ಅತಿವೃಷ್ಟಿಯಿಂದ ತೊಂದರೆಗೆ ಒಳಗಾಗಬಹುದಾದ ಪ್ರದೇಶಗಳನ್ನು ಮೊದಲೇ ಗುರುತಿಸಿ ಮುಂಜಾ ಗರೂಕತಾ ಕ್ರಮಗಳನ್ನು ಕೈಗೊಳ್ಳ ಬೇಕು ಎಂದು ಜಿಲ್ಲಾಧಿಕಾರಿ ಆರ್. ಸೆಲ್ವಮಣಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಪ್ರಕೃತಿ ವಿಕೋಪ ನಿರ್ವಹಣೆ ಕುರಿತಾಗಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ವಿಡಿಯೋ ಕಾನ್ಫರೆನ್ಸ್ ಬಳಿಕ ಜಿಲ್ಲಾ ಮಟ್ಟದ ಅಧಿಕಾರಿ ಗಳಿಗೆ ಈ ಕುರಿತು ಸೂಚನೆಗಳನ್ನು ನೀಡಿದರು.
ಮುಖ್ಯವಾಗಿ ನಗರ ಪ್ರದೇಶ ಗಳಲ್ಲಿ ಅತಿವೃಷ್ಟಿಯಿಂದ ನೀರು ನುಗ್ಗಬಹುದಾದ ತಗ್ಗು ಪ್ರದೇಶ ಗಳನ್ನು ಗುರುತಿಸಿ ಸೂಕ್ತ ಚರಂಡಿ ವ್ಯವಸ್ಥೆ ಇತ್ಯಾದಿ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಎಲ್ಲಾ ಚರಂಡಿಗಳನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿ ಕೃತಕ ನೆರೆ ಉಂಟಾ ಗದಂತೆ ಕ್ರಮ ಕೈಗೊಳ್ಳಬೇಕು. ಪ್ರಮುಖ ಕಾಲುವೆಗಳ ಹೂಳೆತ್ತುವ ಕಾರ್ಯವನ್ನು ಕೈಗೊಳ್ಳಬೇಕು ಎಂದು ಹೇಳಿದರು.
ಕಂಟ್ರೋಲ್ ರೂಂ: ಎಲ್ಲಾ ತಾಲೂಕುಗಳಲ್ಲಿ ಅತಿವೃಷ್ಟಿಗೆ ಸಂಬಂಧಿಸಿದಂತೆ ತುರ್ತು ನೆರವು, ಕ್ರಮಗೊಳ್ಳಲು ಅನುಕೂ ಲವಾಗುವಂತೆ ೨೪*೭ ನಿಯಂತ್ರಣ ಕೊಠಡಿಗಳನ್ನು ತಕ್ಷಣ ಆರಂಭಿ ಸಬೇಕು. ಅತಿ ಹೆಚ್ಚು ಮಳೆಯಾಗುವ ಕುರಿತಾದ ಮುನ್ಸೂಚನೆಗಳನ್ನು ಆಯಾ ಪ್ರದೇಶದ ಜನರಿಗೆ ಮೊದಲೇ ತಿಳಿಸಿ ಅಗತ್ಯ ಮುನ್ನೆ ಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಪ್ರವಾಹ ಪರಿಸ್ಥಿತಿಯಲ್ಲಿ ರಕ್ಷಣಾ ಕಾರ್ಯಾಚರಣೆ ಕೈಗೊಳ್ಳಲು ಅಗ್ನಿಶಾಮಕ ದಳ, ಹೋಂ ಗಾರ್ಡ್ಗಳು ಸನ್ನದ್ಧ ಸ್ಥಿತಿಯಲ್ಲಿ ರಬೇಕು. ಎಲ್ಲಾ ತಾಲೂಕುಗಳಿಗೆ ಈಗಾಗಲೇ ರಕ್ಷಣಾ ಬೋಟ್ ಗಳನ್ನು ನೀಡಲಾಗಿದ್ದು ಅವುಗಳ ಕಾರ್ಯ ಕ್ಷಮತೆಯನ್ನು ಪರಿಶೀಲಿ ಸಬೇಕು. ಅತಿವೃಷ್ಟಿಯಿಂದ ಯಾವುದೇ ಸಣ್ಣ ಅನಾಹುತ ವಾಗದಂತೆ ಗರಿಷ್ಟ ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.
