ಶಿವಮೊಗ್ಗ, ಅ.01:
ಉತ್ತರ ಪ್ರದೇಶದ ಸಹೋದರಿ ಮನಿಶಾ ವಾಲ್ಮೀಕಿ ಆತ್ಯಾಚಾರಗಳನ್ನು ಗಲ್ಲಿಗೇರಿಸಲು ಆಗ್ರಹಿಸಿ – ಜಿಲ್ಲಾ ಯುವ ಕಾಂಗ್ರೆಸ್ನಿಂದ ಮೇಣದ ಬತ್ತಿ ಹಚ್ಚಿ ಪ್ರತಿಭಟನೆ

ಉತ್ತರಪ್ರದೇಶದಲ್ಲಿ ನಡೆದ ಸಹೋದರಿ ಮನಿಷಾ ವಾಲ್ಮೀಕಿಯ ಆತ್ಯಾಚಾರಿ ಆರೋಪಿಗಳನ್ನು ಗಲ್ಲಿಗೇರಿಸಬೇಕು ಹಾಗೂ ದೇಶದಲ್ಲಿ ಮಹಿಳೆಯರಿಗೆ ರಕ್ಷಣೆ ನೀಡುವಲ್ಲಿ ವಿಫಲವಾದ ಕೇಂದ್ರ ಬಿಜೆಪಿ ಸರ್ಕಾರ ಹಾಗೂ ಉತ್ತರಪ್ರದೇಶದಲ್ಲಿ ಸರ್ವಾಧಿಕಾರಿ ಧೋರಣೆ ತೋರುತ್ತಿರುವ ಬಿಜೆಪಿ ಸರ್ಕಾರದ ವಿರುದ್ಧ ಶಿವಪ್ಪನಾಯಕ ವೃತ್ತದಲ್ಲಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಮೇಣದ ಬತ್ತಿ ಹಚ್ಚಿ ಪ್ರತಿಭಟಿಸಲಾಯಿತು .

ಕ್ಯಾಂಡಲ್ ಹಚ್ಚಿ ಪ್ರತಿಭಟನೆ

ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೇಸ್ ಅಧ್ಯಕ್ಷರಾದ ಎಂ ಪ್ರವೀಣ್ ಕುಮಾರ್ ,ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಶರವಣ ,ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕರಾದ ಎಚ್ ಸಿ ಯೋಗೀಶ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ರಂಗನಾಥ್ ,ಕೆಪಿಸಿಸಿಯ ಮುಖಂಡರಾದ ಕೆ. ದೇವೇಂದ್ರಪ್ಪ ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಆರ್ ಕಿರಣ್ ಶಿವಮೊಗ್ಗ ನಗರ ಯುವ ಕಾಂಗ್ರೆಸ್ ಅಧ್ಯಕ್ಷರಾದ ಎಚ್ ಪಿ ಗಿರೀಶ್ ನಗರ ಉಪಾಧ್ಯಕ್ಷ ಕುಮರೇಶ್ ಮುಖಂಡರುಗಳಾದ ಶ್ರೀಧರ್, ಸತೀಶ್,ಮಲ್ಲಿಕ್ ನಾಯ್ಕ , ಕಾರ್ತಿಕ್ , ವಿನಯ್ ,ನಂದನ್ ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು

By admin

ನಿಮ್ಮದೊಂದು ಉತ್ತರ

error: Content is protected !!