ಶಿವಮೊಗ್ಗ, : ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಫೆಬ್ರವರಿ-2023ರ ಮಾಹೆಯ ಕೆಳಕಂಡ ದಿನಗಳಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 01 ಗಂಟೆಯವರೆಗೆ ಸಾರ್ವಜನಿಕರ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸುವರು.


ಫೆ.07 ರಂದು ಹೊಸನಗರ ತಾಲೂಕು ಕಚೇರಿ ಸಭಾಂಗಣ, ಫೆ.09 ರಂದು ಶಿಕಾರಿಪುರ ಕಚೇರಿ ಪಂಚಾಯತ್ ಸಭಾಂಗಣ, ಫೆ. 14 ರಂದು  ಭದ್ರಾವತಿ ತಾಲೂಕು ಕಚೇರಿ ಸಭಾಂಗಣ, ಫೆ. 16 ರಂದು ತೀರ್ಥಹಳ್ಳಿ ತಾಲೂಕು ಕಚೇರಿ ಸಭಾಂಗಣ, ಫೆ.22 ರಂದು ಸಾಗರ ತಾಲೂಕು ಕಚೇರಿ ಸಭಾಂಗಣ ಹಾಗೂ ಫೆ.27  ರಂದು ಸೊರಬ ತಾಲೂಕು ಕಚೇರಿ ಸಭಾಂಗಣಗಳಲ್ಲಿ ಸಭೆ ನಡೆಯಲಿದೆ.


 ಸರ್ಕಾರಿ ಕರ್ತವ್ಯ ನಿರ್ವಹಿಸಲು ಬೇಜವಾಬ್ಧಾರಿತನ, ನಿರ್ಲಕ್ಷ್ಯ, ವಿಳಂಬ ಮತ್ತು ಅಧಿಕೃತ ಕೆಲಸಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಂತಹ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರು ಲಿಖಿತ ಅಹವಾಲು ಸಲ್ಲಿಸುವಂತೆ ಶಿವಮೊಗ್ಗದ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.

By admin

ನಿಮ್ಮದೊಂದು ಉತ್ತರ

error: Content is protected !!