ಬೆಂಗಳೂರು,ಫೆ.15:
ರಾಜ್ಯದ ಗ್ರಾಮಪಂಚಾಯಿತಿ ನೌಕರರಿಗೆ ಶಾಕ್ ನೀಡಿದೆ, ಗ್ರಾಮಪಂಚಾಯಿತಿ ನೌಕರರು ಸರ್ಕಾರಿ ನೌಕರರಾಗಿರುವುದಿಲ್ಲ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.


ವಿಧಾನಪರಿಷತ್ ನಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವರು, ಗ್ರಾಮಪಂಚಾಯಿತಿ ನೌಕರರು ಸರ್ಕಾರಿ ನೌಕರರಾಗುವುದಿಲ್ಲ. ಸದರಿ ನೌಕರರು ಸ್ಥಳೀಯ ಪ್ರಾಧಿಕಾರವಾದ ಗ್ರಾಮ ಪಂಚಾಯಿತಿಯ ನೌಕರರಾಗಿದ್ದು, ಸಿ ಮತ್ತು ಡಿ ದರ್ಜೆ ನೌಕರರೆಂದು ಪರಿಗಣಿಸಿ ಸರ್ಕಾರಿ ನೌಕರರಂತೆ ವೇತನ ಶ್ರೇಣಿ ನಿಗದಿಪಡಿಸಲು ಆಡಳಿತಾತ್ಮಕವಾಗಿ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.


ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ನಿಯಮದಂತೆ ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದ ಮಾದರಿ, ನೇಮಕಾತಿ ವಿಧಾನ ಮತ್ತು ವೇತನ ಶ್ರೇಣಿ ನಿಗದಿಪಡಿಸಿದ್ದು, ಅದರಂತೆ ಮಂಜೂರಾದ ಹುದ್ದೆಗಳಿಗೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅನುಮೋದನೆ ಪಡೆದು ಸ್ಥಳೀಯ ಪ್ರಾಧಿಕಾರದ ಗ್ರಾಮಪಂಚಾಯಿತಿ ಖಾಯಂ ನೌಕರಾಗಿರುತ್ತಾರೆ ಎಂದು ತಿಳಿಸಿದ್ದಾರೆ.(ಸಂ)

By admin

ನಿಮ್ಮದೊಂದು ಉತ್ತರ

error: Content is protected !!