ಶಿವಮೊಗ್ಗ: ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಮತದಾನವು ಇದೇ ಮೇ ೧೦ರ ನಾಳೆ ನಡೆಯಲಿರುವ ಹಿನ್ನೆಲೆಯಲ್ಲಿ ಮತಗಟ್ಟೆ ಸುತ್ತಮುತ್ತ ೫ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ-ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ. ಚುನಾವಣಾ ಅಭ್ಯರ್ಥಿ ಮತ್ತು ಬೆಂಬಲಿಗರು ೫ ಜನರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಸೇರಬಾರದು.


ಮತಗಟ್ಟೆಯ ೧೦೦ ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಮಾರಕಾಸ್ತ್ರ ತೆಗೆದುಕೊಂಡು ಹೋಗುವುದನ್ನು ನಿ?ಧಿಸಲಾಗಿದೆ.
ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು, ಮುಂತಾದವುಗಳನ್ನು ಪ್ರದರ್ಶಿಸುದಾಗಲಿ ಹಾಗೂ

ಸಾರ್ವಜನಿಕ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ.


೧೦೦ ಮೀಟರ್ ಒಳಗೆ ಪ್ರಚಾರ ನಿ?ಧ: ಮತಗಟ್ಟೆಗಳ ೧೦೦ ಮೀಟರ್ ಒಳಗೆ ಚುನಾವಣೆ ಪ್ರಚಾರ ನಿ?ಧಿಸಲಾಗಿದ್ದು, ಈ ಪರಿಮಿತಿಯಲ್ಲಿ ಯಾವುದೇ ಚುನಾವಣಾ ಪ್ರಚಾರಕ್ಕೆ ಸಂಬಂಧಿಸಿದ ಪೋಸ್ಟರ್, ಬ್ಯಾನರ್ ಅಥವಾ ಇನ್ಯಾವುದೇ ವಸ್ತುಗಳನ್ನು ಬಳಸುವಂತಿಲ್ಲ. ಝೆರಾಕ್ಸ್ಸ್ ಅಂಗಡಿ, ಬುಕ್ ಸ್ಟಾಲ್ ಹಾಗೂ ಸೈಬರ್ ಕೆಫೆಗಳಿಗೂ ನಿಬಂಧಿಸಲಾಗಿದ್ದು, ಧ್ವನಿವರ್ಧಕ ಸಹ ಬಳಸುವಂತಿಲ್ಲ.


ಮೊಬೈಲ್ ನಿ?ಧ: ಚುನಾವಣಾ ಕಾರ್ಯದಲ್ಲಿ ನಿರತ ಜಿಲ್ಲಾ ಚುನಾವಣಾಧಿಕಾರಿ, ಚುನಾವಣಾಧಿಕಾರಿ ಹಾಗೂ ಅವರಿಂದ ಅನುಮತಿ ಪಡೆದ ಅಧಿಕಾರಿಗಳು-ಸಿಬ್ಬಂದಿಗಳು ಹೊರತುಪಡಿಸಿ ಮತಗಟ್ಟೆಗಳ ಸುತ್ತಲೂ ೧೦೦ ಮೀಟರ್ ಅಂತರದಲ್ಲಿ ಮೊಬೈಲ್ ಫೋನ್, ಕಾರ್ಡ್‌ಲೆಸ್ ಫೋನ್ ಅಥವಾ ಇನ್ನಿತರೆ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ತೆಗೆದುಕೊಂಡು ಹೋಗುವುದನ್ನು ನಿ?ಧಿಸಲಾಗಿದೆ.

By admin

ನಿಮ್ಮದೊಂದು ಉತ್ತರ

error: Content is protected !!