ಸಚಿವ ಸ್ಥಾನದ ಆಸೆ ಬಿಟ್ಟಿರುವೆ…

ಸಂಪುಟ ವಿಸ್ತರಣೆ ಕುರಿತು ಪ್ರತಿಕ್ರಿಯಿಸಿದ ಈಶ್ವರಪ್ಪ, ಈಗಾಗಲೇ ಕ್ಲೀನ್ ಚಿಟ್ ಸಿಕ್ಕಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸಾಕಷ್ಟು ಜನರು ಸಚಿವರಾಗುವಂತೆ ಅಪೇಕ್ಷೆ ವ್ಯಕ್ತಪಡಿಸಿದ್ದರು. ಅದನ್ನೇ ಮುಖ್ಯಮಂತ್ರಿಗಳ ಬಳಿ ತಿಳಿಸಿದ್ದೆ. ಅವರು ರಾಷ್ಟ್ರೀಯ ನಾಯಕರ ಬಳಿ ಮಾತನಾಡುವ ಭರವಸೆ ನೀಡಿದ್ದರು. 224 ಶಾಸಕರೂ ಮಂತ್ರಿ ಆಗಲು ಆಗುವುದಿಲ್ಲ. ಪಕ್ಷದ ಯೋಚನೆ ಬೇರೆ ಇರಬಹುದು. ಈಗ ನಾನು ಆಸೆ ಬಿಟ್ಟಿದ್ದೇನೆ. ಕೇಂದ್ರ ಮತ್ತು ರಾಜ್ಯ ನಾಯಕರಿಗೆ ಮತ್ತೊಂದು ಸಮಸ್ಯೆ ಸೃಷ್ಟಿಸಲು ಇಷ್ಟಪಡುವುದಲ್ಲ ಎಂದರು 

ಶಿವಮೊಗ್ಗ: ಜಿಲ್ಲಾ ಬಿಜೆಪಿ ವತಿಯಿಂದ ಪೇಜ್ ಪ್ರಮುಖರ ಸಮಾವೇಶ ಫೆ. 5ರಂದು ನಗರದ ಎನ್ಇಎಸ್ ಮೈದಾನದಲ್ಲಿ ಬೆಳಿಗ್ಗೆ 11 ಗಂಟೆಗೆ ಆಯೋಜಿಸಲಾಗಿದೆ ಎಂದು ಶಾಸಕ ಕೆ.ಎಸ್. ಈಶ್ವರಪ್ಪ ಹೇಳಿದರು.

ಅವರು ಇಂದು ಜಿಲ್ಲಾ ಬಿಜೆಪಿ ಕಚೇರಿಯಲ್ಲಿನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ಪೇಜ್್ ಪ್ರಮುಖರ ಸಮಾವೇಷವನ್ನು ರಾಜ್ಯಾಧ್ಯಕ್ಷ ನಳಿನ್್ಕುಮಾರ್ ಕಟೀಲ್್ಉದ್ಘಾಟಿಸಲಿದ್ದು, ನಗರದ ಸುಮಾರು 8426 ಪೇಜ್ ಪ್ರಮುಖರು ಮತ್ತು ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದರು.

ಬಿಜೆಪಿ ವ್ಯವಸ್ಥೆಯಲ್ಲಿ ಮಹಾಶಕ್ತಿ ಕೇಂದ್ರಗಳಿವೆ. ನಗರದಲ್ಲಿ 69 ಶಕ್ತಿ ಕೇಂದ್ರಗಳಿವೆ. 299 ಬೂತ್‌ಗಳಿವೆ. ಪ್ರತಿ ಬೂತ್ ವ್ಯಾಪ್ತಿಯಲ್ಲಿ 5-6 ಮನೆಗೆ ಒಬ್ಬರಂತೆ ಪೇಜ್ ಪ್ರಮುಖರನ್ನು ನಿಯೋಜನೆ ಮಾಡಲಾಗಿದೆ. ಮುಂಬರುವ ವಿಧಾನಸಭಾ ಚುನಾವಣೆ, ಮಹಾನಗರ ಪಾಲಿಕೆ ಚುನಾವಣೆ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಪೇಜ್ ಪ್ರಮುಖರು ಕಾರ್ಯನಿರ್ವಹಿಸಲಿದ್ದಾರೆ ಎಂದರು.

ಪಕ್ಷದ ಸಿದ್ಧಾಂತ, ದೇಶ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ಪೇಜ್ ಪ್ರಮುಖರು ಮನವರಿಕೆ ಮಾಡಿಕೊಡಲಿದ್ದಾರೆ. ಸೈದ್ಧಾಂತಿಕವಾಗಿ ಮತದಾರರನ್ನು ಒಪ್ಪಿಸುವ ಕೆಲಸ ಮಾಡಲಿದ್ದಾರೆ. ಬೂತ್ ಮಟ್ಟದಲ್ಲಿ ವಿಜಯ್ ಸಂಕಲ್ಪ ಅಭಿಯಾನ ನಡೆಸಲಾಗುತ್ತಿದ್ದು, ಇದರಲ್ಲಿಯೂ ಪೇಜ್ ಪ್ರಮುಖರು ಭಾಗವಹಿಸುತ್ತಿದ್ದಾರೆ. ಒಟ್ಟು ಐದು ಅಂಶಗಳನ್ನು ಜನರಿಗೆ ತಿಳಿಸುವ ಕೆಲಸ ಪೇಜ್ ಪ್ರಮುಖರದ್ದಾಗಿದೆ. ಮುಂದಿನ ದಿನಗಳಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಮಾವೇಶ ನಡೆಸುವ ಗುರಿ ಇರಿಸಿಕೊಳ್ಳಲಾಗಿದೆ ಎಂದರು

.

ನಗರ ಬಿಜೆಪಿ ಅಧ್ಯಕ್ಷ ಜಗದೀಶ್, ಪಾಲಿಕೆ ಆಡಳಿತ ಪಕ್ಷದ ನಾಯಕ ಜ್ನಾನೇಶ್ವರ್, ಸದಸ್ಯ ಚೆನ್ನಬಸಪ್ಪ, ಕೆ.ವಿ.ಅಣ್ಣಪ್ಪ, ಎಂ.ಜಿ.ಬಾಲು ಸುದ್ದಿಗೋಷ್ಟಿಯಲ್ಲಿದ್ದರು.

By admin

ನಿಮ್ಮದೊಂದು ಉತ್ತರ

error: Content is protected !!