ಚುನಾವಣೆಗೆ ಮುನ್ನ ಕಾಂಗ್ರೆಸ್ ಪಕ್ಷ ನೀಡಿದ್ದ ಐದು ಗ್ಯಾರಂಟಿಗಳ ಪೈಕಿ ಮಹಿಳೆ ಯರ ಸಬಲೀಕರಣಕ್ಕೆ ಸಹಕಾರಿಯಾಗ ಲಿರುವ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಚಾಲನೆ ನೀಡಿರುವ ಸರ್ಕಾರಕ್ಕೆ ಜಿಲ್ಲಾಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಅಭಿನಂದಿಸಿದರು.
ಅವರು ಇಂದು ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಯೋಜನೆಗೆ ಚಾಲನೆ ನೀಡಿದ ಮುಖ್ಯ ಮಂತ್ರಿ ಸಿದ್ದರಾಮಯ್ಯ, ಉಪಮಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹಾಗೂ ಸಚಿವರಿಗೆ ಅಭಿನಂದಿಸಿದರು.


ಆರ್ಥಿಕವಾಗಿ ಸಂಕಷ್ಟಕ್ಕೀಡಾದವರಿಗೆ, ನಿರುದ್ಯೋಗಿಗಳಿಗೆ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ವರಿಷ್ಠ ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ ಅವರು, ರಾಜ್ಯಾದ್ಯಂತ ಪ್ರವಾಸ ಮಾಡಿ, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಭರವಸೆ ನೀಡಿದಂತೆ ಎಲ್ಲಾ ಗ್ಯಾರಂಟಿಗಳನ್ನು ಜಾರಿಗೆ ತರುತ್ತೇವೆ ಎಂದು ಭರವಸೆ ನೀಡಿ ದ್ದರು. ಅದರಂತೆ ಮೊದಲ ಭರವಸೆಯಾಗಿ ಶಕ್ತಿ ಯೋಜನೆಗೆ ಚಾಲನೆ ನೀಡಲಾಗಿದೆ ಎಂದರು.


ಗ್ಯಾರಂಟಿ ಭರವಸೆಯಂತೆ ಗೃಹ ಜ್ಯೋತಿ ಯೋಜನೆ ಆ.೧ರಿಂದ ಜಾರಿಗೆ ಬರಲಿದ್ದು, ಈಗಾಗಲೇ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಯೋಜನೆಯ ಲಾಭ ಪಡೆಯುವ ಬಗ್ಗೆ ಹಲವಾರು ಸೂಚನೆಗಳನ್ನು ನೀಡಿದ್ದಾರೆ. ಅದರಂತೆ ರಾಜ್ಯದ ಎಲ್ಲಾ ಗೃಹಬಳಕೆದಾರರಿಗೆ ಈ ಯೋಜನೆಯ ಲಾಭ ಸಿಗಲಿದೆ ಎಂದರು.
ಗೃಹಲಕ್ಷ್ಮಿ ಯೋಜನೆಯಂತೆ ಪ್ರತಿ ಮನೆಯ ಯಜಮಾನಿಗೆ ೨೦೦೦ರೂ. ಪ್ರತಿ ತಿಂಗಳು ಸಿಗಲಿದೆ. ಈ ಯೋಜನೆ ಆ. ೧೫ರಿಂದ ಜಾರಿಗೆ ಬರುವ ಸಾಧ್ಯತೆ ಇದೆ ಎಂದರು.


