ಶಿವಮೊಗ್ಗ, ನಾಯಿಗಳ ತಳಿ ಸಂವರ್ಧನೆ, ಮಾರಾಟ ಹಾಗೂ ಮುದ್ದಿನ ಪ್ರಾಣಿಗಳ ಮಳಿಗೆ ಚಟುವಟಿಕೆಗಳಲ್ಲಿ ತೊಡಗಿರುವ ವ್ಯಕ್ತಿ/ಸಂಸ್ಥೆಗಳು ಸ್ಥಳೀಯ ಸಂಸ್ಥೆಗಳಿಂದ ಪರವಾನಗಿ ಪಡೆಯುವ ಮುನ್ನ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿಯಲ್ಲಿ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯಿದೆ (ನಾಯಿತಳಿ ಸಂವರ್ಧನೆ ಮತ್ತು ಮಾರಾಟ

ನಿಯಮ-೨೦೧೮ ಮತ್ತು ಮುದ್ದಿನ ಪ್ರಾಣಿಗ ಮಳಿಗೆ ನಿಯಮ-೨೦೧೮ರ ಸೆಕ್ಷನ್ ೩,೪ ಮತ್ತು ೫ರ) ಅಡಿಯಲ್ಲಿ ನೋಂದಣಿ ಮಾಡಿಸುವುದು ಕಡ್ಡಾಯವಾಗಿರುತ್ತದೆ ಎಂದು ಜಿಲ್ಲಾ ಪ್ರಾಣಿ ದಯಾ ಸಂಘದ ಸದಸ್ಯ ಕಾರ್ಯದರ್ಶಿಗಳಾಗಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


ನಾಯಿಗಳ ತಳಿ ಸಂವರ್ಧನೆ, ಮಾರಾಟ ಹಾಗೂ ಮುದ್ದಿನ ಪ್ರಾಣಿಗಳ ಮಳಿಗೆ ಚಟುವಟಿಕೆಗಳಲ್ಲಿ ತೊಡಗಿರುವ ವ್ಯಕ್ತಿ/ ಸಂಸ್ಥೆಗಳು ನಿಗಧಿತ ನಮೂನೆ ಅರ್ಜಿಯನ್ನು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳು ಹಾಗೂ ನಿಗದಿಪಡಿಸಿದ ಶುಲ್ಕದೊಂದಿಗೆ ಈ ಪ್ರಕಟಣೆ ಹೊರಡಿಸಿದ ದಿನಾಂಕದಿಂದ ೩೦ ದಿನದೊಳಗೆ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿಗೆ ಸಲ್ಲಿಸುವುದು. ತಪ್ಪಿದಲ್ಲಿ ಅಂತಹವರ ವಿರುದ್ಧ ನಿಯಮಗಳನುಸಾರ ಕ್ರಮ ಜರುಗಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


ಹೆಚ್ಚಿನ ಮಾಹಿತಿಗಾಗಿ ದೂ.ಸಂ.: ೦೮೧೮೨-೨೨೨೯೬೯/ ೨೨೧೪೨೮ ಹಾಗೂ ವೆಬ್‌ಸೈಟ್ www.kawb.karnataka.nic.in ನ್ನು ಸಂಪರ್ಕಿಸುವುದು.

By admin

ನಿಮ್ಮದೊಂದು ಉತ್ತರ

error: Content is protected !!