ಕಾಂಗ್ರೆಸ್ ಸರ್ಕಾರ ಮೋಸದ ಸರ್ಕಾರ. ಗ್ಯಾರಂಟಿಗಳನ್ನು ಘೋಷಿಸಿ ಹಲವರ ಹೊಟ್ಟೆ ಮೇಲೆ ಬರೆ ಎಳೆಯುತ್ತಿದ್ದಾರೆ. ಜೊತೆಗೆ ಕಾಂಗ್ರೆಸ್ ಹಿಂದೂ ವಿರೋಧಿ ಸರ್ಕಾರವಾಗಿದೆ ಎಂದು ಮಾಜಿ ಉಪಮುಖ್ಯ ಮಂತ್ರಿ ಕೆ.ಎಸ್.ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಅವರು ಇಂದು ಸುದ್ದಿಗಾರರಂದಿಗೆ ಮಾತನಾಡಿ, ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಮತಾಂತರ ನಿಷೇಧ ಕಾಯಿದೆಯನ್ನು ವಾಪಾಸ್ ತೆಗೆದುಕೊ ಳ್ಳುವ ನಿರ್ಧಾರ ಮಾಡಿರುವುದು ಖಂಡನೀಯ. ಇದು ನಮ್ಮ ಹಿಂದೂ ಹೆಣ್ಣು ಮಕ್ಕಳಿಗೆ ತೊಂದರೆಯಾಗುತ್ತದೆ. ಲವ್ ಜಿಹಾದ್ನಂತಹ ಘಟನೆಗಳು ಹೆಚ್ಚುತ್ತವೆ. ನಿಮ್ಮ ಮನೆಯ ಹೆಣ್ಣು ಮಕ್ಕಳು ಮತಾಂತರಗೊ ಂಡರೆ ಏನು ಮಾಡುತ್ತೀರಿ. ಕೂಡಲೇ ಇಂತಹ ನಿರ್ಧಾರ ತೆಗೆದುಕೊಳ್ಳುವ ಮುನ್ನ ಎಚ್ಚರವಹಿಸಿ ಎಂದರು.
ಬಡ ಜನರಿಗೆ ೧೦ಕೆಜಿ ಅಕ್ಕಿ ಕೊಡು ವುದಾಗಿ ಭರವಸೆ ಕೊಟ್ಟು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಈಗ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಲು ಹೊರಟಿದೆ. ಇವರು ಗ್ಯಾರಂಟಿ ಕೊಡು ವಾಗ ಮೋದಿಯವರನ್ನು ಕೇಳಿದ್ದರೇನು, ಅವರು ಒಪ್ಪಿದ್ದರೇನು, ಈಗ ಕೇಂದ್ರ ಸರ್ಕಾರ ಐದು ಕೆಜಿ ಅಕ್ಕಿ ಕೊಡುತ್ತಿಲ್ಲ ಎಂದು ಹೇಳುತ್ತಿದ್ದಾರೆ. ಗ್ಯಾರಂಟಿ ಕೊಡ ಲಾಗದವರು ಇನ್ನೊಬ್ಬರ ಮೇಲೆ ಆರೋಪ ಹೊರಿಸುವುದಲ್ಲ. ಹೇಳಿದಂತೆ ಅಕ್ಕಿ ಕೊಡಿ. ಆಗದಿದ್ದರೆ ಅಷ್ಟೇ ಮೊತ್ತದ ಹಣಕೊಡಿ. ಇಲ್ಲದಿದ್ದರೆ ಬಡವರ ಶಾಪ ತಟ್ಟದೆ ಬಿಡುವುದಿಲ್ಲ ಎಂದರುವಿದ್ಯುತ್ ಉಚಿತ ಕೊಡುವುದಾಗಿ ಹೇಳಿದ ಸರ್ಕಾರ ಈಗ ಯದ್ವಾ ತದ್ವಾ ವಿದ್ಯುತ್ ದರ ಏರಿಸಿದೆ. ಇದರಿಂದ ಸಣ್ಣ ಸಣ್ಣ ಕೈಗಾರಿಕೆಗಳು ಮುಚ್ಚುವ ಹಂತಕ್ಕೆ ಬಂದಿವೆ.
ಉದ್ಯೋಗ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಈಗಾಗಲೇ ಸಣ್ಣ ಕೈಗಾರಿಕೆಗಳ ಸಂಘ ಸರ್ಕಾರವನ್ನು ಎಚ್ಚರಿಸಿದೆ ಎಂದ ಅವರು, ಪದವೀಧರರಿಗೂ ಗ್ಯಾರಂಟಿ ನೀಡಿದ ಸರ್ಕಾರ ಈ ವರ್ಷ ಪಾಸಾದವರಿಗೆ ಮಾತ್ರ ಎಂದು ಹೇಳಿದೆ. ಇದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನೆ ಮಾಡಿದರು.
ಉಚಿತ ಪ್ರಯಾಣದ ಗ್ಯಾರಂಟಿ ಕೂಡ ಹಲವರ ಬದುಕನ್ನು ಕಿತ್ತುಕೊಂಡಿದೆ. ಖಾಸಗಿ ಬಸ್ಗಳು , ಆಟೋ ಚಾಲಕರು, ಕ್ಯಾಬ್ಗಳು ಈಗ ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಅವರ ಹೊಟ್ಟೆಯ ಮೇಲೆ ಬರೆ ಹಾಕಲಾಗಿದೆ. ಹಾಗೆಯೇ ಮನೆಯ ಯಜಮಾನಿಗೆ ೨ಸಾವಿರ ಕೊಡುವುದಾಗಿ ಹೇಳಿದ್ದ ಸರ್ಕಾರ ಈಗ ಅದನ್ನು ಮುಂದೆ ಹಾಕಿದೆ. ಅರ್ಜಿ ಹಾಕಲು ಕೂಡ ಇನ್ನೂ ಆಗುತ್ತಿಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ತಿಂಗಳಿನಲ್ಲಿಯೇ ಜನರು ಗ್ಯಾರಂಟಿಯ ಗೊಂದಲದಲ್ಲಿದ್ದಾರೆ ಎಂದರು.
ಮುಂದೆ ಜಿಪಂ, ತಾಪಂ ಲೋಕಸಭಾ ಚುನಾವಣೆಗಳು ಬರುತ್ತವೆ. ಕಾಂಗ್ರೆಸ್ ಬಗ್ಗೆ ಇಟ್ಟ ನಂಬಿಕೆಗಳೆಲ್ಲಾ ಹುಸಿಯಾಗಿವೆ. ಯಾಕಾದರೂ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂತೋ ಎಂದು ಗೊಣಗುತ್ತಿದ್ದಾರೆ. ಮುಂದಿನ ಎಲ್ಲಾ ಚುನಾವಣೆಗಳಲ್ಲೂ ಬಿಜೆಪಿ ಜಯಭೇರಿ ಬಾರಿಸುತ್ತದೆ. ಕಾಂಗ್ರೆಸ್ ಮತ್ತೆ ಮನೆಗೆ ಹೋಗುತ್ತದೆ ಎಂದು ಬವಿಷ್ಯ ನುಡಿದರು.