ಶಿವಮೊಗ್ಗ
ಧನಾತ್ಮಕ ಮನೋಭಾವ ಮತ್ತು ಆತ್ಮವಿಶ್ವಾಸ ಯಾವುದೇ ಕ್ರೀಡೆಗಳನ್ನು ಗೆಲ್ಲಲು ಸಹಕರಿಸುತ್ತವೆ. ಈ ನಿಟ್ಟಿನಲ್ಲಿ ಎಲ್ಲ ಕ್ರೀಡಾಪಟುಗಳು ತಮ್ಮ ಗುರಿಯತ್ತ ಗಮನ ಹರಿಸಿ ಮುನ್ನಡೆಯಬೇಕೆಂದು ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯ ದರ್ಶಿ ಮಲ್ಲಿಕಾರ್ಜುನ ತೊಗಲಬಾಗಿ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ,
ಸಾರ್ವಜನಿಕ ಶಿಕ್ಷಣ ಇಲಾಖೆ ಶಿವಮೊಗ್ಗ ಹಾಗೂ ವಿವಿಧ ಕ್ರೀಡಾ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಇಂದು ನೆಹರು ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ ೨೦೨೨-೨೩ ನೇ ಸಾಲಿನ ಬೆಂಗಳೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟವನ್ನು ಬಲೂನ್ ಗಳನ್ನು ಹಾರಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಯಾವುದೇ ಕ್ರೀಡಾಪಟು ಧನಾತ್ಮಕ ಮನೋಭಾವ ಹೊಂದು ವುದು ಅತಿ ಮುಖ್ಯ. ಜೊತೆಗೆ ಆತ್ಮ ವಿಶ್ವಾಸ ಇರಬೇಕು.
ಇವೆರಡರೊಂದಿಗೆ ಗುರಿ ಸಾಧನೆಯೆಡೆ ಗಮನ ಹರಿಸಿ ಗೆಲುವು ತಮ್ಮದಾಗಿಸಿಕೊಳ್ಳ ಬಹುದು ಎಂದ ಅವರು ನೋಬಲ್ ಪಾರಿತೋಷಕ ಪ್ರಶಸ್ತಿ ವಿಜೇತ ಥಾಮಸ್ ಆಲ್ವಾ ಎಡಿಸನ್ ಅವರ ತಾಯಿ ಹೇಗೆ ತನ್ನ ಮಗನಲ್ಲಿ ಧನಾತ್ಮಕ ಮನೋಭಾವ ಮೂಡಿಸಿ, ಜೀವನ ದಲ್ಲಿ ಮುನ್ನಡೆಯುವಂತೆ ಮಾಡಿದಳು ಎಂಬ ಉದಾಹರಣೆಯೊಂದಿಗೆ ಕ್ರೀಡಾಪಟುಗಳನ್ನು ಹುರಿದುಂಬಿಸಿದರು.
ವಾಲಿಬಾಲ್ ಅಸೋಸಿಯೇ ಷನ್ನ ಕಾರ್ಯಾ ಧ್ಯಕ್ಷ ಕಾಂತೇಶ್.ಕೆ.ಇ ಮಾತನಾಡಿ, ಕ್ರೀಡೆಯನ್ನು ಕೇವಲ ಆಟವೆಂದು ಳ್ಳದೆ, ಸವಾಲೆಂದು ಸ್ವೀಕರಿಸಿ ಕ್ರೀಡಾ ಮನೋಭಾವ ದಿಂದ ಆಟವಾಡಬೇಕು. ಜೀವನದಲ್ಲಿ ಒಳ್ಳೆಯ ಮತ್ತು ಕೆಟ್ಟ ಪರಿಸ್ಥತಿಗಳು ಎದುರಾಗುತ್ತವೆ. ಒಳ್ಳೆಯದನ್ನು ಸ್ವೀಕರಿಸಿ, ಹೆತ್ತ ತಂದೆ-ತಾಯಿ ಗಳೊಟ್ಟಿಗಿದ್ದು ದೇಶಕ್ಕೆ ಉತ್ತಮ ಕೊಡುಗೆ ನೀಡಬೇಕು ಎಂದ ಅವರು ಕ್ರೀಡೆಗಳಿಂದ ಕ್ರೀಡಾ ಪಟುಗಳ ಬಾಳು ಬೆಳಗಲಿ ಎಂದು ಹಾರೈಸಿದರು.
ವಿಭಾಗ ಮಟ್ಟದ ಈ ಕ್ರೀಡಾಕೂಟದಲ್ಲಿ ಸೆ.೧೯ ಮತ್ತು ೨೦ ರಂದು ಬೆಂಗಳೂರು ವಿಭಾಗ ಮಟ್ಟದ ಶಿವಮೊಗ್ಗ, ದಾವಣಗೆರೆ, ಚಿಕ್ಕಬಳ್ಳಾಪುರ, ರಾಮನಗರ, ತಮಕೂರು ಸೇರಿಂತೆ ೮ ಜಿಲ್ಲೆಗಳ ಕ್ರೀಡಾಪಟುಗಳಿಗೆ ಅಥ್ಲೆಟಿಕ್ಸ್, ವಾಲಿಬಾಲ್, ಬ್ಯಾಸ್ಕೆಟ್ಬಾಲ್, ಷಟಲ್ ಬ್ಯಾಡ್ಮಿಂಟನ್, ಟೆನ್ನಿಸ್ ಮತ್ತು ಈಜು ಸ್ಪರ್ಧೆಗಳು ನಡೆಯಲಿವೆ.
ವೇದಿಕೆಯಲ್ಲಿ ಜಿಲ್ಲಾ ದೈಹಿಕ ಶಿಕ್ಷಣ ನಿರ್ದೇಶಕ ನಾಗರಾಜ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥಸ್ವಾಮಿ, ಒಲಂಪಿಕ್ಸ್ ಅಸೋಸಿ ಯೇಷನ್ನ ಕಾರ್ಯದರ್ಶಿ ಶಶಿ ಮತ್ತಿತರರಿದ್ದರು.