ಶಿವಮೊಗ್ಗ : ನಗರದಲ್ಲಿ ಆಟೋ ದರ ನಿಗಧಿಪಡಿಸುವುದಕ್ಕೆ ಸಂಬಂಧಿಸಿದಂತೆ ಡಿಸೆಂಬರ್ ಕೊನೆಯವರೆಗೆ ಸಮಯ ನಿಗಧಿಪಡಿಸಲಾಗಿದೆ. ಈ ಅವಧಿಯೊಳಗಾಗಿ ನಗರದ ಎಲ್ಲಾ ಆಟೋಗಳ ಚಾಲಕರು ತಮ್ಮ ವಾಹನಕ್ಕೆ ಡಿಜಿಟಲ್ ಮೀಟರ್ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.


ಸಮವಸ್ತ್ರ ಧರಿಸುವುದು ಕಡ್ಡಾಯವಾಗಲಿದೆ. ತಪ್ಪಿದಲ್ಲಿ ಕಾನೂನು ಕ್ರಮ ಅನಿವಾರ್ಯವಾಗಲಿದೆ. ರೈಲ್ವೇ ನಿಲ್ದಾಣದಿಂದ ನಗರದ ಬೇರೆ-ಬೇರೆ ಪ್ರದೇಶಗಳಿಗೆ ಹೊರಡುವ ಪ್ರವಾಸಿಗರ ಅನುಕೂಲಕ್ಕಾಗಿ ಸಾರಿಗೆ ನಿಗಮದ ಬಸ್ಸುಗಳನ್ನು ನಿಯೋಜಿಸಲಾಗುವುದು ಎಂದಿದ್ದಾರೆ.

ಈಗಾಗಲೇ ಸಮೀಕ್ಷಾ ಕಾರ್ಯ ಪ್ರಗತಿಯಲ್ಲಿದೆ. ಜೊತೆಗೆ ಕಂದಾಯ ಇಲಾಖೆ ಮತ್ತು ಅರಣ್ಯ ಇಲಾಖೆಗಳಿಂದ ಮಾಹಿತಿ ಪಡೆದು ಸರ್ಕಾರದ ಸೂಚನೆಯಂತೆ ಡಿಸೆಂಬರ್ 20ರೊಳಗಾಗಿ ಶರಾವತಿ ಸಂತ್ರಸ್ಥರ ಸಮಸ್ಯೆಗಳ ಕುರಿತ ಸಮಗ್ರ ವರದಿ ನೀಡಲಾಗುವುದು. ಈ ಹಿಂದಿನ ಸಮೀಕ್ಷೆಯ ಮಾಹಿತಿ, ಸರ್ವೇ ನಂ. ಹಾಗೂ ಗ್ರಾಮಾವಾರು ಮಾಹಿತಿ ಸಂಗ್ರಹಿಸಲಾಗಿದೆ. -ಡಿಸಿ

By admin

ನಿಮ್ಮದೊಂದು ಉತ್ತರ

error: Content is protected !!