ಫೆ.27 ರಂದು ವಿಮಾನ ನಿಲ್ದಾಣ ಉದ್ಘಾಟನಾ ಸಮಾರಂಭದ ವರದಿಗಾಗಿ ತೆರಳಿದ್ದ ಟಿವಿ ಭಾರತ್ ಸಂಪಾದಕ ಹಾಲಸ್ವಾಮಿ ಅವರ ಮೇಲೆ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹಲ್ಲೆ ಮಾಡಿ ಪೊಲೀಸ್ ವಾಹನದಲ್ಲಿ ಅಕ್ರಮವಾಗಿ ಬಂಧಿಸಿ

ಅವರ ಮೊಬೈಲ್‌ನ್ನು ಕಿತ್ತುಕೊಂಡು ವಿಡಿಯೋಗಳನ್ನು ಡಿಲೀಟ್ ಮಾಡಿ ದೌರ್ಜನ್ಯ ಎಸಗಿರುವುದನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಾಗರ ಶಾಖೆ ತೀವ್ರವಾಗಿ ಖಂಡಿಸಿ ಸಾಗರ ಉಪವಿಭಾಗಾಧಿಕಾರಿಗಳ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಿತು.


ಆಗಾಗ ಕಾರ್ಯನಿರತ ಪತ್ರಕರ್ತರ ಮೇಲೆ ಹಲ್ಲೆ, ದೌರ್ಜನ್ಯಗಳು ನಡೆಯುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಬೇಕು. ಶಿವಮೊಗ್ಗದ ಪ್ರಕರಣದಲ್ಲಿ ಹಿರಿಯ ಪತ್ರಕರ್ತ ಆರ್.ಎಸ್.ಹಾಲಸ್ವಾಮಿ ಅವರ ಮೇಲೆ ದೌರ್ಜನ್ಯ ಎಸಗಿದವರ ಮೇಲೆ ಕಾನೂನು ಕ್ರಮ ಕೈಗೊಂಡು

ಶಿಸ್ತುಕ್ರಮ ಜರುಗಿಸಬೇಕು. ಮುಂದಿನ ದಿನಗಳಲ್ಲಿ ಪತ್ರಕರ್ತರ ಮೇಲೆ ಇಂತಹ ದೌರ್ಜನ್ಯ ನಡೆಯದಂತೆ ಸೂಕ್ತ ಕಾನೂನು ರೂಪಿಸಬೇಕೆಂದು ಸಂಘದ ಸಾಗರ ಅಧ್ಯಕ್ಷರಾದ ಜಿ.ನಾಗೇಶ್, ಪ್ರಧಾನ ಕಾರ್ಯದರ್ಶಿ ಮಹೇಶ್ ಹೆಗಡೆ ಮನವಿಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಸಂಘದ ಸದಸ್ಯರು ಉಪಸ್ಥಿತರಿದ್ದರು

By admin

ನಿಮ್ಮದೊಂದು ಉತ್ತರ

error: Content is protected !!