ಶಿವಮೊಗ್ಗ
ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಸಿಐಟಿಯು ಜಿಲ್ಲಾ ಸಮಿತಿ ನೇತೃತ್ವದಲ್ಲಿ ಇಂದು ಜಿಲ್ಲಾಧಿ ಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.


ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರಾಚ್ಯುಟಿ ಪಾವತಿಸಲು ಸರ್ಕಾರ ಕೂಡಲೇ ನಿರ್ದೇಶನ ನೀಡಬೇಕು. ಅಂಗನವಾಡಿ ನೌಕರರು ಗ್ರಾಚ್ಯುಟಿ ಪಡೆಯಲು ಅರ್ಹರು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಇದರ ಅನ್ವಯ ರಾಜ್ಯಾದ್ಯಂತ ಸಾವಿರಾರು ನಿವೃತ್ತಿ ನೌಕರರು ಅರ್ಜಿ ಸಲ್ಲಿಸಿದ್ದಾರೆ. ಆದರೆ ಕೆಲವು ಕಡೆ ಅಧಿಕಾರಿಗಳು ಅರ್ಜಿಯನ್ನು ತೆಗೆದುಕೊಳ್ಳಲು ನಿರಾಕರಿಸುತ್ತಿದ್ದಾರೆ. ಆದ್ದರಿಂದ ಗ್ರಾಚ್ಯುಟಿ ಸಲ್ಲಿಸಿರುವ ಅರ್ಜಿದಾರರಿಗೆ ರಾಜ್ಯ ಸರ್ಕಾರ ಕೂಡಲೇ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.


ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ ಬಲಿಷ್ಠಪಡಿಸಬೇಕು. ಕೆಲಸದ ಭಾರ ಇಳಿಸಬೇಕು. ಅಂಗನವಾಡಿ ಕೇಂದ್ರಗಳಲ್ಲಿ ವಿವಿಧ ಇಲಾಖೆಗಳ ಸರ್ವೆ ಕೆಲಸಗಳನ್ನು ಕೈಬಿಡಬೇಕು. ಅಂಗನವಾಡಿ ಕೇಂದ್ರಗಳಿಗೆ ಗುಣಮಟ್ಟದ ಆಹಾರ ಒದಗಿಸಬೇಕು. ಹೊಸ ಮೊಬೈಲ್ ನೀಡಬೇಕು. ಅಂಗನವಾಡಿ ಕೇಂದ್ರಗಳಲ್ಲಿ ಯೇ ಎಲ್.ಕೆ.ಜಿ., ಯುಕೆಜಿ ತರಗತಿ ಆರಂಭಿಸಬೇಕು. ಎಸ್‌ಎಸ್‌ಎಲ್‌ಸಿ ಹಾಗೂ ಪದವೀಧರರಿಗೆ ತರಬೇತಿ ನೀಡಬೇಕು. ಶಿಕ್ಷಕರನ್ನಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು.


ಹೊಸದಾಗಿ ಪ್ರಾರಂಭವಾಗುತ್ತಿರುವ ೪೫೦೦ ಅಂಗನವಾಡಿ ಕೇಂದ್ರಗಳನ್ನು ಈಗಾಗಲೇ ಇರುವ ಮಿನಿ ಅಂಗನವಾಡಿ ಕೇಂದ್ರಗಳ ಅನ್ವಯ ಇದರ ಅಡಿಯಲ್ಲಿ ಪೂರ್ಣ ಕೆಂದ್ರಗಳನ್ನಾಗಿ ಪರಿವರ್ತಿಸಬೇಕು. ನ್ಯಾಯಯುತ ಮುಂಬಡ್ತಿಗಳನ್ನು ಕೊಡಲು ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು. ವರ್ಗಾವಣೆಗಳಿಗೆ ಅರ್ಹತೆ ಇದ್ದರೂ ಜನಪ್ರತಿನಿಧಿಗಳ ಆಜ್ಞೆಯಂತೆ ನಡೆಯುವ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.


ಪ್ರತಿ ತಿಂಗಳು ೫ನೇ ತಾರೀಖಿನೊಳಗೆ ವೇತನ ಪಾವತಿಸಬೇಕು. ಅಂಗನವಾಡಿ ಕಾರ್ಯಕರ್ತೆಯರನ್ನು ಕಾಯಂಗೊಳಿಸಬೇಕು. ಕೆಲಸದಿಂದ ತೆಗೆದು ಹಾಕಿರುವ ಕಾರ್ಯಕರ್ತೆಯರನ್ನು ಪುನಃ ಕೆಲಸಕ್ಕೆ ಸೇರಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಪ್ರಮುಖರಾದ ಶೈಲಜಾ, ಎಸ್. ವರಲಕ್ಷ್ಮಿ, ಆರ್. ಮಂಜುಳಾ, ಹೆಚ್. ಜಯಲಕ್ಷ್ಮಿ, ಹೆಚ್.ಎಸ್. ಸುನಂದಾ, ಶ್ಯಾಮಲಾ, ಪ್ರಭಾ ಮತ್ತಿತರರಿದ್ದರು.

By admin

ನಿಮ್ಮದೊಂದು ಉತ್ತರ

error: Content is protected !!