ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾ ನಮಠದ ಪರಮ ಪೂಜ್ಯ ಗುರುಗಳಾದ ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮಿಗಳವರ ಮಾರ್ಗದರ್ಶನದಲ್ಲಿ ಮಹಾಸಂಸ್ಥಾನದ ಪೀಠಾಧ್ಯಕ್ಷ ಡಾ.ನಿರ್ಮ ಲಾನಂದನಾಥ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಮಹಾಸಂಸ್ಥಾನದ ಪ್ರಧಾನ ಕಾರ್ಯದರ್ಶಿ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರ ಕನಸಿನಂತೆ ೧೯೯೮ ರಂದು ನಿರ್ಮಿಸಿದ ಸಮುದಾಯ ಭವನ ಉದ್ಘಾಟನೆ ದಿನದಿಂದ ಆರಂಭಗೊಂಡ ವಿವಾಹ ಮಹೋತ್ಸವಕ್ಕೆ ೨೫ನೇ ವರುಷ ತಲುಪಿದ್ದು, ಈ ಮಹೋತ್ಸವವು ನಗರದ ಶರಾವತಿ ನಗರದಲ್ಲಿರುವ ಶ್ರೀ
ಆದಿಚುಂಚನಗಿರಿ ಸಮುದಾಯ ಭವನದಲ್ಲಿ ನಡೆಯಲಿದ್ದು, ಅಂದಿನಿಂದ ಉಚಿತ ಸಾಮೂಹಿಕ ವಿವಾಹದಲ್ಲಿ ಸಾವಿರಾರು ಜನ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಪ್ರತಿ ವಿವಾಹ ಮಹೋತ್ಸವದ ವಿಶೇಷತೆ ಎಂದರೆ ಮದುವೆಯಾ ಗುವ ವಧು ವರರಿಗೆ ವಿವಾಹಕ್ಕೆ ಬೇಕಾದ ಅಗತ್ಯ ಸಾಮಗ್ರಿಗಳನ್ನು ಮಠವೇ ನೀಡುತ್ತದೆ. ಹೆಣ್ಣಿಗೆ ತಾಳಿ, ಕಾಲುಂಗುರ, ಬಟ್ಟೆ ನೀಡಿದರೆ. ಗಂಡಿಗೆ ಅಂಗಿ,ಪಂಚೆ, ಕಲ್ಪವೃಕ್ಷ ನೀಡಲಾಗು ತ್ತದೆ. ಇದೇ ಸಂದರ್ಭದಲ್ಲಿ ಶ್ರೀ.ಕಾಲಭೈರವೇಶ್ವರ ದೇವಾಲಯದ ವಾರ್ಷಿಕೋತ್ಸವ ಸಮಾರಂಭ ನಡೆಯಲಿದೆ. ಆಸಕ್ತ ವಧು ವರರು ತಮ್ಮ ಇತ್ತೀಚಿನ ಭಾವಚಿತ್ರ,ಆಧಾರ್ ಕಾರ್ಡ್, ಜಾತಿ ಹಾಗೂ ಜನನ ಪ್ರಮಾಣ ಪತ್ರ,ಗ್ರಾಮ ಪಂಚಾಯಿತಿ ಅಥವಾ ನಗರಸಭೆಯಿಂದ ಪಡೆದ ದೃಢೀಕರಣ ಪತ್ರದೊಂದಿಗೆ ತಾವು ಹಾಗೂ ತಮ್ಮ ಪೋಷಕರೊಂದಿಗೆ ಬಂದು, ದಿನಾಂಕ : ೨೫/೩ /೨೦೨೩ ರೊಳಗೆ ಹೆಸರನ್ನು ನೋಂದಾಯಿಸಿಕೊಳ್ಳಬೇಕೆಂದು ಕೋರಿದ್ದಾರೆ.
ಪ್ರತಿ ವರ್ಷದಂತೆ ವಿವಾಹವಾಗಿ ೫೦ ವರ್ಷ ತುಂಬಿದ ಹಿರಿಯ ಆದರ್ಶ ದಂಪತಿಗಳಿಗೆ ಸನ್ಮಾನ ಸಮಾರಂಭ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಹಾಗೂ ಹೆಸರು ನೊಂದಾಯಿಸಲು ೦೮೧೮೨-೨೫೭೯೫೮, ೨೫೪೧೪೧, ೯೭೪೨೮೮೫೬೨೭, ೯೮೪೪೨೦೧೫೦೬ಗೆ ಸಂಪರ್ಕಿಸಿ ಎಂದು ಮಹಾಸಂಸ್ಥಾನ ಮಠದ ವ್ಯವಸ್ಥಾಪಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.