ಕಾಂಗ್ರೆಸ್ ನೀಡಿದ್ದ ಗ್ಯಾರಂಟಿ ಯೋಜ ನೆಗಳ ಬಗ್ಗೆ ಬಿಜೆಪಿ ಜನರಿಗೆ ದಾರಿ ತಪ್ಪಿಸುವ ಕೆಲಸವನ್ನು ಪ್ರತಿನಿತ್ಯ ಮಾಡುತ್ತಾ ಬ್ರೇಕ್ ಹಾಕಲು ಯತ್ನಿಸುತ್ತಿದೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಂದಲ್ಲಿ ಮೋದಿಯವರು ಪ್ರತಿಯೊಬ್ಬನ ಬ್ಯಾಂಕ್ ಅಕೌಂಟ್‌ಗೆ ೧೫ ಲಕ್ಷ ರೂ. ಹಾಗೂ ಪ್ರತಿ ವರ್ಷ ೨ಕೋಟಿ ಉದ್ಯೋಗ ಸೃಷ್ಟಿ ಸೇರಿದಂತೆ ಹಲವಾರು ಭರವಸೆಗಳನ್ನು ನೀಡಿದ್ದು, ಯಾವುದೇ ಭರವಸೆಯನ್ನು ಇದುವರೆಗೆ ಈಡೇರಿಸಿಲ್ಲ. ಈ ಬಗ್ಗೆ ರಾಜ್ಯದ ಬಿಜೆಪಿ ಸಂಸದರು ಮಾತನಾಡುತ್ತಿಲ್ಲ. ಹೀಗಾಗಿ ಬಿಜೆಪಿಗೆ ರಾಜ್ಯ ಸರ್ಕಾರದ ಯೋಜನೆಗಳ ಜಾರಿ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ ಎಂದ ಅವರು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಯಾವ ಮುಖ ಇಟ್ಟುಕೊಂಡು ಮತದಾರರಲ್ಲಿ ಮತ ಯಾಚಿಸುತ್ತಾರೆ ಎಂದು ಟೀಕಿಸಿದ ಅವರು, ನೀಡಿದ್ದ ಭರವಸೆಗಳು ಏನಾದವು ಎಂಬ ಬಗ್ಗೆ ರಾಜ್ಯದ ಬಿಜೆಪಿ ಸಂಸದರ ವಿರುದ್ಧ ಅಭಿಯಾನವನ್ನು ಜಿಲ್ಲೆಯಿಂದಲೇ ಆರಂಭಿಸಲಾಗುವುದು ಎಂದರು.


ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಅವರು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರಾಗಿದ್ದು, ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆ ತರಬೇಕಾ ಗಿದೆ. ಹಿಂದಿನ ಬಿಜೆಪಿ ಸರ್ಕಾರದಲ್ಲಿ ಪಠ್ಯ ಪುಸ್ತಕದಲ್ಲಿ ಭಾರೀ ವ್ಯತ್ಯಾಸಗಳಿದ್ದು, ಇದನ್ನು ಮರು ಪರಿಷ್ಕರಣೆ ಮಾಡಿ ಸಚಿವರು ಸರ್ಕಾರಿ ಶಾಲೆಗಳನ್ನು ಹೈಟೆಕ್ ಮಾಡಲು ಯತ್ನಿಸಬೇಕು ಎಂದು ಮನವಿ ಮಾಡಿಕೊಂಡರು.


ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಸಿಬ್ಬಂದಿಗಳ ಮೇಲೆ ಬಹಳಷ್ಟು ಆರೋಪಗಳಿವೆ. ಇವುಗಳ ಬಗ್ಗೆ ಆರೋಗ್ಯ ಸಚಿವರ ಗಮನಕ್ಕೆ ತರಲಾಗಿದೆ. ಹಾಗೂ ಆಸ್ಪತ್ರೆಯ ಅಭಿವೃದ್ಧಿ ಬಗ್ಗೆ ಗಮನಕ್ಕೆ ತರಲಾಗಿದೆ. ಸಚಿವರು ಆಸ್ಪತ್ರೆ ಸುಧಾರಣೆ ತರಲಿದ್ದಾರೆ ಎಂಬ ಭರವಸೆ ಇದೆ ಎಂದರು.
ಎಲ್ಲಾ ಇಲಾಖೆಗಳ ಸಚಿವರು ಜಿಲ್ಲೆಯ ಪ್ರವಾಸ ಮಾಡಿ, ಇಲಾಖೆಗಳಲ್ಲಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ ಪಾರದರ್ಶಕ ಆಡಳಿತ ತರುವುದರ ಜೊತೆಗೆ ಸುಧಾರಣೆ ತರಬೇಕು ಎಂದರು.


ಪತ್ರಿಕಾಗೋಷ್ಠಿಯಲ್ಲಿ ಪಾಲಿಕೆ ಸದಸ್ಯರಾದ ರೇಖಾ ರಂಗನಾಥ್, ಮೆಹಕ್ ಶರೀಫ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಲಿಂ ಪಾಶಾ, ಪ್ರಮುಖರಾದ ಮಂಜುನಾಥ ಬಾಬು, ತಿಮ್ಮರಾಜ್, ಚಂದನ್ ಮತ್ತಿತರರು ಉಪಸ್ಥಿತರಿದ್ದರು.

By admin

ನಿಮ್ಮದೊಂದು ಉತ್ತರ

You missed

error: Content is protected !!