ವಡೋದರಾದ 87 ವರ್ಷದ ವೃದ್ಧೆ ಮಹಿಳಾ ಸಹಾಯವಾಣಿಗೆ ಕರೆ ಮಾಡಿ ತನ್ನ ಪತಿಯ ವಿರುದ್ಧ ದೂರು ನೀಡಿದ್ದು, ಕರೆಯನ್ನು ಸ್ವೀಕರಿಸಿದ ಅಭಯಂ ತಂಡ ನಿಜಕ್ಕೂ ದಿಗ್ಭ್ರಮೆಗೊಂಡಿದೆ.
ಹೌದು… ಗುಜರಾತ್‌ನ ಎಲ್ಲಾ ಮಹಿಳಾ ನಿವಾಸಿಗಳಿಗೆ ಸರ್ಕಾರ ಟೋಲ್-ಫ್ರೀ ಮಹಿಳಾ ಸಹಾಯವಾಣಿ ಸಂಖ್ಯೆ -181 ಅಭಯಂ ಯೋಜನೆ ರೂಪಿಸಿದ್ದು, ಇದಕ್ಕೆ ಕರೆ ಮಾಡಿ ದೂರು ನೀಡಿರುವ 87 ವರ್ಷದ ವೃದ್ಧೆಯೊಬ್ಬರು 89 ವರ್ಷದ ತನ್ನ ಪತಿ ಪದೇ, ಪದೇ ಲೈಂಗಿಕ ಕ್ರಿಯೆ ನಡೆಸುವಂತೆ ಕಿರುಕುಳ ನೀಡುತ್ತಾನೆ. ಆತನಿಂದ ಹೇಗಾದರೂ ಪಾರು ಮಾಡುವಂತೆ ವೃದ್ಧೆ ತನ್ನ ಅಳಲನ್ನು ತೋಡಿಕೊಂಡಿದ್ದಾರೆ.


89 ವರ್ಷದ ತನ್ನ ಪತಿ ಇಂಜಿನಿಯರ್ ಆಗಿದ್ದರು. ವಡೋದರದ ಸಯಾಜಿಗಂಜ್ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ. ವಯಸ್ಸಾದರೂ ಲೈಂಗಿಕ ಕ್ರಿಯೆ ನಡೆಸುವಂತೆ ಒತ್ತಾಯಿಸುತ್ತಿದ್ದರು. ಅಲ್ಲದೇ ಇಬ್ಬರಿಗೂ ಹಲವಾರು ವರ್ಷಗಳಿಂದ ಆರೋಗ್ಯ ಸಂಬಂಧ ಸಮಸ್ಯೆಗಳಿದೆ. ತಮ್ಮ ಮಗ ಹಾಗೂ ಸೊಸೆಯೊಂದಿಗೆ ವೃದ್ಧ ದಂಪತಿ ನೆಲೆಸುತ್ತಿರುವುದಾಗಿ ವೃದ್ಧೆ ತಿಳಿಸಿದ್ದಾರೆ.

By admin

ನಿಮ್ಮದೊಂದು ಉತ್ತರ

error: Content is protected !!