ಹೊಸನಗರ: ಮೊಬೈಲ್ ನಂಬರ್ ಕೊಡುವಂತೆ ಅಪ್ರಾಪ್ತೆಗೆ ಪೀಡಿಸಿದ ಹಿನ್ನೆಲೆಯಲ್ಲಿ ಇಬ್ಬರು ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಲಕಿಯು ಶಾಲಾ ರಜೆ ಹಿನ್ನಲೆಯಲ್ಲಿ ಕಾಸರಗೋಡು ಜಿಲ್ಲೆಯಲ್ಲಿರುವ ತನ್ನ ಸ್ವಂತ ಊರಿನಿಂದ ಜಯನಗರ ಸಂಬಂಧಿಕರ ಮನೆಗೆ ಆಗಮಿಸಿದ್ದು ಅಲ್ಲಿಂದ ಹೊಸನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿರುವ ತನ್ನ ಅಜ್ಜಿ ಮನೆಗೆ ಬಂದಿದ್ದಳು. ಪಟ್ಟಣದ ಚರ್ಚ್‌ನಲ್ಲಿ ತನ್ನ ತಂಗಿ ಹಾಗೂ ಅಜ್ಜಿಯ ಜೊತೆ ಪ್ರಾರ್ಥನೆ ಸಲ್ಲಿಸಲು ಹೋಗಿದ್ದು, ಮರಳಿ ಮನೆಗೆ ಜಯನಗರಕ್ಕೆ ಹೋಗುವಾಗ ಹೊಸನಗರದ ಬಸ್ ಸ್ಟ್ಯಾಂಡ್ ಬಳಿ ಘಟನೆ ನಡೆದಿದೆ.

ಬೈಕ್ ನಲ್ಲಿ ಬಂದ ಆರೋಪಿಗಳು ಬಾಲಕಿಯರನ್ನು ಎರಡು ಬಾರಿ ಅಡ್ಡಗಟ್ಟಿ ಮೊಬೈಲ್ ನಂಬರ್ ಕೇಳಿದ್ದು ಅಲ್ಲದೇ, ಭೇಟಿ ಮಾಡುವಂತೆ ಒತ್ತಾಯಿಸಿದ್ದಾರೆ. ಬಸ್ ನಿಲ್ದಾಣದವರೆಗೂ ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಬಂದಿದ್ದಾರೆ ಎಂದು ದೂರಿನಲ್ಲಿ ಆಪಾದಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ಪೋಕ್ಸೋ ಕಾಯ್ದೆಯಡಿ ಬಂಧಿಸಿ ವಿಚಾರಣೆ ಕೈಗೊಂಡಿದ್ದಾರೆ.

By admin

ನಿಮ್ಮದೊಂದು ಉತ್ತರ

error: Content is protected !!