ಶಿವಮೊಗ್ಗ: ಶಾಸಕ ರೇಣುಕಾಚಾರ್ಯ ಸೋದರನ ಪುತ್ರನ ಸಾವಿನ ಸುದ್ದಿ ಆಘಾತ ತಂದಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೇಣುಕಾಚಾರ್ಯ ಸೋದರನ ಮಗ ಚಂದ್ರಶೇಖರ್ ಸಾವು ಮೇಲ್ನೋಟಕ್ಕೆ ಕೊಲೆ ಎಂದು ಕಾಣಿಸುತ್ತಿದೆ. ಇದರ ಬಗ್ಗೆ ಸಮಗ್ರ ತನಿಖೆ ನಡೆಸಲಾಗುತ್ತದೆ. ಈಗಾಗಲೇ ಗೃಹ ಸಚಿವರ ಜೊತೆ ನಾನು ಮಾತನಾಡಿದ್ದೇನೆ. ಈ ಪ್ರಕರಣದ ಸಂಬಂಧ ಸಮಗ್ರ ತನಿಖೆ ಮಾಡಿಸುತ್ತೇವೆ. ಶೀಘ್ರದಲ್ಲೇ ಸತ್ಯ ಗೊತ್ತಾಗಲಿದೆ ಎಂದರು.

ಗುಜರಾತ್ ಚುನಾವಣೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಯಡಿಯೂರಪ್ಪ, ಗುಜರಾತ್ ನಲ್ಲಿ ಕ್ಲೀನ್ ಸ್ವೀಪ್ ಮಾಡುತ್ತೇವೆ. ಮೂರನೇ ಎರಡಕ್ಕೂ ಅಧಿಕ ಸ್ಥಾನ ಗಳಿಸಲಿದ್ದೇವೆ ಎಂದರು.

By admin

ನಿಮ್ಮದೊಂದು ಉತ್ತರ

You missed

error: Content is protected !!