ಸಚಿವರೊಬ್ಬರು ನಡೆಸಿರುವ ಹಗರಣಕ್ಕೆ ಸಂಬಂಧಪಟ್ಟಂತೆ ದಾಖಲೆ ಬಿಡುಗಡೆಗೆ ಸಮಯಾವಕಾಶ ನೀಡುವಂತೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಮನವಿ ಮಾಡಿದ್ದಾರೆ.


ಸುದ್ದಿಗಾರರ ಜತೆ ಮಾತನಾಡಿದ ಅವರು, ದಾಖಲೆ ಬಿಡುಗಡೆ ಮಾಡುವುದಕ್ಕಾಗಿ ಸ್ಪೀಕರ್ ಗೆ ಅವಕಾಶ ಕೇಳಿದ್ದೇನೆ.ಸ್ಪೀಕರ್ ಗೆ ಇಂದು ಬೆಳಗ್ಗೆ ದೂರವಾಣಿ ಕರೆ ಮಾಡಿ ಮಾತಾಡಿದ್ದೇನೆ.


ರಾಜಕೀಯ ನಿವೃತ್ತಿಗೆ ಸಿದ್ಧ: ಬೆಂಗಳೂರಲ್ಲಿ ಒತ್ತುವರಿ ತೆರವು ಮಾಡ್ತಾ ಇರುವ ಬಗ್ಗೆ ಸದನದಲ್ಲಿ ಮಾತಾಡಿದ್ದೇನೆ. ನನ್ನ ಕಾಲದಲ್ಲಿ ಬೆಂಗಳೂರು ಜನತೆಗೆ ಏನಾದರೂ ಮೋಸ ಮಾಡಿದ್ದೇನೆ ಎಂದು ಹೇಳಿದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸವಾಲು ಹಾಕಿದರು.

By admin

ನಿಮ್ಮದೊಂದು ಉತ್ತರ

error: Content is protected !!