ಬಿಜೆಪಿ ಹಿಂದುಳಿದ ವರ್ಗಗಳ ಜಿಲ್ಲಾ ಸಮಾವೇಶ ಮಾ.೧೨ರಂದು ಬೆಳಿಗ್ಗೆ ೧೦-೩೦ಕ್ಕೆ ಸೊರಬದಲ್ಲಿ ನಡಯಲಿದೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲಾಧ್ಯಕ್ಷ ಸಿ.ಹೆಚ್. ಮಾಲತೇಶ್ ಹೇಳಿದರು.


ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹಿಂದುಳಿದ ವರ್ಗಗಳು ತಳಸ ಮುದಾಯಗಳು ಸಮಾಜದ ಮುಖ್ಯವಾಹಿ ನಿಗೆ ಬರಲು ಬಿಜೆಪಿ ಹಲವು ಕಾರ್ಯಕ್ರಮ ಗಳನ್ನು ಹಾಕಿಕೊಂಡಿದೆ. ಮತ್ತಷ್ಟು ಸಂಘಟನೆಗೊಳಿಸುವ ಹಿನ್ನೆಲೆಯಲ್ಲಿ ಈ ಸಮಾವೇಶ ಆಯೋಜಿಸಲಾಗಿದೆ ಎಂದರು.


ಈ ಸಮಾವೇಶದಲ್ಲಿ ಸುಮಾರು ೨೩೯ ಬೂತ್‌ಗಳಿಂದ ೧೫ ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ ಇದೆ. ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ನರೇಂದ್ರ ಬಾಬು ಹಾಗೂ ಸಚಿವರುಗಳಾದ ಕೋಟಾ ಶ್ರೀನಿವಾಸ ಪೂಜಾರಿ, ಸುನಿಲ್‌ಕುಮಾರ್ ಸೇರಿದಂತೆ ರಾಜ್ಯ ನಾಯಕರು ಹಾಗೂ ಸ್ಥಳೀಯ ಮುಖಂಡರುಗಳಾದ ಬಿ.ವೈ. ರಾಘವೇಂದ್ರ, ಕೆ.ಎಸ್ ಈಶ್ವರಪ್ಪ, ಕುಮಾರರ ಬಂಗಾರಪ್ಪ, ಹರತಾಳು ಹಾಲಪ್ಪ, ಮುಂತಾದವರು ಭಾಗವಹಿಸಲಿದ್ದಾರೆ ಮತ್ತು ಒಬಿಸಿ ವರ್ಗಗಳ ಎಲ್ಲಾ ಸಂಘಟನೆಗಳ ಪದಾಧಿಕಾರಿಗಳು ಕೂಡ ಸಮಾವೇಶದಲ್ಲಿ ಪಾಲ್ಗೊಳ್ಳುವರು ಎಂದರು.


ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ಈಗಾಗಲೇ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಸುಮಾಋಉ ೨೦ಸಾವಿರ ಜನರಿಗೆ ಆರೋಗ್ಯ ತಪಾಸಣೆ ಮಾಡಲಾಗಿದೆ. ಉಚಿತವಾಗಿ ಕನ್ನಡಕಗಳನ್ನು ವಿತರಿಸಲಾಗಿದೆ. ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿದೆ. ಸಸಿ ನೆಡುವ ಕಾರ್ಯಕ್ರಮ ಮಾಡಿದ್ದೇವೆ. ಸಮಾಜಮು ಖಿಯಾಗಿ ಸೇವಾ ಚಟುವಟಿಕೆಗಳನ್ನು ನಿರಂತರವಾಗಿ ಜಿಲ್ಲಾ ಮೋರ್ಚಾ ಆಯೋಜಿಸುತ್ತಾ ಬಂದಿದೆ ಎಂದರು.


ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಕುಮಾರ್, ಪ್ರಭಾಕರ್, ವಿಶ್ವನಾಥ್, ರಂಗನಾಥ್, ಪವನ್ ಇತರರಿದ್ದರು.

By admin

ನಿಮ್ಮದೊಂದು ಉತ್ತರ

error: Content is protected !!