ರಾಕೇಶ್ ಸೋಮಿನಕೊಪ್ಪ

:
ಹೊಸ ವರ್ಷಾಚರಣೆಗೆ ಕೌಂಟ್‌ಡೌನ್ ಶುರುವಾಗಿದ್ದು, ಇದನ್ನು ಸಂಭ್ರಮ ಸಢಗ ರದಿಂದ ಬರಮಾಡಿಕೊಳ್ಳಲು ಶಿವಮೊಗ್ಗ ನಗರ ಸಜ್ಜಾಗಿದೆ. ನಗರದ ಕ್ಲಬ್‌ಗಳು, ಐಷಾ ರಾಮಿ ಹೋಟೆಲ್‌ಗಳು, ರೆಸಾರ್ಟ್‌ಗಳು ಸಂತೋಷ ಕೂಟ ಹಾಗೂ ವಿಶೇಷ ಸಮಾರಂಭಗಳನ್ನು ಹಮ್ಮಿಕೊಂಡಿದೆ.
ಹೊಸ ವರ್ಷಾಚರಣೆಯ ಸಂದರ್ಭ ದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಪೊಲೀಸ್ ಇಲಾಖೆ ಕೆಲವು ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಜಿಲ್ಲಾ ರಕ್ಷಣಾಧಿಕಾರಿ ಅವರು ಹೋಟೆಲ್, ಕ್ಲಬ್ ಮತ್ತು ರೆಸೋರ್ಟ್ ಮಾಲೀಕರು ಹಾಗೂ ವ್ಯವಸ್ಥಾಪಕರಿಗೆ ಸಭೆಯನ್ನು ಕರೆದು ಹಲವು ಸೂಚನೆ ನೀಡಿದ್ದಾರೆ.


ತುರ್ತು ಸಂದರ್ಭದಲ್ಲಿ ಅಥವಾ ಸಹಾಯಕ್ಕಾಗಿ ಕೂಡಲೇ ಹತ್ತಿರದ ಪೊಲೀಸ್ ಠಾಣೆ/ ಪೊಲೀಸ್ ಕಂಟ್ರೋಲ್ ರೂಂ ನಂಬರ್: ೯೪೮೦೮೦೩೩೦೦ / ೦೮೧೮೨-೨೬೧೪೧೩ ಅಥವಾ ತುರ್ತು ಸಹಾಯವಾಣಿ ೧೧೨ ಗೆ ಕರೆ ಮಾಡಲು ಜಿಲ್ಲಾ ರಕ್ಷಣಾಧಿಕಾರಿ ವಿ೧ಥುನ್ ಕುಮಾರ್ ತಿಳಿಸಿದ್ದಾರೆ.


ಹೋಟೆಲ್, ಕ್ಲಬ್ ಮತ್ತು ರೆಸೋರ್ಟ್ ಗಳಲ್ಲಿ ವಿಶೇಷ ಹೆಸರಿನಲ್ಲಿ ಹಲವು ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದ್ದು, ಹಾಡು, ಕುಣಿತ, ಭೋಜನ, ಸಿಡಿಮದ್ದಿನ ಪ್ರದರ್ಶನದಂತಹ ವಿಶೇಷ ವ್ಯವಸ್ಥೆಗಳನ್ನು ಮಾಡಲಾಗಿದೆ. ೩ ಸಾವಿರದಿಂದ ೫ ಸಾವಿರದವರೆಗೆ ದರ ನಿಗಧಿಪಡಿಸಲಾಗಿದ್ದು, ಯುವ ಜೋಡಿಗಳಿಗೆ, ದಂಪತಿಗಳಿಗೆ ವಿಶೇಷ ರಿಯಾಯಿತಿಯನ್ನು ಸಹ ನೀಡಲಾಗಿದೆ.


ಸರ್ವರಿಗೂ ಈ ಹೊಸ ವರ್ಷವೂ ಒಳ್ಳೆಯ ಆಯಸ್ಸು, ಆರೋಗ್ಯ ಹಾಗೂ ಒಳ್ಳೆಯ ಜೀವನಕ್ಕೆ ದಾರಿಯಾಗಲಿ ಎಂದು ತುಂಗಾ ತರಂಗ ಪತ್ರಿಕಾ ಬಳಗ ಹಾರೈಸಿದೆ.

ಹೊಸ ವರ್ಷ ಆಚರಣೆಯನ್ನು ಬೆಳಗಿನ ಜಾವ 1.೦೦ ಗಂಟೆಯೊಳಗೆ ಮುಕ್ತಾಯಗೊಳಿಸುವುದು.

ಮಕ್ಕಳು, ವೃದ್ಧರು ಮತ್ತು ಮಹಿಳೆಯರ ಸುರಕ್ಷತೆಯ ಕುರಿತು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವುದು.

ಸಂಭ್ರಮಾಚರಣೆಯ ವೇಳೆ ಯಾವುದೇ ರೀತಿಯ ಮಾದಕ ವಸ್ತುಗಳನ್ನು ಬಳಸಬಾರದು.

ಮಧ್ಯ ಮಾರಾಟವನ್ನು ರಾತ್ರಿ 11:3೦ ರ ವರೆಗೆ ಮಾತ್ರ ಮಾಡುವುದು.

ಮಧ್ಯಪಾನ ಮಾಡಿ ವಾಹನವನ್ನು ಚಾಲನೆ ಮಾಡದೇ, ಮಧ್ಯಪಾನ ಮಾಡದೇ ಇರುವವರು ಚಾಲನೆ ಮಾಡುವುದು.

ನಿಗದಿ ಪಡಿಸಿದ ಶಬ್ದ ಮಿತಿಯನ್ನು ಮೀರಿ ಸೌಂಡ್ ಸಿಸ್ಟಂ ಗಳನ್ನು ಬಳಸುವಂತಿಲ್ಲ.

ಸಂಭ್ರಮಾಚರಣೆಗೆ ಬರುವ ಸಾರ್ವಜನಿಕರ ವಾಹನಗಳ ನಿಲುಗಡೆಗೆ ವ್ಯವಸ್ಥಿತವಾಗಿ ಪಾರ್ಕಿಂಗ್ ವ್ಯವಸ್ಥೆ ಮಾಡುವುದು.

ಗುಂಪನ್ನು ನಿಯಂತ್ರಿಸುವ ಸಂಬಂಧ, ಒಂದಕ್ಕಿಂತ ಹೆಚ್ಚು ಪ್ರವೇಶ ದ್ವಾರಗಳನ್ನು ನಿರ್ಮಿಸುವುದು.

ಹೊಸ ವರ್ಷದ ಆಚರಣೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಮತ್ತು ಸ್ಯಾನಿಟೈಸರ್ ಅನ್ನು ಬಳಸುವುದು.

ನೋ ಮಾಸ್ಕ್ ನೋ ಎಂಟ್ರಿ ಬೋರ್ಡ್‌ಗಳನ್ನು ಸಾರ್ವಜನಿಕರವಾಗಿ ಎದ್ದು ಕಾಣುವ ರೀತಿಯಲ್ಲಿ ಹಾಕುವುದು.

ಪ್ರತಿಯೊಬ್ಬರಿಗೂ ಕಡ್ಡಾಯವಾಗಿ ಥರ್ಮಲ್ ಸ್ರ್ಕೀನಿಂಗ್ ಗೆ ಒಳಪಡಿಸಲು ಸೂಚನೆಗಳನ್ನು ನೀಡಲಾಗಿದೆ.

By admin

ನಿಮ್ಮದೊಂದು ಉತ್ತರ

error: Content is protected !!