ಶಾಸಕ ಕೆ.ಎಸ್. ಈಶ್ವರಪ್ಪ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿರುವುದು ಬೇಸರ ತಂದಿದ್ದು, ಚುನಾವಣೆಯಲ್ಲಿ ಅವರ ಪುತ್ರ ಹಾಗೂ ಯುವ ನಾಯಕ ಕೆ.ಇ. ಕಾಂತೇಶ್ ಅವರಿಗೆ ಟಿಕೆಟ್ ನೀಡಬೇಕೆಂದು ಸಿಹಿಮೊಗ್ಗೆ ಸ್ವಸಹಾಯ ಸಂಘದ ಅಧ್ಯಕ್ಷ ಎಸ್.ಎಸ್. ಹರೀಶ್ ಕುಮಾರ್ ಒತ್ತಾಯಿಸಿದರು.
ಅವರು ಇಂದು ಮೀಡಿಯಾ ಹೌಸ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೆ.ಎಸ್. ಈಶ್ವರಪ್ಪ ಅವರು ಶಾಸಕರಾಗಿ ನಿಸ್ವಾರ್ಥ ಸೇವೆ, ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದಲ್ಲದೇ ಸತತ ಮೂರು ದಶಕಗಳಿಂದ ಪಕ್ಷದ ಸಂಘಟನೆಯಲ್ಲಿ ತೊಡಗಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಹೆಸರುವಾಸಿಯಾಗಿ ದ್ದಾರೆ. ಇಂತಹ ವ್ಯಕ್ತಿ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿರುವುದು ಜಿಲ್ಲೆಯ ಸಾಧುಶೆಟ್ಟಿ ಜನಾಂಗಕ್ಕೆ ನೋವುಂಟು ಮಾಡಿದೆ. ಪಕ್ಷದ ವರಿಷ್ಠರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿರುವುದನ್ನು ಅಂಗೀಕರಿಸದೇ ಈಶ್ವರಪ್ಪ ಅವರಿಗೆ ಟಿಕೆಟ್ ನೀಡಬೇಕು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಸಂಘದ ಪ್ರಮುಖರಾದ ರಾಘವೇಂದ್ರ, ಶ್ರೀಧರ್, ನಾಗಾರ್ಜುನ, ಜಿ. ರಾಜೇಶ್, ಮುರುಡೇಶ್ವರ್, ಗಿರೀಶ್, ಶ್ರೀಕಾಂತ್, ಎಸ್.ಎ. ಗಣೇಶ್ ಉಪಸ್ಥಿತರಿದ್ದರು.