ಶಿವಮೊಗ್ಗ
       2021 ನೇ ಸಾಲಿನ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳು ನಡೆಯಲಿದ್ದು ಜಿಲ್ಲೆಯಲ್ಲಿ ಶಾಂತಿಯುತವಾಗಿ ಪರೀಕ್ಷೆ ನಡೆಯಲು ಅಗತ್ಯವಾದ ಸಕಲ ಸಿದ್ದತೆ ಮಾಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಸೂಚಿಸಿದರು.
     ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಇಲಾಖಾ ಪರೀಕ್ಷೆಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು


    ನಗರದ ಕರ್ನಾಟಕ ಪಬ್ಲಿಕ್ ಸ್ಕೂಲ್, ಸರ್ಕಾರಿ ಪಿಯು ಕಾಲೇಜು, ಸಹ್ಯಾದ್ರಿ ವಾಣಿಜ್ಯ ಕಾಲೇಜು ಮತ್ತು ಸರ್ಕಾರಿ ಬಾಲಕಿಯರ ಪಿಯು ಕಾಲೇಜು ಒಟ್ಟು 04 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ. ಪರೀಕ್ಷೆಗಳು ಜೂನ್ 09 ರಿಂದ 11 ಮತ್ತು ಜೂನ್ 26 ರಿಂದ ಜುಲೈ 09(29-06-2023 ರಿಂದ 03-07-2023 ರ ದಿನಗಳನ್ನು ಹೊರತುಪಡಿಸಿ) ರವರೆಗೆ ನಡೆಯಲಿವೆ.


    ಈಗಾಗಲೇ ಸ್ಥಳೀಯ ನಿರೀಕ್ಷಣಾಧಿಕಾರಿ, ವೀಕ್ಷಕರು ಮತ್ತು ಮಾರ್ಗಾಧಿಕಾರಿಗಳನ್ನು ನೇಮಿಸಿ ಪರೀಕ್ಷೆ ಸಂಬಂಧ ಅನುಸರಿಸಬೇಕಾದ ಮಾರ್ಗಸೂಚಿ ಮತ್ತು ಸೂಚನೆಗಳನ್ನು ನೀಡಲಾಗಿದೆ. ಪರೀಕ್ಷಾ ಅವಧಿಯಲ್ಲಿ ಯಾವುದೇ ರೀತಿಯ ಅವ್ಯವಹಾರ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಪ್ರತಿ ಕೇಂದ್ರಗಳಿಗೂ ಇಬ್ಬರಂತೆ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ.


     ಪರೀಕ್ಷಾರ್ಥಿಗಳಿಗೆ ಸೂಕ್ತ ಆಸನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು ಅಭ್ಯರ್ಥಿಗಳು ಮೊಬೈಲ್, ಎಲೆಕ್ಟ್ರಾನಿಕ್ ವಸ್ತುಗಳನ್ನು ಪರೀಕ್ಷಾ ಕೇಂದ್ರಕ್ಕೆ  ತರುವಂತಿಲ್ಲ ಎಂದು ಸೂಚನೆ ನೀಡಿದರು.
    ಪರೀಕ್ಷಾ ದಿನಗಳಂದು ಯಾವುದೇ ಅಹಿತರ ಘಟನೆಗಳಿಗೆ ಅವಕಾಶ ನೀಡದಂತೆ ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀ.ಫಾಸಲೆಯವರೆಗೆ ಬೆಳಿಗ್ಗೆ 8 ರಿಂದ ಸಂಜೆ 5.30 ರವರೆಗೆ ಸಿಆರ್‍ಪಿಸಿ ಸೆಕ್ಷನ್ 144 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಲಾಗಿದೆ.


     ಪರೀಕ್ಷೆಗೆ ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಂಡು ಯಾವುದೇ ರೀತಿಯ ಗೊಂದಲಗಳಿಗೆ ಒಳಗಾಗದೇ, ಶಾಂತಿಯುತವಾಗಿ ಪರೀಕ್ಷೆಗಳನ್ನು ನಡೆಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.


     ಸಭೆಯಲ್ಲಿ ಡಯಟ್ ಪ್ರಾಂಶುಪಾಲರಾದ ಬಸವರಾಜಪ್ಪ, ಜಿಲ್ಲಾ ಖಜನಾಧಿಕಾರಿ ಸಾವಿತ್ರಿ, ಪಶುಪಾಲನಾ ಇಲಾಖೆ ಉಪನಿರ್ದೇಶಕ ಡಾ.ಶಿವಯೋಗಿ ಯಲಿ, ಸೈನಿಕ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಡಾ.ಸಿ.ಎ.ಹಿರೇಮಠ ಇತರೆ ಅಧಿಕಾರಿಗಳು ಹಾಜರಿದ್ದರು.

By admin

ನಿಮ್ಮದೊಂದು ಉತ್ತರ

error: Content is protected !!