————————
ಜಿಲ್ಲಾ ಕೃಷಿ ಇಲಾಖೆಯು ೨೦೨೨-೨೩ನೇ ಸಾಲಿನ ಆತ್ಮ ಯೋಜನೆಯಡಿ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಶ್ರೇಷ್ಠ ಕೃಷಿಕ ಪ್ರಶಸ್ತಿಗಾಗಿ ಹಾಗೂ ಜಿಲ್ಲಾ ಮಟ್ಟದಲ್ಲಿ ರಚಿತವಾದ ಗುಂಪುಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತ ರೈತರು/ರೈತ ಗುಂಪಿನವರು ನಿಗಧಿತ ನಮೂನೆ ಅರ್ಜಿಯನ್ನು ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ಸಮೀಪದ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳ ಕಚೇರಿಯಿಂದ ಪಡೆದು, ಭರ್ತಿ
ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ದಿ: ೨೬/೦೯/೨೦೨೨ರೊಳಗಾಗಿ ಸಲ್ಲಿಸುವಂತೆ ಯೋಜನಾ ನಿರ್ದೇಶಕರು (ಆತ್ಮ) ಹಾಗೂ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-272635 ಯನ್ನು ಸಂಪರ್ಕಿಸುವುದು.