ಕಾಲ್ಪನಿಕ ಚಿತ್ರ
ತೀರ್ಥಹಳ್ಳಿ,ಸೆ.21:
ತೀರ್ಥಹಳ್ಳಿ ತಾಲೂಕಿನ ದೇಮ್ಲಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮವೊಂದರ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕನೋರ್ವ ಐದನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿರುವ ಸುದ್ದಿ ಈಗ ಜೀವಂತಿಕೆ ಪಡೆದಿದ್ದು, ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಶಿಕ್ಷಕನ ವಿರುದ್ದ ಪೋಕ್ಸೊ ಕಾಯ್ದೆಯಡಿ ದೂರು ದಾಖಲಾಗಿದೆ. ಪೋಷಕರು ಹಾಗೂ ವಿದ್ಯಾರ್ಥಿನಿಯ ಹೇಳಿಕೆಯ ಆಧಾರದ ಮೇರೆಗೆ ಪ್ರಾಥಮಿಕ ಶಾಲೆಯ ಶಿಕ್ಷಕ ಉಮೇಶ್ ನಾಯಕ್ ಎಂಬಾತನ ಮೇಲೆ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪೊಸ್ಕೋ ಕಾಯ್ದೆಯಡಿ ದಾಖಲಾಗಿರುವ ದೂರಿನ ತನಿಖೆ ನಡೆಯುತ್ತಿದೆ.
ತಾಲೂಕಿನ ಹಿರಿಯ ಪ್ರಾಥಮಿಕ ಶಾಲೆಯೊಂದರ ಐದನೇ ತರಗತಿ ವಿದ್ಯಾರ್ಥಿನಿ ತನಗೆ ಶಿಕ್ಷಕ ಉಮೇಶ್ ನಾಯಕ್ ಎಂಬಾತ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ ಎಂದು ಪೋಷಕರ ಬಳಿ ತಿಳಿಸಿದ ಹಿನ್ನೆಲೆಯಲ್ಲಿ ಪೋಷಕರು ಆಕೆಯನ್ನು ಪೊಲೀಸ್ ಠಾಣೆ ಹೊರತಾದ ಮಕ್ಕಳ ಸಲಹಾ ಕೇಂದ್ರದಲ್ಲಿ ವಿಚಾರಿಸಿದಾಗ ಈ ಸತ್ಯಾಂಶ ಹೊರಬಂದಿದೆ ಎನ್ನಲಾಗಿದೆ.
ಮಕ್ಕಳ ವಿಚಾರದಲ್ಲಿ ಅವರು ಗಾಬರಿಯಾದಿರಲೆಂದು ಮಹಿಳಾ ಮತ್ತು ಮಕ್ಕಳ ಸಾಂತ್ವಾನ ಕೇಂದ್ರಗಳಲ್ಲಿ ವಿಚಾರಣೆ ನಡೆಸಲಾಗುತ್ತದೆ.
ಈ ಸಂಬಂಧ ವಿಚಾರಣೆ ನಡೆಸಿದ ಸಾಂತ್ವನಾ ಕೇಂದ್ರದ ಅಧಿಕಾರಿಗಳು ಪೊಲೀಸ್ ಠಾಣೆಗೆ ದೂರು ದಾಖಲಿಸುವಂತೆ ಸೂಚನೆ ನೀಡಿದ್ದರೆನ್ನಲಾಗಿದೆ. ಈ ಹಿನ್ನಲೆಯಲ್ಲಿ ಪೋಷಕರು ಹಾಗೂ ವಿದ್ಯಾರ್ಥಿನಿಯ ಹೇಳಿಕೆ ಪಡೆದ ತೀರ್ಥಹಳ್ಳಿ ಪೊಲೀಸ್ ಠಾಣಾಧಿಕಾರಿಗಳು ಶಾಲೆ ಶಿಕ್ಷಕ ಉಮೇಶ್ ನಾಯಕ್ ಎಂಬಾತನ ಮೇಲೆ ಐಪಿಸಿ 1860 (U/S -354,506,323) Protection of Children from Sexual Offence ( U8,9(f) ,9(l),9(m),10) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಆರೋಪಿ ಉಮೇಶ್ ನಾಯಕ್ ತಲೆಮರೆಸಿಕೊಂಡಿದ್ದು ಆತನನ್ನು ಬಂಧಿಸಲು ಪೊಲೀಸರು ಬಲೆ ಬೀಸಿದ್ದಾರೆನ್ನಲಾಗಿದೆ.