ಶಿವಮೊಗ್ಗ,ಜೂ.15 :
ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಮೃತಮಹೋತ್ಸವ ಸಮಾರೋಪ ಸಮಾರಂಭವನ್ನು ಜೂ.20,21 ರಂದು ಎರಡು ದಿನಗಳ ಎನ್ಇಎಸ್ ಮೈದಾನದಲ್ಲಿ ಏರ್ಪಡಿಸಲಾಗಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣರಾವ್ ಸುದ್ದಿಗೋಷ್ಟಿಯಲ್ಲಿ ವಿವರಿಸಿದರು.
ಜೂ.20 ರಂದು ಬೆಳಗ್ಗೆ 10:00 ಗಂಟೆಗೆ ಅಮೃತ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ವಿವಿಧ ವಿದ್ಯಾಸಂಸ್ಥೆಗಳಲ್ಲಿ ರ್ಯಾಂಕ್ ವಿಜೇತ ವಿದ್ಯಾರ್ಥಿಗಳಿಗೆ ಅಭಿನಂದಿಸಲಾಗುತ್ತಿದೆ. ಕಾರ್ಯಕ್ರಮವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪ ಉದ್ಘಾಟಿಸಲಿದ್ದು, ‘ಜೀವನವೇ ಹಾಸ್ಯ’ ಕುರಿತು ಖ್ಯಾತ ಹಾಸ್ಯ ಭಾಷಣಕಾರರಾದ ಗಂಗಾವತಿ ಪ್ರಾಣೇಶ್ ಹಾಸ್ಯ ಲಹರಿ ಹರಿಸಲಿದ್ದಾರೆ.
ಅಂದು ಸಂಜೆ 04:00 ಗಂಟೆಯಿಂದ ನಡೆಯುವ ಸಾಂಸ್ಕೃತಿಕ ಸೌರಭ ಕಾರ್ಯಕ್ರಮದಲ್ಲಿ ನೂತನ ಶಾಸಕರಾದ ಎಸ್.ಎನ್.ಚನ್ನಬಸಪ್ಪ ಅವರಿಗೆ ಅಭಿನಂದಿಸಲಾಗುತ್ತಿದೆ. ಖ್ಯಾತ ಚಲನಚಿತ್ರ ನಟ ವಸಿಷ್ಠ ಸಿಂಹ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ವಿವಿಧ ವಿದ್ಯಾಸಂಸ್ಥೆಗಳ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ನೀಡಲಿದ್ದಾರೆ.
ಜೂ.21 ರಂದು ಬೆಳಗ್ಗೆ 10:00 ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ಧರ್ಮಸ್ಥಳ ಧರ್ಮಾಧಿಕಾರಿಗಳಾದ ರಾಜರ್ಷಿ ಡಾ.ವೀರೇಂದ್ರ ಹೆಗ್ಗಡೆಯವರು ಸಮಾರೋಪ ಮಾತುಗಳನ್ನಾಡಲಿದ್ದಾರೆ. ಎನ್.ಇ.ಎಸ್ ಅಧ್ಯಕ್ಷರಾದ ಜಿ.ಎಸ್.ನಾರಾಯಣರಾವ್ ಅಧ್ಯಕ್ಷತೆ ವಹಿಸಲಿದ್ದು, ಉಪಾಧ್ಯಕ್ಷರಾದ ಸಿ.ಆರ್.ನಾಗರಾಜ, ಕಾರ್ಯದರ್ಶಿಗಳಾದ ಎಸ್.ಎನ್.ನಾಗರಾಜ, ಸಹ ಕಾರ್ಯದರ್ಶಿಗಳಾದ ಡಾ.ಪಿ.ನಾರಾಯಣ್, ಖಜಾಂಚಿಗಳಾದ ಡಿ.ಜಿ.ರಮೇಶ್ ಉಪಸ್ಥಿತರಿರುವರು.
—————————————————————————-
ಮಕ್ಕಳಿಂದ ಅಮೃತ ನಡಿಗೆ : ಜೂ.17 ರಂದು ಬೆಳಗ್ಗೆ 10:00 ಶಿವಮೊಗ್ಗ ನಗರದ ವಿವಿಧ ಭಾಗಗಳಿಂದ ನಮ್ಮ ವಿದ್ಯಾಸಂಸ್ಥೆಗಳ ಮಕ್ಕಳಿಂದ ಅಮೃತ ನಡಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಿವಿಧ ಭಾಗಗಳಿಂದ ಹೊರಟ ನಡಿಗೆ ಶ್ರೀನಿಧಿ ವೃತ್ತದ ಮೂಲಕ ಎನ್ಇಎಸ್ ಮೈದಾನ ತಲುಪಲಿದೆ ಎಂದು ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾಹಿತಿ ನೀಡಿದರು.
—————————————————————————-
ಎನ್ಇಎಸ್ ಎಕ್ಸಪೊ : ಎನ್ಇಎಸ್ ಸಂಸ್ಥೆ ವಿವಿಧ ವಿಭಾಗಗಳ ಸುಮಾರು 36 ವಿದ್ಯಾಸಂಸ್ಥೆಗಳನ್ನು ಹೊಂದಿದ್ದ, ಎಲ್ಲಾ ವಿದ್ಯಾಸಂಸ್ಥೆಗಳನ್ನು ಪರಿಚಯಿಸುವ ಎಕ್ಸಪೊ ಮತ್ತು ವಿದ್ಯಾರ್ಥಿಗಳ ನಾವೀನ್ಯ ಯೋಜನೆಗಳ ಪ್ರದರ್ಶನ ನಡೆಯಲಿದೆ
ಸುದ್ದಿಗೋಷ್ಟಿಯಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿ ಸಹಕಾರ್ಯದರ್ಶಿ ಡಾ.ಪಿ.ನಾರಾಯಣ್, ಖಜಾಂಚಿಗಳಾದ ಡಿ.ಜಿ.ರಮೇಶ್, ನಿರ್ದೇಶಕರಾದ ಟಿ.ಆರ್.ಅಶ್ವಥನಾರಾಯಣ ಶೆಟ್ಟಿ, ಎನ್.ಟಿ.ನಾರಾಯಣರಾವ್, ಮಾಧುರಾವ್, ಎಂ.ಆರ್.ಸೀತಾಲಕ್ಷ್ಮೀ, ಹೆಚ್.ಸಿ.ಶಿವಕುಮಾರ್, ಸುಧೀರ್.ಜಿ.ಎನ್, ಎಂ.ಎಸ್.ಅನಂತದತ್ತ, ಎಂ.ಜಿ.ರಾಮಚಂದ್ರಮೂರ್ತಿ, ಕುಲಸಚಿವರಾದ ಪ್ರೊ.ಎನ್.ಕೆ.ಹರಿಯಪ್ಪ, ಶೈಕ್ಷಣಿಕ ಆಡಳಿತಾಧಿಕಾರಿ ರಾಮಚಂದ್ರ, ಸಾರ್ವಜನಿಕ ಸಂಪರ್ಕಾಧಿಕಾರಿ ಸಿ.ಎಂ.ನೃಪತುಂಗ ಉಪಸ್ಥಿತರಿದ್ದರು.