ಕೊರೊನಾದಲ್ಲಿ Strong ಆದ ಶಿವಮೊಗ್ಗ!?
ಶಿವಮೊಗ್ಗ, ಸೆ.26:
ಜಿಲ್ಲೆಯಲ್ಲಿ ಇಂದು 313 ಕೊರೋನ ಪಾಸಿಟಿವ್ ಪ್ರಕರಣ ಕಾಣಿಸಿಕೊಂಡಿದ್ದು ಒಟ್ಟು ಪಾಸಿಟಿವ್ ಸಂಖ್ಯೆ 14051 ಎಂದು ಜಿಲ್ಲಾ ಹೆಲ್ತ್ ಬುಲಿಟಿನ್ ಪ್ರಕಟಿಸಿದೆ.
ಇಂದು ಸಹ ಸೋಂಕಿನಿಂದ 8 ಜನ ಸಾವುಕಂಡಿದ್ದು, ಇದರಿಂದ ಜಿಲ್ಲೆಯಲ್ಲಿ ಒಟ್ಟು ಸಾವಿನ ಸಂಖ್ಯೆ 272 ಕ್ಕೇರಿದೆ. ಇಂದು 1829 ಜನರಿಗೆ ಕೊರೋನ ಪರೀಕ್ಷೆ ನಡೆದಿದ್ದು 1648 ಜನರಿಗೆ ನೆಗೆಟಿವ್ ಎಂದು ವರದಿ ಬಂದಿದೆ.
ಇಂದು 179 ಜನ ಸೋಂಕಿನಿಂದ ಗುಣಮುಖರಾಗಿ ಮೆಗ್ಗಾನ್ ಮತ್ತು ಕೋವಿಡ್ ಕೇರ್ ಸೆಂಟರ್ ನಿಂದ ಬಿಡುಗಡೆಗೊಂಡಿದ್ದಾರೆ.
ಇದರಿಂದ ಒಟ್ಟು ಗುಣಮುಖರಾಗಿರುವ ಸಂಖ್ಯೆಯೂ ಸಹ 11620 ಕ್ಕೇರಿದೆ. 203 ಜನ ಕೊರೋನ ಸೋಂಕಿತರು ಮೆಗ್ಗಾನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 141 ಜನ ಕೊರೋನ ಕೇರ್ ಸೆಂಟರ್ ನಲ್ಲಿ, 246 ಜನರಿಗೆ ಖಾಸಗಿ ಆಸ್ಪತ್ರೆಗಳಲ್ಲಿ, 1195 ಜನ ಮನೆಯಲ್ಲಿ ಐಸೋಲೇಷನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಯುರ್ವೇದಿಕ್ ಕಾಲೇಜಿನ ಆಸ್ಪತ್ರೆಯಲ್ಲಿ 145 ಜನ ಚಿಕಿತ್ಸೆ ಪಡೆಯುತ್ತಿದ್ದು ಒಟ್ಟು ಸಕ್ರಿಯಗೊಂಡ ಕೊರೋನ ಪಾಸಿಟಿವ್ ಸಂಖ್ಯೆ 1930 ಎಂದು ಬುಲಿಟಿನ್ ತಿಳಿಸಿದೆ.
ಸೋಂಕಿನ ಹೆಚ್ಚಳದಿಂದಾಗಿ ಕಂಟೈನ್ಮೆಂಟ್ ಜೋನ್ ಗಳು ಸಹ ಹೆಚ್ಚಾಗಿವೆ. ನಿನ್ನೆಯ ವರೆಗೆ 6276 ಕಂಟೈನ್ಮೆಂಟ್ ಜೋನ್ ಗಳಿದ್ದ ಜಿಲ್ಲೆಯಲ್ಲಿ ಇಂದು ಸಹ 6276 ರಷ್ಟೇ ಕಂಟೈನ್ಮೆಂಟ್ ಜೋನ್ ಗಳು ಆಗಿವೆ. ನಿನ್ನೆಯ ವರೆಗೆ 3181 ಡಿನೋಟಿಫೈಡ್ ಕಂಟೈನ್ಮೆಂಟ್ ಜೋನ್ ಗಳು ಇಂದು 3181 ರಷ್ಟೇ ಇದೆ ಎಂದು ಬುಲಿಟಿನ್ ಪ್ರಕಟಿಸಿವೆ.
ತಾಲೂಕುವಾರು ವಿವರ
ಜಿಲ್ಲೆಯಲ್ಲಿ 313.
