ಶಿವಮೊಗ್ಗ : ವಿಧಾನಸಭಾ ಚುನಾವಣೆಯ ಹೈವೋಲ್ಟೇಜ್ ಜಿಲ್ಲೆಗಳ ಪೈಕಿ ಮುಂಚೂಣಿಯಲ್ಲಿರುವ ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಘಟಾನುಘಟಿ ರಾಜಕೀಯ ನಾಯಕರು ಮತದಾನ ಮಾಡಿದರು.
- ತಾಲೂಕಿನ ಶಿಕಾರಿಪುರದಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಸಂಸದ ರಾಘವೇಂದ್ರ, ಅಭ್ಯರ್ಥಿ ವಿಜಯೇಂದ್ರ ಸೇರಿದಂತೆ ಕುಟುಂಬದ ಸದಸ್ಯರು, ಕಾರ್ಯಕರ್ತರು ಪಟ್ಟಣದ ಹುಚ್ಚೂರಾಯ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ಮತಗಟ್ಟೆಗೆ ತೆರಳಿ ಕುಟುಂಬ ಸಮೇತರಾಗಿ ಮತದಾನಮಾಡಿದರು.
- ಶಿವಮೊಗ್ಗ ನಗರದ ಬಿಜೆಪಿ ಅಭ್ಯರ್ಥಿ ಚೆನ್ನಬಸಪ್ಪ ಅವರು ಇಂದು ಮುಂಜಾನೆ ಕುಟುಂಬ ಹಾಗೂ ಕಾರ್ಯಕರ್ತರ ಸಮ್ಮುಖದಲ್ಲಿ ಕೋಟೆ ಆಂಜನೇಯ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ನಂತರ ಗೋ ಪೂಜೆ ಮಾಡುವ ಮೂಲಕ ಕುಟುಂಬದ ಸಮೇತರಾಗಿ ಮತಗಟ್ಟೆಗೆ ತೆರಳಿ ಮತದಾನಮಾಡಿದರು.
- ಶಿವಮೊಗ್ಗ ಗ್ರಾಮಾಂತರ ಬಿಜೆಪಿ ಅಭ್ಯರ್ಥಿ ಶ ಕೆ.ಬಿ. ಅಶೋಕ ನಾಯ್ಕ ರವರು ಹಸೂಡಿ ಗ್ರಾಮದ ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಮತಗಟ್ಟೆ ಸಂಖ್ಯೆ 207 ರಲ್ಲಿ ಸರತಿ ಸಾಲಿನಲ್ಲಿ ನಿಂತು ತಮ್ಮ ಕುಟುಂಬ ಸಮೇತರಾಗಿ ಮತ ಚಲಾಯಿಸಿದರು.
- ತೀರ್ಥಹಳ್ಳಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕಿಮ್ಮನೆ ರತ್ನಾಕರ್, ಬಿಜೆಪಿ ಅಭ್ಯರ್ಥಿ ಆರಗ ಜ್ಞಾನೇಂದ್ರ ಮತದಾನ ಮಾಡಿದರು