ಶಿವಮೊಗ್ಗ, ನ.17:

ನಾಳೆಯಿಂದ ಎರಡು ದಿನ ಶಿವಮೊಗ್ಗ ನಗರದಲ್ಲಿ ನೀರು ಸರಬರಾಜು ಇರುವುದಿಲ್ಲ. ಶಿವಮೊಗ್ಗ ನಗರದಲ್ಲಿ ನ.18 ಹಾಗೂ 19ರಂದು ದೈನಂದಿನ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.


ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಗಾಜನೂರು ಮೂಲ ಸ್ಥಾವರದಲ್ಲಿ ವಿದ್ಯುತ್ ಪೂರೈಕೆ ನಿಲುಗಡೆ ಇರುವುದರಿಂದ ಎರಡು ದಿನಗಳ ಕಾಲ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕನನೀಸ ಮತ್ತು ಒಚ ಮಂಡಳಿ ಕೋರಿದೆ.

ಇಂದು ಮತ್ತು ನಾಳೆ ಇಲ್ಲೆಲ್ಲಾ ಕರೆಂಟಿಲ್ಲ…

ಶಿವಮೊಗ್ಗದ ಈ ಎಲ್ಲ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ.
ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿAದ ಸರಬರಾಜಾಗುವ ಫೀಡರ್ ಎಎಫ್-8 ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ನವೆಂಬರ್ 17ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.


ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ:
ಜಯದೇವ ಬಡಾವಣೆ, ಶಿವಪ್ಪ ನಾಯಕ ಬಡಾವಣೆ, ಕೆಎಸ್’ಆರ್’ಟಿಸಿ ಲೇಔಟ್, ರೇಣುಕಾಂಬಾ ಬಡಾವಣೆ, ಕಟ್ಟೆ ಸುಬ್ಬಣ್ಣ ಕಾಂಪ್ಲೆಕ್ಸ್, ವೀರಣ್ಣ ಲೇಔಟ್, ಕೆಂಚಪ್ಪ ಲೇಔಟ್, ಕರಿಯಣ್ಣ ಬಿಲ್ಡಿಂಗ್, ಕಲ್ಲಹಳ್ಳಿ ಎ,ಬಿ,ಸಿ,ಡಿ,ಇ,ಎಫ್,ಜಿ,ಎಚ್ ಬ್ಲಾಕ್, ಎಸ್’ಕೆಎನ್ ಶಾಲೆ, ಪೊಲೀಸ್ ಚೌಕಿ, ಹುಚ್ಚರಾಯ ಕಾಲೋನಿ, ಚೇತನಾ ಪಾರ್ಕ್,ಲಕ್ಷ್ಮೀಪುರ, ಪ್ರಿಯದರ್ಶಿನಿ ಲೇಔಟ್, ತಿಮ್ಮಕ್ಕ ಲೇಔಟ್, ಪೊಲೀಸ್ ಚೌಕಿ ಸುತ್ತಮುತ್ತಲಿನ ಪ್ರದೇಶಗಳು.


ನಾಳೆ ಇಲ್ಲಿ ಕರೆಂಟ್ ಕಟ್


ಗಾಜನೂರು 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಮ್ಮಿಕೊಂಡಿರುವುದರಿಂದ ಎಫ್-2, ಎಫ್-3, ಎಫ್-4, ಎಫ್-5 ಮತ್ತು ಎಫ್-6 ಸಕ್ರೆಬೈಲ್ ಮಾರ್ಗಗಳಿಂದ ವಿದ್ಯುತ್ ಸರಬರಾಜು ಪಡೆಯುವ ಗ್ರಾಮಗಳಲ್ಲಿ ನ.18ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.


ಗಾಜನೂರು ಕ್ಯಾಂಪ್ ಮತ್ತು ಡ್ಯಾಂ, ಸಕ್ರೆಬೈಲ್, ನವೋದಯ ಶಾಲೆ, ಶಿವಮೊಗ್ಗ ಕುಡಿಯುವ ನೀರಿನ ಸ್ಥಾವರ, ಹಾಲಲಕ್ಕವಳ್ಳಿ ಕಡೇಕಲ್, ಯರಗನಾಳ್, ಕುಸ್ಕೂರು, ಸಿದ್ದರಹಳ್ಳಿ, ಮಂಡೇನಕೊಪ್ಪ, ಶ್ರೀಕಂಠಪುರ, ವೀರಾಪುರ, ತಟ್ಟೆಕೆರೆ, ಹೊಸಕೊಪ್ಪ, ಇಂದಿರಾನಗರ, ಹೊಸಹಳ್ಳಿ, ಮುಳ್ಕೆರೆ, ಆನೆಬಿಡಾರ, ತಿಮ್ಕಾಪುರ ಹಾಗೂ ಸುತ್ತಮುತ್ತ ಗ್ರಾಮಗಳು.

By admin

ನಿಮ್ಮದೊಂದು ಉತ್ತರ

error: Content is protected !!