ಶಿವಮೊಗ್ಗದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಸ್ಪರ್ಧೆ, ಗ್ರಾಮಾಂತರ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ನೇರ ಸ್ಪರ್ಧೆ ಇದೆ. ಆದರೆ ಇವೆರಡು ಕ್ಷೇತ್ರ ಸೇರಿದಂತೆ ಜಿಲ್ಲೆಯ ಏಳೂ ಸ್ಥಾನಗ ಳನ್ನು ನಾವು ಗೆದ್ದೇ ಗೆಲ್ಲುತ್ತೇವೆ ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಹೆಚ್.ಎಸ್. ಸುಂದರೇಶ್ ಹೇಳಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿಯ ವಿರುದ್ಧದ ಅಲೆ ಜಿಲ್ಲೆಯಲ್ಲಿ ಇದೆ. ಕಾಂಗ್ರೆಸ್‌ಗೆ ಎಲ್ಲಾ ಕಡೆ ಒಲವು ಕಾಡುತ್ತಿದೆ. ರಾಷ್ಟ್ರ ಮತ್ತು ರಾಜ್ಯ ನಾಯಕರೆಲ್ಲರೂ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಪ್ರಚಾರದ ಅಬ್ಬರ ಕೂಡ ಹೆಚ್ಚುತ್ತಿದೆ. ಕಾರ್ಯಕರ್ತರು ಹುಮ್ಮಸ್ಸಿನಿಂದ ಓಡಾಡುತ್ತಿದ್ದಾರೆ. ಹಾಗಾಗಿ ಈ ಬಾರಿ ಕಾಂಗ್ರೆಸ್ ಅತಿಹೆಚ್ಚು ಸ್ಥಾನಗಳಿಸಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದರು.
ಎಐಸಿಸಿ ಕಾರ್ಯದರ್ಶಿ ಹಾಗೂ ವೀಕ್ಷಕ ಸಿರಿವಳ್ಳಿ ಪ್ರಸಾದ್ ಮಾತನಾಡಿ, ಕಾಂಗ್ರೆಸ್ ರಾಜ್ಯದಲ್ಲಿ ಸ್ಪಷ್ಟ ಬಹುಮತ ಪಡೆದು ಆಡಳಿತ ನಡೆಸಿದೆ. ಬಿಜೆಪಿಯ ಭ್ರಷ್ಟಾಚಾರಕ್ಕೆ ಜನ ರೋಸಿಹೋಗಿದ್ದಾರೆ. ಶೇ.೪೦ರ ಕಮಿಷನ್ ಹಗರಣ ಬಿಜೆಪಿಯ ಸೋಲಿಗೆ ಕಾರಣವಾಗುತ್ತದೆ. ನಮ್ಮಲ್ಲಿ ಹಣ ಇಲ್ಲದಿರಬಹುದು. ಆದರೆ ಜನಬಲ ಇದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಸಿ.ಎಸ್. ಚಂದ್ರಭೂಪಾಲ, ಸೌಗಂಧಿಕ, ಚಂದ್ರಶೇಖರ್, ವಿನಾ ಯಕಮೂರ್ತಿ, ಅಫ್ರಿದಿ, ಜಫ್ರುಲ್ಲಾ ಇನ್ನಿತರರಿದ್ದರು.