇರಿದಂತೆ ಗ್ರಾಮಗಳ ಮುಖಂಡರು, ಶಾಲೆಗಳ ಮುಖ್ಯೋಪಾ ಧ್ಯಾಯರು, ಸಹಶಿಕ್ಷಕರು, ಪೋಷಕರು ಹಾಗೂ ಮಕ್ಕಳು ಭಾಗವಹಿಸಿದ್ದರು.