ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್‌ ಆದೇಶ
ಬೆಂಗಳೂರು: ಪೊಲೀಸರು ಕ್ವಾರಂಟೈನ್‌ಗೆ ಒಳಗಾದ ಅವಧಿಯನ್ನು ಕರ್ತವ್ಯದ ಅವಧಿ ಎಂದು ಪರಿಗಣಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ.
ಕೊರೊನಾ ಸೋಂಕು ಹರಡುವಿಕೆ ತಡೆಯಲು ಕಳೆದ 26 ದಿನಗಳಿಂದ ಪೊಲೀಸರು ನಿರಂತರವಾಗಿ ಕರ್ತವ್ಯ ನಿರ್ವಹಣೆ ಮಾಡಿ ಸಾರ್ವಜನಿಕರ ಮೆಚ್ಚುಗೆ ಗಳಿಸಿದ್ದಾರೆ.
ಇತ್ತೀಚೆಗೆ ಪೊಲೀಸರು ಸಹ ಮಾಹಾಮಾರಿ ಸೋಂಕಿಗೆ ಒಳಗಾಗುತ್ತಿದ್ದು, ಇದು ಇಲಾಖೆಯ ಸಿಬ್ಬಂದಿಯನ್ನು ಆತಂಕಕ್ಕೀಡು ಮಾಡಿದೆ. ಸೋಂಕಿತರ ಜೊತೆ ಸಂಪರ್ಕ ಹೊಂದಿದ ಹಲವು ಪೊಲೀಸರು ಸಹ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಇದೀಗ ಪೊಲೀಸ್ ಸಿಬ್ಬಂದಿಗಳ ಆತ್ಮಸ್ಥೈರ್ಯ ಹೆಚ್ಚಿಸುವ ಸಲುವಾಗಿ ಇಲಾಖೆ ಹಲವು ಕ್ರಮಗಳನ್ನ ಕೈಗೊಳ್ಳಲು ಮುಂದಾಗಿದೆ.
ಪೊಲೀಸರು ಇನ್ಮುಂದೆ ಕರ್ತವ್ಯದ ಅವಧಿಯಲ್ಲಿ ಸೋಂಕಿತನ ಸಂಪರ್ಕ ಹೊಂದಿ ಹೋಂ ಕ್ವಾರಂಟೈನ್ ಇಲ್ಲವೇ ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಗಾದರೆ ಆ ಅವಧಿಯನ್ನು ಕರ್ತವ್ಯದ ಅವಧಿ ಎಂದು ಪರಿಗಣಿಸಲಾಗುತ್ತದೆ ಎಂದು ಆದೇಶಿಸಿದ್ದಾರೆ. ರಾಜ್ಯದಲ್ಲಿ ಮಾಹಾಮಾರಿ ವ್ಯಾಪಕವಾಗಿ ಹರಡುತ್ತಿದ್ದು, ಪೊಲೀಸರು ಪ್ರತಿನಿತ್ಯ ಸಾರ್ವಜನಿಕರ ಜೊತೆ ನೇರ ಸಂಪರ್ಕದಲ್ಲಿ ಇರುತ್ತಾರೆ.
ಅಪರಾಧ ಕೃತ್ಯಗಳಲ್ಲಿ ಆರೋಪಿಗಳನ್ನು ಬಂಧಿಸುವ ವೇಳೆಯೂ ಪೊಲೀಸರು ಸೋಂಕಿಗೆ ತುತ್ತಾಗುವುದು, ಇಲ್ಲವೇ ಸೋಂಕಿತರ ಸಂಪರ್ಕಕ್ಕೆ ಬರುವುದು ಇತ್ತೀಚೆಗೆ ಕಂಡು ಬರುತ್ತಿದೆ. ಅಲ್ಲದೇ ಹೆಚ್ಚಿನ ಪೊಲೀಸ್ ಸಿಬ್ಬಂದಿ ಕ್ವಾರಂಟೈನ್‌ಗೆ ಒಳಗಾಗುತ್ತಿರುವುದರಿಂದ ಅಂತಹ ಸಂದರ್ಭವನ್ನು ಕರ್ತವ್ಯದ ಅವಧಿಯಾಗಿ ಸೂಚಿಸಲಾಗಿದೆ.

By admin

ನಿಮ್ಮದೊಂದು ಉತ್ತರ

error: Content is protected !!