ಶಿವಮೊಗ್ಗ,
ಪ್ರತಿಯೊಬ್ಬರಲ್ಲಿಯೂ ಪ್ರತಿಭೆಯಿರುತ್ತದೆ ಆ ಪ್ರತಿಭೆಗೆ ತಕ್ಕ ಪ್ರೋತ್ಸಾಹ ದೊರೆತರೆ ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ್ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.


ಅವರು ನೆಹರೂ ಕ್ರೀಡಾಂಗಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಶಿವಮೊಗ್ಗ, ಹಾಗೂ ಅನನ್ಯ ಆಂಗ್ಲಮಾಧ್ಯಮ ಪ್ರೌಢಶಾಲೆ ಅಶೋಕ ನಗರ, ಶಿವಮೊಗ್ಗ. ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ೧೭ ವರ್ಷ ವಯೋಮಿತಿಯೊಳಗಿನ ಪ್ರೌಢಶಾಲಾ ಬಾಲಕ-ಬಾಲಕಿಯರ ಅನುದಾನರಹಿತ ಎ ಮತ್ತು ಬಿ ವಲಯ ಮಟ್ಟದ ಕ್ರೀಡಾ ಕೂಟದಲ್ಲಿ ಭಾಗವಹಿಸಿ ಮಾತನಾಡುತ್ತಾ, ಆರೋಗ್ಯವಂತ ರಾಗಲು ಕ್ರೀಡೆ ಸಹಕಾರಿ ಆಗುತ್ತದೆ, ಕ್ರೀಡೆ ಯಿಂದ ಶಿಸ್ತು, ಸಂಯಮ ವೃದ್ಧಿಯಾಗುವುದು ಎಂದು ಕ್ರೀಡಾಪಟುಗಳಿಗೆ ಕರೆ ನೀಡಿದರು.


ಧ್ವಜಾರೋಹಣ ನೆರವೇರಿಸಿ ಮಾತನಾ ಡಿದ ವಿಕಾಸ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಎ. ಜೆ. ರಾಮಚಂದ್ರ ಮಾತನಾಡುತ್ತ, ಮಾನಸಿಕ ಹಾಗೂ ದೈಹಿಕವಾಗಿ ಸದೃಡವಾಗಿರಲು ಕ್ರೀಡೆ ಸಹಕಾರಿಯಾಗುತ್ತದೆ. ಸೋಲು-ಗೆಲುವು ಮುಖ್ಯವಲ್ಲ, ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಆ ನಿಟ್ಟಿನಲ್ಲಿ ಸತತ ಅಭ್ಯಾಸ ಮಾಡುವುದರಿಂದ ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯ ಎಂದು ಕ್ರೀಡಾಪಟುಗಳಿಗೆ ತಿಳಿಸಿದರು.


ಸಂಸ್ಥೆಯ ಅಧ್ಯಕ್ಷ ಶ್ರೀನಿವಾಸ್ ಮೂರ್ತಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಅನನ್ಯ ಸಂಸ್ಥೆಯ ಕಾರ್ಯದರ್ಶಿ ಆರ್. ಗಿರೀಶ್, ಅಕ್ಸ?ಫರ್ಡ್ ಸಂಸ್ಥೆಯ ಕಾರ್ಯದರ್ಶಿ ಶ್ರೀನಿವಾಸ್, ಜ್ಞಾನಗಂಗಾ ಸಂಸ್ಥೆಯ ಕಾರ್ಯದರ್ಶಿ ದಿನೇಶ್, ದೈಹಿಕ ಶಿಕ್ಷಣ ಅಧಿಕಾರಿ ನಾಗರಾಜ್, ಹಾಗೂ ಮುಖ್ಯ ಶಿಕ್ಷಕರು ಮತ್ತಿತರರಿದ್ದರು.

By admin

ನಿಮ್ಮದೊಂದು ಉತ್ತರ

error: Content is protected !!