ಶಿವಮೊಗ್ಗ : ತೀವ್ರ ಕೂತೂಹಲ ಮೂಡಿಸಿರುವ ಶಿವಮೊಗ್ಗ ಜಿಲ್ಲೆಯ ವಿಧಾನಸಭಾ ಚುನಾವಣೆ ಇಂದು ಬೆಳಗ್ಗೆಯಿಂದಲೇ ಮತದಾನ ಪ್ರಕ್ರಿಯೆ ಆರಂಭವಾಗಿದ್ದು ಮತಗಟ್ಟೆ ಸುತ್ತಮುತ್ತಲ್ಲೂ ಬಿಗಿ ಪೊಲೀಸ್ ಬಂದೋಬಸ್ತ್  ವ್ಯವಸ್ಥೆ ಕಲ್ಪಿಸಲಾಗಿದೆ.

ಬೆಳಗ್ಗೆ 7 ಗಂಟೆಯಿಂದಲೇ ಮತದಾನ ಶುರುವಾಗಿದ್ದು, ಒಬ್ಬೊಬ್ಬರೇ ಬಂದು ಮತದಾನ ಮಾಡುತ್ತಿರುವುದು ಅಲ್ಲಲ್ಲಿ ಕಂಡು ಬರುತ್ತಿದ್ದು, ಮುಂಜಾನೆ  ಮತದಾರರ ಸಂಖ್ಯೆ ವಿರಳವಾಗಿದ್ದು, ಮಧ್ಯಾಹ್ನದ ಹೊತ್ತಿಗೆ ಮತದಾನ ಪ್ರಕ್ರಿಯೆ ಚುರುಕುಗೊಳ್ಳಲಿದೆ.

ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 728886 ಪುರುಷ, 743713 ಮಹಿಳಾ, 32 ಇತರೆ ಹಾಗೂ 696 ಸೇವಾ ಮತದಾರರು ಸೇರಿ ಒಟ್ಟು 1473327 ಮತದಾರರಿದ್ದಾರೆ.

ಜಿಲ್ಲಾ ವ್ಯಾಪ್ತಿಯಲ್ಲಿ 1775 + 07 ಪೂರಕ ಸೇರಿದಂತೆ ಒಟ್ಟು 1782 ಮತಗಟ್ಟೆಗಳಿವೆ. ಜಿಲ್ಲೆಯಲ್ಲಿ ಮತದಾನಕ್ಕೆ ಸಂಬಂಧಿದಂತೆ 2050 ಪಿಆರ್‍ಓ, 2050 ಎಪಿಆರ್‍ಓ, 4100 ಪಿಓ ಸೇರಿದಂತೆ ಒಟ್ಟು 8200 ಮತಗಟ್ಟೆ ಅಧಿಕಾರಿ/ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಹಾಗೂ 83 ಮೈಕ್ರೋ ಅಬ್ಸರ್ವರ್ಸ್‍ಗಳನ್ನು ನೇಮಕ ಮಾಡಲಾಗಿದೆ.

ಇಬ್ಬರು ಅಧಿಕಾರಿಗಳ ಅಮಾನತು

ಶಿವಮೊಗ್ಗ: ವಿಧಾನಸಭಾ ಚುನಾವಣೆ ಕರ್ತವ್ಯದಲ್ಲಿದ್ದ ಸಿಬ್ಬಂದಿ ಪಾನಮತ್ತರಾಗಿ ಬಂದ ಆರೋಪ ಹಿನ್ನೆಲೆ ರಮೇಶ್ ಮತ್ತು ಎಂ.ಬಿ. ಮಾಲತೇಶ್ ಎಂಬವರನ್ನು ಕರ್ತವ್ಯ ಲೋಪ ವಿಚಾರದಲ್ಲಿ ಅಮಾನತು ಮಾಡಲಾಗಿದೆ.
ಎಚ್.ಎಸ್.ರುದ್ರಪ್ಪ ಪಿಯು ಕಾಲೇಜಿನಲ್ಲಿ ಮಂಗಳವಾರ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಮಸ್ಟರಿಂಗ್ ನಡೆಯುತ್ತಿತ್ತು. ಈ ವೇಳೆ ಗ್ರಾಮಾಂತರ ಭಾಗದ ಮತಗಟ್ಟೆಗಳಿಗೆ ಮತ ಯಂತ್ರಗಳನ್ನು ಸಿಬ್ಬಂದಿ ಕೊಂಡೊಯ್ಯಬೇಕಾಗಿತ್ತು.

ಈ ವೇಳೆ ರಮೇಶ್ ಮತ್ತು ಎಂ.ಬಿ. ಮಾಲತೇಶ್ ಪಾನಮತ್ತರಾಗಿ ಬಂದಿದ್ದಾರೆ ಎಂಬ ಶಂಕೆ ವ್ಯಕ್ತವಾಗಿತ್ತು. ಈ ಕಾರಣಕ್ಕೆ ಇಬ್ಬರನ್ನೂ ಆಂಬ್ಯುಲೆನ್ಸ್ ಮೂಲಕ ಮೆಗ್ಗಾನ್ ಆಸ್ಪತ್ರೆಗೆ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಲಾಗಿತ್ತು. ಆರೋಪ ಸಾಬೀತಾದ ಹಿನ್ನೆಲೆ ಈ ಇಬ್ಬರನ್ನು ಸೇವೆಯಿಂದ ಅಮಾನತುಗೊಳಿಸಿ ಚುನಾವಣಾಧಿಕಾರಿ ಆದೇಶ ಹೊರಡಿಸಿದ್ದಾರೆ.

By admin

ನಿಮ್ಮದೊಂದು ಉತ್ತರ

error: Content is protected !!