ಪಂಚರತ್ನ ರಥಯಾತ್ರೆ ಯಾವುದೇ ಸ್ವಾರ್ಥಕ್ಕಾಗಿ ಅಲ್ಲ, ಬದಲಾಗಿ ನೊಂದವರ ಹಾಗೂ ರೈತರ ಸಮಸ್ಯೆಗಳ ವಿರುದ್ಧ ಮತ್ತು ಅವರ ಒಳಿತಿಗಾಗಿ ಮಾಡುತ್ತಿರುವ ಯಾತ್ರೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು.


ಪಂಚರತ್ನ ರಥಯಾತ್ರೆಯ ಬಹಿರಂಗ ಸಭೆಯಲ್ಲಿ ಮಾತನಾಡುತ್ತಾ, ಬಿಜೆಪಿಯವರು ಕೇವಲ ಆಶ್ವಾಸನೆಗಳನ್ನು ಕೊಡುತ್ತಿದ್ದಾರೆಯೇ ಹೊರತು ಯಾವುದನ್ನು ಕಾರ್ಯರೂಪಕ್ಕೆ ತಂದಿಲ್ಲ. ಮಳೆಯಿಂದ ಮನೆ ಕಳೆದುಕೊಂಡವರಿಗೆ ೫ ಲಕ್ಷದ ಮನೆ ನಿರ್ಮಿಸಿಕೊಡುತ್ತೇವೆ ಎಂದು ಸುಳ್ಳು ಹೇಳಿದರು. ಕೋವಿಡ್‌ನಿಂದ ಮೃತಪಟ್ಟವರಿಗೆ ೧ ಲಕ್ಷ ಕೊಡುತ್ತೇವೆ ಎಂದು ಹೇಳಿ ಕೊಡಲಿಲ್ಲ. ಬಿಜೆಪಿ ಆಡಳಿತದಲ್ಲಿ ವಿದ್ಯಾರ್ಥಿಗಳಿಗೆ ಸೈಕಲ್, ಸಮವಸ್ತ್ರ್ರ ಹಾಗೂ ವಿದ್ಯಾರ್ಥಿವೇತನ ನೀಡಿಲ್ಲ. ಈ ಅನ್ಯಾಯದ ವಿರುದ್ಧ ಪಕ್ಷದ ಹೋರಾಟ ಇದು’ ಎಂದರು.


ನನ್ನ ಆಡಳಿತ ಅವಧಿಯಲ್ಲಿ ರೈತರ ಸಾಲ ಮನ್ನಾ ಮಾಡಿದೆ, ಇಲ್ಲಿಯವರೆಗೂ ಯಾವ ಸರ್ಕಾರವೂ ಮಾಡಲಿಲ್ಲ. ನಾವೇನೂ ನೋಟ್ ಪ್ರಿಂಟ್ ಮಾಡುವ ಮಿಷಿನ್ ಇಟ್ಟಿದ್ದೀವಾ? ನೀವು ಕಟ್ಟಿದ ತೆರಿಗೆಯ ಹಣವನ್ನೇ ಉಪಯೋಗಿಸಿಕೊಂಡು ನಿಮ್ಮ ಸಾಲವನ್ನು ತೀರಿಸಿದ್ದೆವು ಅಷ್ಟೇ’ ಎಂದರು.
ಪಕ್ಷದ ನಿಯೋಜಿತ ಅಭ್ಯರ್ಥಿ ಶಾರದಾ ಪೂರ‍್ಯಾನಾಯ್ಕ ವಿಧಾನಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ, ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್ ಹಾಗೂ ಕಾರ್ಯಕರ್ತರು ಇದ್ದರು.

By admin

ನಿಮ್ಮದೊಂದು ಉತ್ತರ

error: Content is protected !!