ಶಿವಮೊಗ್ಗ
ಶಿವಮೊಗ್ಗ,
ಶಿಕ್ಷಣ ಮತ್ತು ಸಾಕ್ಷರತಾ ಇಲಾ ಖೆಯು ಜಿಲ್ಲಾಡಳಿತ, ಜಿಲ್ಲಾ ಪಂಚಾ ಯತ್ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಸೆಪ್ಟಂಬರ್ ೦೫ರಂದು ಬೆಳಿಗ್ಗೆ ೧೦ಗಂಟೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಭಾರತ ಕಂಡ ಅಗ್ರಗಣ್ಯ ಶಿಕ್ಷಕ,
ಭಾರತದ ಮೊದಲ ಉಪರಾಷ್ಟ್ರಪತಿ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜಯಂತಿ ಹಾಗೂ ಶಿಕ್ಷಕರ ದಿನಾಚರಣೆಯನ್ನು ಅದ್ಧೂರಿ ಯಾಗಿ ಆಚರಿಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ|| ಆರ್.ಸೆಲ್ವ ಮಣಿ ಅವರು ಹೇಳಿದರು.
ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಶಿಕ್ಷಕರ ದಿನಾಚರಣೆ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿ ದ್ದರು. ಈ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಪ್ರಾಥಮಿಕ, ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಗಳ ಪ್ರತಿಭಾವಂತ ೨೧ಶಿಕ್ಷಕರಿಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ನೀಡಲಾಗು ವುದು ಎಂದರು.
ಸಭೆಯಲ್ಲಿ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿದ್ಧಬಸಪ್ಪ, ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕ್ಷೇತ್ರಶಿಕ್ಷ ಣಾಧಿಕಾರಿಗಳಾದ ಉಮಾಶಂಕರ್, ಲೋಕೇಶ್, ನಾಗರಾಜ್, ರಾಮೇಗೌಡ, ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಡಿ.ಬಿ.ರು ದ್ರಪ್ಪ, ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಎಂ.ರವಿ, ಧರ್ಮಪ್ಪ ಇತರರಿದ್ದರು.