ಶಿವಮೊಗ್ಗ : ಸಮಾಜ ಕಲ್ಯಾಣ ಇಲಾಖೆಯು ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ಎರಡು ವರ್ಷಗಳ ತರಬೇತಿ ನೀಡಲು ಉದ್ದೇಶಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು .

ಆಹ್ವಾನಿಸಲಾಗಿದೆ.
ತರಬೇತಿ ಪಡೆಯಲಿಚ್ಚಿಸುವ ಅಭ್ಯರ್ಥಿಗಳು ಶಿವಮೊಗ್ಗ ಜಿಲ್ಲೆಯವರಾಗಿದ್ದು, ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು. ಕಾನೂನು ಪದವಿ ಪಡೆದು 2ವರ್ಷ ಮೀರಿರಬಾರದು. ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ

ಮಾಹೆಯಾನ ರೂ.10,000/-ಗಳ ಶಿಷ್ಯವೇತನ ನೀಡಲಾಗುವುದು.
ಆಸಕ್ತರು ತಮ್ಮ ಅರ್ಜಿಯನ್ನು ಸಮಾಜ ಕಲ್ಯಾಣ ಇಲಾಖೆಯ ಜಾಲತಾಣ www.sw.kar.nic.in ಗೆ ಭೇಟಿ ನೀಡಿ ಜುಲೈ 15 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


ಹೆಚ್ಚಿನ ವಿವರಗಳಿಗಾಗಿ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಪೃಥ್ವಿ ಮ್ಯಾನ್ಶನ್, ನೂರಡಿ ರಸ್ತೆ, ವಿನೋಬನಗರ, ಶಿವಮೊಗ್ಗ. ದೂರವಾಣಿ ಸಂಖ್ಯೆ 08182-249241ನ್ನು ಸಂಪರ್ಕಿಸುವುದು.

By admin

ನಿಮ್ಮದೊಂದು ಉತ್ತರ

error: Content is protected !!