ಶಿವಮೊಗ್ಗ,ಅ.18:
ಶಿವಮೊಗ್ಗ ಜಿಲ್ಲೆಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು ಆಗಮಿಸಿದ್ದು, ಮೂರು ದಿನಗಳ ಕಾಲ ತವರಿನಲ್ಲಿ ನಡೆಯಲಿರುವ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಇಂದು ಮಧ್ಯಾಹ್ನ ಶಿಕಾರಿಪುರ ಹೆಲಿಪ್ಯಾಡ್ ನಲ್ಲಿ ಯಡಿಯೂರಪ್ಪ ಅವರಿಗೆ ಜಿಲ್ಲಾಡಳಿತ ಹಾಗೂ ಬಿಜೆಪಿ ಪ್ರಮುಖರು ಭವ್ಯ ಸ್ವಾಗತ ನೀಡಿದರು.
ಈ ಸಮಯದಲ್ಲಿ ಮಾದ್ಯಗಳೊಂದಿಗೆ ಮಾತನಾಡಿದ ಅವರು ತಾಯಿ ನೆಲೆಸಿರುವ ಸಿಗಂಧೂರಿನಲ್ಲಿ ನಡೆದ ಘಟನೆ ಯಾರಿಗೂ ಶೋಭೆ ತರುವಂತಹುದಲ್ಲ. ಈ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಹಾಗೂ ಮುಖಂಡರೊಂದಿಗೆ ಮಾತನಾಡಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.
ನಾಳೆ ನಡೆಯುವ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿರುವ ಸಿಎಂರವರು ಸಿಗಂದೂರು ಘಟನೆ ಅತ್ಯಂತ ಬೇಸರ ಮೂಡಿಸಿದೆ.
ಸಿಗಂಧೂರಿನ ದೇವಸ್ಥಾನವನ್ನ ಮುಜರಾಯಿ ಇಲಾಖೆಗೆ ಸೇರಿಸಬೇಕೆಂಬ ಕೂಗು ಹೆಚ್ಚಾಗಿದೆ. ಮೊನ್ನೆ ಗಲಾಟೆ ನಡೆದಿದೆ ಈ ಬಗ್ಗೆ ಸರ್ಕಾರದ ನಿಲುವು ಏನು ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು ಈ ಘಟನೆ ಗಮನಕ್ಕೆ ಬಂದಿದೆ. ನಮ್ಮ ಮುಖಂಡರಾದ ಹರತಾಳ ಹಾಲಪ್ಪ ಹಾಗೂ ಕುಮಾರ ಬಂಗಾರಪ್ಪ ಹಾಗೂ ಇತರರೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ಬರುವ ಉಪಚುನಾವಣೆಯಲ್ಲಿ ಬಿಜೆಪಿ ನಿಚ್ಚಳ ಬಹುಮತ ಸಾಧಿಸಲಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಶಕ್ತಿ ಮೀರಿ ನೆರೆ ಸಂತ್ರಸ್ತರಿಗೆ ಪರಿಹಾರ ತಲುಪಿಸುವುದು. ರೈತ ಬೆಳೆದ ಬೆಳೆಗಳಿಗೆ ವೈಜ್ಞಾನಿಕ ಬೆಲೆ ಕೊಡಿಸುವುದು ಹಾಗೂ ರೈತರ ಹಿತ ಕಾಪಾಡುವಿದು ಮುಖ್ಯ ಆಶಯವಾಗಿದೆ ಎಂದರು.
ಸಂದರ್ಭದಲ್ಲಿ ಸಂಸದ ಬಿವೈ ರಾಘವೇಂದ್ರ ಎಂಎಡಿಬಿ ಅಧ್ಯಕ್ಷ ಗುರುಮೂರ್ತಿ, ಸುಭಾಷ್, ಜಿಲ್ಲಾಧಿಕಾರಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.