ಸಾಂಕ್ರಾಮಿಕ ರೋಗ ತಡೆ: ಮಳೆಗಾಲದಲ್ಲಿ ಸಾಮಾನ್ಯವಾಗಿ ಕಾಣಿಸಿಕೊಳ್ಳುವ ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು. ಎಲ್ಲಾ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿ ದಾಸ್ತಾನು ಖಾತ್ರಿಪಡಿಸಬೇಕು. ಹಾವು ಕಡಿತದ ಇಂಜೆಕ್ಷನ್ ಲಭ್ಯವಿರುವಂತೆ ನೋಡಿ ಕೊಳ್ಳಬೇಕು. ಎಲ್ಲಾ ವೈದ್ಯಾಧಿ ಕಾರಿಗಳು ಕಡ್ಡಾಯವಾಗಿ ಆಸ್ಪತ್ರೆU ಳಲ್ಲಿ ಲಭ್ಯವಿರಬೇಕು ಎಂದು ಹೇಳಿದರು.
ಗಾಳಿ ಮಳೆಯಿಂದಾಗಿ ಮರ ಗಳು ಬಿದ್ದ ಸಂದರ್ಭದಲ್ಲಿ ತಕ್ಷಣ ಅವುಗಳನ್ನು ತೆರವುಗೊಳಿಸಿ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಬೇಕು. ರಸ್ತೆ ಸಂಪರ್ಕ ಕಡಿತವಾಗುವ ಸಂದರ್ಭದಲ್ಲಿ ಪರ್ಯಾಯ ಮಾರ್ಗ ಗಳನ್ನು ತಕ್ಷಣ ಕಲ್ಪಿಸ ಬೇಕು. ವಿದ್ಯುತ್ ಕಂಬಗಳು ಮತ್ತು ಟ್ರಾನ್ಸ್ಫಾರ್ಮರ್ಗಳು ಮುರಿದು ಬಿದ್ದಾಗ ತಕ್ಷಣ ಅವುಗಳನ್ನು ಬದಲಾಯಿಸಿ ವಿದ್ಯುತ್ ಸಂಪರ್ಕ ಪುನರಾರಂಭಿಸಲು ವ್ಯವಸ್ಥೆ ಮಾಡಬೇಕು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ, ಅಪರ ಜಿಲ್ಲಾಧಿಕಾರಿ ಎಸ್.ಎಸ್.ಬಿರಾದಾರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವಶಂಕರ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಮುಖ್ಯಮಂತ್ರಿ ಸೂಚನೆ: ಅತಿವೃಷ್ಟಿಯಿಂದ ಅನಾಹುತ ಸಂಭವಿಸುವ ಮೊದಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಅನಾಹುತ ಸಂಭವಿಸಬಹುದಾದ ಶಾಲಾ ಕೊಠಡಿಗಳು, ಸೇತುವೆಗಳನ್ನು ಗುರುತಿಸಿ ಪರ್ಯಾಯ ವ್ಯವಸ್ಥೆಗಳನ್ನು ಕಲ್ಪಿಬೇಕು. ಜಾನುವಾರು ಹಾನಿ ಮತ್ತು ಮಾನವ ಪ್ರಾಣ ಹಾನಿ ಸಂಭವಿಸಿದ ತಕ್ಷಣ ಸೂಕ್ತ ಪರಿಹಾರವನ್ನು ಒದಗಿಸಬೇಕು. ಪ್ರಕೃತಿ ವಿಕೋಪ ಕಾರ್ಯಗಳಿಗೆ ಸಾಕಷ್ಟು ಅನುದಾನ ಲಭ್ಯವಿದೆ ಎಂದು ಮುಖ್ಯಮಂತ್ರಿ ಅವರು ವಿಡಿಯೋ ಕಾನ್ಫರೆನ್ಸ್ನಲ್ಲಿ ಸೂಚನೆಗಳನ್ನು ನೀಡಿದರು.