ಶಿವಮೊಗ್ಗ -118
ಭದ್ರಾವತಿ -78,
ಶಿಕಾರಿಪುರ-33,
ತೀರ್ಥಹಳ್ಳಿ-26,
ಸಾಗರ- 30,
ಹೊಸನಗರ-06
ಸೊರಬ- 12
ಇತರೆ ಜಿಲ್ಲೆ- 10
SSLC EXAM POSTPONE!
ಬೆಂಗಳೂರು, ಸೆ.26:
ಸೆಪ್ಟೆಂಬರ್ 28ಕ್ಕೆ ಕರ್ನಾಟಕ ಬಂದ್ಗೆ ಕರೆಕೊಟ್ಟ ಹಿನ್ನೆಲೆ ಅಂದು ನಡೆಯಬೇಕಿದ್ದ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಯನ್ನ ಸೆಪ್ಟೆಂಬರ್ 29ಕ್ಕೆ ಮುಂದೂಡಿ ಎಸ್ಎಸ್ಎಲ್ಸಿ ಬೋರ್ಡ್ ಆದೇಶ ಹೊರಡಿಸಿದೆ.
28ರಂದು ವಿಜ್ಞಾನ, ರಾಜ್ಯಶಾಸ್ತ್ರ, ಮಧ್ಯಾಹ್ನ ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ ಪರೀಕ್ಷೆಗಳನ್ನು ನಿಗಧಿ ಪಡಿಸಲಾಗಿತ್ತು. ಆದ್ರೇ ಕರ್ನಾಟಕ ಬಂದ್ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಸೆಪ್ಟೆಂಬರ್ 28ರಂದು ನಡೆಯಬೇಕಿದ್ದ ಪೂರಕ ಪರೀಕ್ಷೆಯನ್ನು ಸೆಪ್ಟೆಂಬರ್ 29ಕ್ಕೆ ಮುಂದೂಡಲಾಗಿದೆ. ಇತರೆ ಪರೀಕ್ಷೆಗಳು ನಿಗಧಿಯಂತೆ ನಡೆಯಲಿದೆ ಎಂಬುದಾಗಿ ತಿಳಿಸಿದೆ.
ಕೋವಿಡ್ ಮಾರ್ಗಸೂಚಿ ಅನ್ವಯ ನಾಳೆ ಶಿವಮೊಗ್ಗದಲ್ಲಿ ಕೆ-ಸೆಟ್ ಪರೀಕ್ಷೆ
ಶಂಕರಘಟ್ಟ, ಸೆ. 26:
ಮೈಸೂರು ವಿಶ್ವವಿದ್ಯಾಲಯವು ನಡೆಸುವ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ, ಕೆಸೆಟ್-2020 (KSET-2020) ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಇದೇ ಭಾನುವಾರ ರ ಸೆ. 27ರಂದು ಶಿವಮೊಗ್ಗ ನಗರದ 11 ಕಾಲೇಜುಗಳಲ್ಲಿ ನಡೆಯಲಿದೆ.
ಸದರಿ ಪರೀಕ್ಷಾ ಕೇಂದ್ರಗಳಿಗೆ ಅಭ್ಯರ್ಥಿಗಳು ಬೆಳಿಗ್ಗೆ 8.30ಕ್ಕೆ ಪ್ರವೇಶ ಪತ್ರ, ಭಾವಚಿತ್ರವುಳ್ಳ ಗುರುತಿನ ಪತ್ರ ಹಾಗೂ ಕೋವಿಡ್-19 ಸಂಬಂಧ ಮುನ್ನೆಚ್ಚರಿಕೆಯೊಂದಿಗೆ ಹಾಜರಾಗತಕ್ಕದ್ದು. ಪರೀಕ್ಷಾ ಕೇಂದ್ರದ ಮಾಹಿತಿ ಹಾಗೂ ಇತರೆ ವಿವರಗಳಿಗೆ ಮೈಸೂರು ವಿಶ್ವವಿದ್ಯಾಲಯ ಕೆ-ಸೆಟ್ ವೆಬ್‌ಸೈಟ್ ಅಥವಾ ಕುವೆಂಪು ವಿಶ್ವವಿದ್ಯಾಲಯದ ವೆಬ್‌ಸೈಟ್ ಸಂಪರ್ಕಿಸಬಹುದು ಎಂದು ಕುವೆಂಪು ವಿಶ್ವವಿದ್ಯಾಲಯದ ಕೆಸೆಟ್ ಸಂಯೋಜನಾಧಿಕಾರಿ ಪ್ರೊ. ರಾಜೇಶ್ವರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.