ಶಿವಮೊಗ್ಗ: ತೀರ್ಥಹಳ್ಳಿ ತಾಲ್ಲೂಕಿನ, ಕುರುವಳ್ಳಿ ಪುತ್ತಿಗೆ ಮಠದ ಬಳಿಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ವಿಶ್ವಕರ್ಮ ಸಮುದಾಯ ಭವನದಲ್ಲಿ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಸ್ಥಳಕ್ಕೆ ತೀರ್ಥಹಳ್ಳಿ ಪೊಲೀಸ್ ಸ್ಟೇ?ನ್ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಮೂಲಗಳ ಪ್ರಕಾರ, ಕೊಲೆಯಾದವರು ದಾವಣಗೆರೆ ಜಿಲ್ಲೆ ಕಾರ್ಮಿಕರು ಎನ್ನಲಾಗಿದೆ. ಮಂಜಪ್ಪ (೪೫) ಬೀರಪ್ಪ (೪೬) ಮೃತರು.
ನಿನ್ನೆ ರಾತ್ರಿ ನಡೆದ ಗಲಾಟೆ, ಕೊಲೆಯಲ್ಲಿ ಅಂತ್ಯವಾಗಿರುವ ಬಗ್ಗೆ ಅನುಮಾನ ವ್ಯಕ್ತವಾಗಿದ್ದು, ರಾಜಪ್ಪ ಎಂಬವರನ್ನ ವಶಕ್ಜೆ ಪಡೆಯಲಾಗಿದೆ.
ಕೆಲವೇ ದಿನದಲ್ಲಿ ಸಮುದಾಯ ಭವನ ಉದ್ಘಾಟನೆಯಾಗಬೇಕಿದ್ದು,
ಅದರ ನಡುವೆ ಸಮುದಾಯದ ಭವನದಲ್ಲಿ ಈ ಘಟನೆ ನಡೆದಿದೆ. ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಸಾಧ್ಯತೆ ಇದ್ದು, ಸ್ಥಳದಲ್ಲಿ ಪೊಲೀಸರು ಮಹಜರ್ ನಡೆಸಿದ್ದಾರೆ.